ಬುಧವಾರ, ಜನವರಿ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಭೀಕರ ಅಪಘಾತ : ಬಸ್ ಪಲ್ಟಿಯಾಗಿ ಮೂವರು ಮಹಿಳೆಯರ ಸಾವು!

Twitter
Facebook
LinkedIn
WhatsApp
Tumkauru Bus Overturns ಭೀಕರ ಅಪಘಾತ : ಬಸ್ ಪಲ್ಟಿಯಾಗಿ ಮೂವರು ಮಹಿಳೆಯರ ಸಾವು!

ತುಮಕೂರು : ತುಮಕೂರಿನಲ್ಲಿ ಬೆಳ್ಳಂಬೆಳ್ಳಿಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಗೋವಾದಿಂದ ಬೆಂಗಳೂರಿಗೆ ಹೊರಟಿದ್ದ ಖಾಸಗಿ ಬಸ್ ಒಂದು ರಸ್ತೆ ಪಕ್ಕದಲ್ಲಿರುವ ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಮಹಿಳೆಯರು  ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಚಿಕ್ಕನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರ ಬಳಿ ಈ ಒಂದು ಅಪಘಾತ ಸಂಭವಿಸಿದೆ.

ಸೋಮವಾರ ಬೆಳಗಿನ ಜಾವ 4:15ರ ಸುಮಾರಿಗೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ. ಗೋವಾದಿಂದ ಬೆಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಚಿಕ್ಕನಹಳ್ಳಿ ಬಳಿ ನಿರ್ಮಾಣವಾಗಿರುವ ನೂತನ ಬ್ರಿಡ್ಜ್ ಮೇಲೆ ಘಟನೆ ನಡೆದಿದೆ. 

ಬಸ್‌ನಲ್ಲಿ ಒಟ್ಟು 29 ಜನ ಪ್ರಯಾಣಿಸುತ್ತಿದ್ದು, ಸುಮಾರು 10 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಗಾಯಾಳುಗಳನ್ನು ಶಿರಾ, ತುಮಕೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕಳ್ಳಂಬೆಳ್ಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

ಎಡೆಬಿಡದೇ ಸುರಿಯುತ್ತಿದೆ ಮಳೆ: ಕರ್ನಾಟಕದಾದ್ಯಂತ ಚಂಡಮಾರುತ ಪ್ರಭಾವ

ಬೆಂಗಳೂರು: ಫೆಂಗಲ್ ಚಂಡಮಾರುತ ತಮಿಳುನಾಡು, ಪುದುಚೇರಿ, ಆಂಧ್ರ ಪ್ರದೇಶಗಳಲ್ಲಿ ತಲ್ಲಣ ಸೃಷ್ಟಿಸಿದೆ. ನೆರೆಯ ರಾಜ್ಯಕ್ಕೆ ಅಪ್ಪಳಿಸಿರುವ ಚಂಡಮಾರುತದ ಪರಿಣಾಮ ಬೆಂಗಳೂರಿಗೂ ತಟ್ಟಿದೆ. ಕಳೆದ ಮೂರು ದಿನಗಳಿಂದ ಮೋಡ ಕವಿದ ವಾತಾವರಣ ಇದ್ದು, ಭಾನುವಾರ ಇಡೀ ದಿನ ಮಳೆ ಸುರಿದಿದೆ. ಭಾನುವಾರ ಮಧ್ಯಾಹ್ನದ ನಂತರವಂತೂ ಬಿಡುವುಕೊಡದೇ ಮಳೆ ಸುರಿದಿದ್ದು, ಸೋಮವಾರ ಮುಂಜಾನೆಯೂ ಮಳೆಯಾಗುತ್ತಿದೆ.

ಫೆಂಗಲ್ ಸೈಕ್ಲೋನ್​ ಪರಿಣಾಮ ಕೋಲಾರ, ಚಿಕ್ಕಬಳ್ಳಾಪುರದಲ್ಲೂ ಮಳೆಯಾಗುತ್ತಿದೆ. ಶೀತಗಾಳಿ ಬೀಸುತ್ತಿದೆ. ಮಕ್ಕಳ ಆರೋಗ್ಯದ ದೃಷ್ಟಿಯಿಂದ ಕೋಲಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ. ಹಾಗೇ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲೂ ಶಾಲೆ, ಕಾಲೇಜುಗಳಿಗೆ ಇಂದು ರಜೆ ಪ್ರಕಟಿಸಲಾಗಿದೆ. ಆದರೆ, ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳು ರಜೆ ಘೋಷಣೆ ಮಾಡಿಲ್ಲ. ಎಂದಿನಂತೆ ತರಗತಿಗಳು ನಡೆಯಲಿವೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಡಿಸಿ ಜಗದೀಶ್ ಸ್ಪಷ್ಟನೆ ನೀಡಿದ್ದಾರೆ. ಆದರೆ ಪೋಷಕರು ಎಚ್ಚರಿಕೆಯಿಂದ ಮಕ್ಕಳನ್ನ ಶಾಲೆಗೆ ಕಳುಹಿಸುವಂತೆ ಸೂಚಿಸಿದ್ದಾರೆ.

ಸೈಕ್ಲೋನ್​​ನಿಂದಾಗಿ ಮಂಗಳೂರು ಸಮುದ್ರ ತೀರದಲ್ಲಿ ಅಲೆಗಳ ಆರ್ಭಟ ಜೋರಾಗಿದೆ. ಪಣಂಬೂರು, ಉಳ್ಳಾಲ, ಸೋಮೇಶ್ವರ ಬೀಚ್​ಗಳಲ್ಲಿ ದೊಡ್ಡ ದೊಡ್ಡ ಅಲೆಗಳು ಏಳುತ್ತಿವೆ. ಉಡುಪಿಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕಡಲಲ್ಲಿ ಬೃಹತ್ ಅಲೆಗಳು ಏಳುತ್ತಿದ್ದರೂ ಮಲ್ಪೆ ಬೀಚ್​​ನಲ್ಲಿ ಪ್ರವಾಸಿಗರು ಸಮುದ್ರಕ್ಕೆ ಇಳಿದು ಜೀವದ ಜೊತೆ ಚೆಲ್ಲಾಟವಾಡುತ್ತಿರುವುದು ಕಾಣಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist