ಮಂಗಳವಾರ, ಡಿಸೆಂಬರ್ 5, 2023
ಇಂದಿರಾ ಗಾಂಧಿ ಭದ್ರತಾ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದ ಮಾಜಿ ಐಪಿಎಸ್ ಅಧಿಕಾರಿ ಇಂದು ಮಿಜೋರಾಂ ನೂತನ ಸಿಎಂ ಸ್ಥಾನಕ್ಕೆ ಸಜ್ಜು..!-ಚೆನ್ನೈನಲ್ಲಿ ಭಾರಿ ಮಳೆ ; 5 ಮಂದಿ ಸಾವು - ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ!-ಮಣಿಪುರದಲ್ಲಿ ಮತ್ತೆ ಹಿಂಸಾಚಾರ ; 13 ಜನ ಸಾವು!-ಉದ್ಯಮಿಗೆ ವಂಚನೆ ಆರೋಪ ಪ್ರಕರಣ ; ಚೈತ್ರಾ ಸಹಿತ ಇಬ್ಬರಿಗೆ ಜಾಮೀನು ಮಂಜೂರು..!-ಲೋಕಸಭಾ ಚುನಾವಣೆ 2024: ಕಾಂಗ್ರೆಸ್ ನಿಂದ ಹರೀಶ್ ಕುಮಾರ್ ಅಥವಾ ರಮನಾಥ ರೈ ನಳಿನ್ ವಿರುದ್ಧ ಅಭ್ಯರ್ಥಿ ?-ಅರಬ್ಬಿ ಸಮುದ್ರಕ್ಕೆ ಇಳಿದಿದ್ದ 27 ಮೀನುಗಾರರಿದ್ದ ಬೋಟ್​ ನಾಪತ್ತೆ-Gold Rate : ದುಬಾರಿಯತ್ತ ಬಂಗಾರದ ಬೆಲೆ ; ಇಂದಿನ ಚಿನ್ನದ ದರ ಹೇಗಿದೆ?-8 ಬಾರಿ ಮೈಸೂರು ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವು; ಕಾಡಾನೆ ಸೆರೆ ಹಿಡಿಯುವ ವೇಳೆ ದುರ್ಘಟನೆ..!-ದಿವ್ಯಾಂಗರು, ಅಂಗವಿಕಲರ ಕಲ್ಯಾಣದ ಮಹತ್ವದ ವಿಷಯದ ಕುರಿತಂತೆ ಸರ್ಕಾರದ ಗಮನ ಸೆಳೆದ ವಿಧಾನ ಪರಿಷತ್ತು ಸದಸ್ಯ ಹರೀಶ್ ಕುಮಾರ್-ಪ್ರತಾಪ್ ಸಿಂಹರವರು ಸತತ ಎರಡು ಬಾರಿ ಗೆದ್ದಂತಹ ಮೈಸೂರು ಲೋಕಸಭಾ ಕ್ಷೇತ್ರ ಈ ಬಾರಿ ಜೆಡಿಎಸ್ ತೆಕ್ಕೆಗೆ..?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭೀಕರ ಅಪಘಾತ: ಸರ್ಕಾರಿ ಬಸ್ ಡಿಕ್ಕಿ, ಬೈಕ್​ನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ

Twitter
Facebook
LinkedIn
WhatsApp
ಭೀಕರ ಅಪಘಾತ: ಸರ್ಕಾರಿ ಬಸ್ ಡಿಕ್ಕಿ, ಬೈಕ್​ನಲ್ಲಿದ್ದ ಮೂವರು ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಮೂವರು ದುರ್ಮರಣ ಹೊಂದಿರುವಂತಹ ದಾರುಣ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಬಳಿ ನಡೆದಿದೆ. ಹಾಳಸಿರಬೂರ ಗ್ರಾಮದ ನಿವಾಸಿ ಭಗವಂತ ಕಾಂಬಳೆ(45), ವಿಶ್ವನಾಥ್ ಕಾಂಬಳೆ(24), ಕುಮಾರ್ ಕಾಂಬಳೆ(35) ಮೃತರು. ಘಟನಾ ಸ್ಥಳಕ್ಕೆ ಕುಡಚಿ ಠಾಣೆಯ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. 

ಮತ್ತೊಂದು ಪ್ರಕರಣದಲ್ಲಿ ನೆಲಮಂಗಲ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಸೌದೆ ತುಂಬಿದ ಟ್ರ್ಯಾಕ್ಟರ್, ಬುಲೆರೋ ಜೀಪ್ ಹಾಗೂ ಕಾರ್ ನಡುವೆ ಸರಣಿಯ ಅಪಘಾತ ಸಂಭವಿಸಿದೆ. ಘಟನೆ ಹಿನ್ನೆಲೆ ಕುಣಿಗಲ್ ರಸ್ತೆಯ ಯಂಟಗಾಕನಹಳ್ಳಿ ಬಳಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ರಸ್ತೆಯಲ್ಲಿ ಟ್ರಾಕ್ಟರ್​ನಲ್ಲಿ‌ ಇದ್ದ ಸೌದೆ ಚೆಲ್ಲಾಡಿದ್ದರಿಂದ ನಿಂತಲ್ಲೆ ನಿಂತ ವಾಹನಗಳು. ಘಟನೆಯಲ್ಲಿ ಯಾವುದೇ ಪ್ರಾಣಹಾನಿ‌ ಸಂಭವಿಸಿಲ್ಲ. ನೆಲಮಂಗಲ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ‌ ಪ್ರಕರಣ ದಾಖಲಾಗಿದೆ.

ಸಿಡಿಲು ಬಡಿದು ಮೂರು ಕುರಿಗಳು ಸಾವು

ರಾಯಚೂರು: ಸಿಡಿಲು ಬಡಿದು ಮೂರು ಕುರಿಗಳು ಸಾವನ್ನಪ್ಪರುವಂತಹ ಸನ್ನಿವೇಶ ಜಿಲ್ಲೆಯ ದೇವದುರ್ಗ ತಾಲ್ಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ. ಮಧ್ಯಾಹ್ನ ಗುಡುಗು ಸಮೇತ ಮಳೆ ಸುರಿದಿತ್ತು. ದೇವದುರ್ಗ, ಲಿಂಗಸುಗೂರು ತಾಲ್ಲೂಕಿನ ಹಲವು ಕಡೆ ಮಳೆರಾಯ ಅಬ್ಬರಿಸಿದ್ದ. ಈ ಹಿನ್ನೆಲೆ ಸಿಡಿಲು ಬಡಿದು ಮೂರು ಕುರಿಗಳು ಮೃತಪಟ್ಟಿವೆ. ಬಸವರಾಜ್ ಅನ್ನೋರಿಗೆ ಸೇರಿದ ಕುರಿಗಳು ಎನ್ನಲಾಗಿದೆ. ಸ್ಥಳಕ್ಕೆ ತಾಲ್ಲೂಕು ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಒಂಟಿ ಮಹಿಳೆ ವೃದ್ದೆಯರನ್ನ‌ ಟಾರ್ಗೆಟ್ ಮಾಡಿಕೊಂಡು ಸರಗಳ್ಳತನ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಸರಗಳ್ಳರ ಹಾವಳಿ ಹೆಚ್ಚಾಗಿದ್ದು, ಒಂಟಿ ಮಹಿಳೆ, ವೃದ್ದೆಯರನ್ನ‌ ಟಾರ್ಗೆಟ್ ಮಾಡಿಕೊಂಡು ಸರಗಳ್ಳತನ ಮಾಡಲಾಗುತ್ತಿದೆ. ಕಳೆದೊಂದು ವಾರದಲ್ಲಿ ಎರಡು ಕಡೆ ಸರಗಳ್ಳತನ ನಡೆದಿದೆ. ದೊಡ್ಡಬಳ್ಳಾಪುರದ ಕರೇನಹಳ್ಳಿಯ ನಾರಾಯಣಮ್ಮ ಬಳಿ 45 ಗ್ರಾಂ ಮತ್ತು ತೇರಿನ ಬೀದಿಯ ಸಾವಿತ್ರಮ್ಮ ಬಳಿ 60 ಗ್ರಾಂ‌ ನ‌ ಚಿನ್ನದ ಸರಗಳ್ಳತನವಾಗಿದೆ. ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಅಪರಿಚಿತರಿಂದ ಕೃತ್ಯವೆಸಗಲಾಗಿದೆ. ಹಾಡ ಹಗಲೆ ಸರಗಳ್ಳತನಗಳಿಂದ ಮಹಿಳೆಯರು ಬೆಚ್ಚಿ ಬಿದಿದ್ದಾರೆ. ದೊಡ್ಡಬಳ್ಳಾಪುರ ನಗರ ಮತ್ತು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ