![Mangalore : ಉಳ್ಳಾಲದಲ್ಲಿ ಗೋಡೆ ಕುಸಿದು ಮಕ್ಕಳ ಸಹಿತ ನಾಲ್ವರು ಬಲಿ](https://urtv24.com/wp-content/uploads/2024/06/WhatsApp-Image-2024-06-26-at-9.15.16-AM-300x194.jpeg)
Mangalore : ಉಳ್ಳಾಲದಲ್ಲಿ ಗೋಡೆ ಕುಸಿದು ಮಕ್ಕಳ ಸಹಿತ ನಾಲ್ವರು ಬಲಿ
Mangalore : ಉಳ್ಳಾಲದಲ್ಲಿ ಗೋಡೆ ಕುಸಿದು ಮಕ್ಕಳ ಸಹಿತ ನಾಲ್ವರು ಬಲಿ
ಮಂಗಳೂರು: ನಗರದ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿಗಳು ಕಿಸ್ಸಿಂಗ್ ಮಾಡಿರುವ ವಿಡಿಯೋ ವೈರಲ್ ಆಗಿದೆ. ಕಿಸ್ಸಿಂಗ್ ವಿದ್ಯಾರ್ಥಿ ವಿದ್ಯಾರ್ಥಿನಿಯರು ಕಿಸ್ಸಿಂಗ್ ಸ್ಪರ್ಧೆ ಮಾಡಿದ್ದು, ವಿಡಿಯೋ ಮಾಡಿದ ವಿದ್ಯಾರ್ಥಿಯ ಬಂಧನ ಮಾಡಲಾಗಿದೆ. ಕಿಸ್ಸಿಂಗ್ನಲ್ಲಿ ತೊಡಗಿದ್ದ ವಿದ್ಯಾರ್ಥಿಗಳು ಪಿಯುಸಿ ಶಿಕ್ಷಣ ಪಡೆಯುತ್ತಿದ್ದರು ಎನ್ನಲಾಗಿದೆ. ಮಂಗಳೂರಿನ ಬಾವುಟಗುಡ್ಡೆಯಲ್ಲಿರುವ ಪ್ರತಿಷ್ಠಿತ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ತಮ್ಮ ಸಹಪಾಠಿಗಳ ಎದುರೇ ಕಿಸ್ ಮಾಡಿರುವುದು ಭಾರೀ ಸಂಚಲನ ಮೂಡಿಸಿದೆ. ಪಂದ್ಯದ ನಿಯಮದಂತೇ ವಿದ್ಯಾರ್ಥಿ, ವಿದ್ಯಾರ್ಥಿನಿ ಎಲ್ಲರ ಎದುರೇ ಚುಂಬನ ಮಾಡಿದ್ದು, ಇದನ್ನು ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡಲಾಗಿದೆ. ಪ್ರತಿಷ್ಠಿತ ಖಾಸಗಿ ಕಾಲೇಜಿನ ಕಿಸ್ಸಿಂಗ್ ಸ್ಪರ್ಧೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹಲವರ ಆಕ್ರೋಶಕ್ಕೂ ಕಾರಣವಾಗಿದೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಎಚ್ಚೆತ್ತ ಮಂಗಳೂರು ಪೊಲೀಸರು ವಿಡಿಯೋದಲ್ಲಿರುವ ವಿದ್ಯಾರ್ಥಿಗಳ ಮಾಹಿತಿ ಸಂಗ್ರಹಿಸಲು ಆರಂಭಿಸಿದ್ದಾರೆ. ಅಲ್ಲದೇ ಈ ಚುಂಬನ ಸ್ಪರ್ಧೆಯ ವೇಳೆ ವಿದ್ಯಾರ್ಥಿಗಳು ಮಾದಕವಸ್ತು ಸೇವಿಸಿರುವ ಬಗ್ಗೆಯೂ ಪೊಲೀಸರ ತನಿಖೆ ನಡೆಸಲಿದ್ದಾರೆ ಎಂದು ಮಾಹಿತಿ ತಿಳಿದುಬಂದಿದೆ.
ಖಾಸಗಿ ರೂಮ್ನಲ್ಲಿ ವಿಡಿಯೋ ಸೆರೆ:
ಈ ವಿಡಿಯೋವನ್ನ ಯಾವುದೋ ಖಾಸಗಿ ರೂಮ್ನಲ್ಲಿ ಸೆರೆಹಿಡಿಯಲಾಗಿದ್ದು, ಮೇಲ್ನೋಟಕ್ಕೆ ಯುವಕರು ವಾಸ್ತವ್ಯ ಇರೋ ಕೊಠಡಿಯಂತೆ ಕಾಣುತ್ತಿದೆ. ವಿದ್ಯಾರ್ಥಿನಿಯರು ಅಲ್ಲಿಗೆ ತೆರಳಿರೋ ಸಾಧ್ಯತೆಯಿದೆ ಎನ್ನಲಾಗುತ್ತಿದ್ದು, ಸದ್ಯ ಮಂಗಳೂರು ಪೊಲೀಸರು ವಿದ್ಯಾರ್ಥಿನಿಯರು ಮತ್ತು ಆ ವಿದ್ಯಾರ್ಥಿಗಳ ಮಾಹಿತಿ ಕಲೆ ಹಾಕಿದ್ದು, ವಿಡಿಯೋ ಮಾಡಿದ ವಿದ್ಯಾರ್ಥಿಯನ್ನ ವಶಕ್ಕೆ ಪಡೆದಿದ್ದಾರೆ.
Mangalore : ಉಳ್ಳಾಲದಲ್ಲಿ ಗೋಡೆ ಕುಸಿದು ಮಕ್ಕಳ ಸಹಿತ ನಾಲ್ವರು ಬಲಿ
ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ
ಮನ್ಸೂನ್ ಪ್ರವಾಸಕ್ಕೆ ಹೇಳಿ ಮಾಡಿಸಿದ ಸ್ಥಳ ಕೊಡಗು; ಈ ಪ್ರವಾಸದ ಸಂದರ್ಭದಲ್ಲಿ ಈ ಸ್ಥಳಗಳನ್ನು ಮಿಸ್ ಮಾಡಬೇಡಿ!