ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಚಿನ್ನದ ಸರ ಸುಲಿಗೆ ಆರೋಪ - ಕಾನ್‌ಸ್ಟೆಬಲ್‌ ದೋಷಮುಕ್ತ

Twitter
Facebook
LinkedIn
WhatsApp
food poisoning girls 1

ಮಂಗಳೂರು, ಜ 31: ನಗರದಲ್ಲಿ ಮಹಿಳೆಯೊಬ್ಬರ ಚಿನ್ನದ ಸರ ಸುಲಿಗೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಪೊಲೀಸ್‌ ಕಾನ್‌ಸ್ಟೆಬಲ್‌ ನನ್ನು ದೋಷಮುಕ್ತಗೊಳಿಸಿ ಮಂಗಳೂರಿನ ನ್ಯಾಯಾಲಯ ತೀರ್ಪು ನೀಡಿದೆ.

ಬೆಂಗಳೂರಿನ ಮಹಾಲಕ್ಷ್ಮೀ ಲೇ ಔಟ್‌ ಪೊಲೀಸ್‌ ಠಾಣೆಯ ಕಾನ್‌ಸ್ಟೆಬಲ್‌ ಸಂದೇಶ ದೋಷಮುಕ್ತರಾದವರು. ಅವರು 2016ರ ಎ.12ರಂದು ಮಂಗಳೂರಿಗೆ ಆಗಮಿಸಿದ್ದರು. ಆ ವೇಳೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಶ್ರೀ ದೇವಿ ಕಾಲೇಜು ಕಡೆಗೆ ಹೋಗುವ ರಸ್ತೆಯಲ್ಲಿ ಮಹಿಳೆಯೋರ್ವರಲ್ಲಿ ಕುಡಿಯಲು ನೀರು, ಪೋನ್‌ ನಂಬರ್‌ ಕೇಳುವ ನೆಪದಲ್ಲಿ ಆಕೆಯ ಕುತ್ತಿಗೆಯಿಂದ ಚಿನ್ನದ ಸರ ಸುಲಿಗೆ ಮಾಡಲು ಯತ್ನಿಸಿದ್ದರು. ಆ ವೇಳೆ ಮಹಿಳೆ ದೂಡಿ ಹಾಕಿದ್ದರು. ಆಗ ಆರೋಪಿ ಸಂದೇಶ ಮಹಿಳೆಯನ್ನು ಗಾಯಗೊಳಿಸಿ ಚಿನ್ನದ ಸರದ ತುಂಡುಗಳನ್ನು ಸುಲಿಗೆ ಮಾಡಿದ್ದರೆಂದು ಆರೋಪಿಸಿ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ವಿಚಾರಣೆ ನಡೆಸಿದ 6ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಕಾಂತರಾಜು ಎಸ್‌.ವಿ ಅವರು ಆರೋಪಿ ಸಂದೇಶ್‌ನನ್ನು ನಿರ್ದೋಷಿ ಎಂದು ಸೋಮವಾರ ತೀರ್ಪು ನೀಡಿದ್ದಾರೆ. ಅರೋಪಿಯ ಪರವಾಗಿ ಮಂಗಳೂರಿನ ವಕೀಲರಾದ ಜಗದೀಶ್‌ ಕೆ.ಆರ್‌ ಮತ್ತು ಪ್ರಸಾದ್‌ ಪಾಲನ್‌ ವಾದ ಮಂಡಿಸಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ