ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಂಗಳೂರು: ಪ್ರಿನ್ಸೆಸ್‌ ಮಿರಾಲ್‌ ನೌಕೆ ಮುಳುಗಡೆ ಪ್ರಕರಣ-ತೈಲ ತೆರವು ಕಾರ್ಯ ಶುರು

Twitter
Facebook
LinkedIn
WhatsApp
DB 01012023 ship

ಮಂಗಳೂರು, ಜ 17 : ಉಳ್ಳಾಲದ ಬಟ್ಟಪಾಡಿ ಬಳಿ ಮುಳುಗಿ ಮಾಲಿನ್ಯದ ಆತಂಕಕ್ಕೆ ಕಾರಣವಾಗಿದ್ದ ಪ್ರಿನ್ಸೆಸ್ ಮಿರಾಲ್ ಹಡಗಿನಿಂದ ತೈಲ ಹೊರ ತೆಗೆಯುವ ಕಾರ್ಯ ಆರಂಭಗೊಂಡಿದೆ. ಸೋಮವಾರ ಸುಮಾರು 30 ಟನ್‌ ಡೀಸೆಲ್‌ ಹೊರ ತೆಗೆಯಲಾಯಿತು.

ತೈಲ ಹೊರ ತೆಗೆಯುವ ಕಾರ್ಯಕ್ಕೆ ಗುಜರಾತ್ ಮೂಲದ ಬನ್ಸಲ್ ಎಂಡೆವರ್ಸ್ ಸಂಸ್ಥೆಗೆ ಗುತ್ತಿಗೆ ನೀಡಲಾಗಿದ್ದು, ಇದಕ್ಕಾಗಿ ತಜ್ಞರ ತಂಡ ಮಂಗಳೂರಿಗೆ ಆಗಮಿಸಿ ಕಳೆದ ಒಂದು ವಾರದಿಂದ ತಯಾರಿ ಕಾರ್ಯ ನಡೆಸಲಾಗಿತ್ತು. ಸೋಮವಾರದಿಂದ ಕೆಲಸ ಆರಂಭಿಸಲಾಯಿತು.

ಚೀನಾದಿಂದ ಲೆಬನಾನ್‌ಗೆ 8 ಸಾವಿರ ಟನ್‌ ತೂಕದ ಸ್ಟೀಲ್ ಕಾಯಿಲ್ ಸಾಗಿಸುತ್ತಿದ್ದ ಈ ಹಡಗು 2021ರ ಜೂನ್‌ 21ರಂದು ಬಟ್ಟಪಾಡಿ ಬಳಿ ಅಪಾಯಕ್ಕೆ ಸಿಲುಕಿತ್ತು. ಹಡಗಿನಲ್ಲಿ ರಂಧ್ರ ಕಾಣಿಸಿಕೊಂಡು ನೀರು ಒಳ ಸೇರಲಾರಂಭಿಸಿದ್ದರಿಂದ ಹಡಗು ಮುಕ್ಕಾಲು ಭಾಗ ಮುಳುಗಡೆಯಾಗಿತ್ತು. ಹಡಗಿನಲ್ಲಿದ್ದ 15 ಮಂದಿ ಸಿರಿಯನ್ ನಾವಿಕರನ್ನು ಕೋಸ್ಟ್ ಗಾರ್ಡ್ ಸಿಬಂದಿ ರಕ್ಷಿಸಿದ್ದರು. ಇನ್ನು ಹಡಗು ಚಲಿಸುವ ಸ್ಥಿತಿಯಲ್ಲಿ ಇಲ್ಲದಿದ್ದುದರಿಂದ ಸಮುದ್ರ ಮಧ್ಯೆಯೇ ಬಾಕಿಯಾಗಿರುವುದರಿಂದ ಅದರಲ್ಲಿದ್ದ ತೈಲ ಸೋರಿಕೆಯಾಗಿ ಜಲ ಮಾಲಿನ್ಯದ ಆತಂಕ ಎದುರಾಗಿತ್ತು. 160 ಟನ್‌ ಫರ್ನೆಸ್‌ ಆಯಿಲ್‌, 60 ಟನ್‌ ಡೀಸೆಲ್‌ ಸೇರಿದಂತೆ 220 ಟನ್‌ ತೈಲ ಹಡಗಿನಲ್ಲಿತ್ತು.

ಸದ್ಯ ಹೋಸ್‌ಪೈಪ್ ಅಳವಡಿಕೆ ಮಾಡಿ ವ್ಯಾಕ್ಯೂ ಪಂಪ್ ಮೂಲಕ ತೈಲವನ್ನು ಹೊರ ತೆಗೆದು 320 ಟನ್‌ ಸಾಮರ್ಥ್ಯದ ಬಂಕರ್‌ ಬಾರ್ಜ್‌ಗೆ ವರ್ಗಾಯಿಸಿ ಬಳಿಕ ಹಳೆ ಬಂದರಿಗೆ ಅದನ್ನು ತರುವ ಕೆಲಸ ನಡೆಯಲಿದೆ. ಬಳಿಕ ಪುನರ್ಬಳಕೆ ಉದ್ದೇಶಕ್ಕಾಗಿ ಪ್ರಕ್ರಿಯೆಗಳನ್ನು ನಡೆಸಲಾಗುತ್ತದೆ ಎಂದು ತಿಳಿದು ಬಂದಿದೆ.

ಮಾಲಿನ್ಯ ನಿಯಂತ್ರಣ ಮಂಡಳಿ, ಪೊಲೀಸ್‌ ಇಲಾಖೆ ಮತ್ತು ಕೋಸ್ಟ್‌ಗಾರ್ಡ್‌ನಿಂದ ನಿರಾಕ್ಷೇಪಣ ಪತ್ರ (ಎನ್‌ಒಸಿ) ಪಡೆದುಕೊಳ್ಳಲಾಗಿದ್ದು, ಇದೀಗ ತೈಲ ಹೊರ ತೆಗೆಯುವ ಕಾರ್ಯ ಆರಂಭಗೊಂಡಿದೆ. ಇದು ಪೂರ್ಣಗೊಳ್ಳಲು ಸುಮಾರು 15 ದಿನ ಬೇಕಾಗಬಹುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್‌ ಎಂ.ಆರ್‌. ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ