ಮಂಡ್ಯ: ವಂದೇ ಭಾರತ್ ರೈಲಿಗೆ ಸಿಲುಕಿ ಮಹಿಳೆ ಸ್ಥಳದಲ್ಲೇ ಸಾವು
Twitter
Facebook
LinkedIn
WhatsApp

ಮಂಡ್ಯ: ಸೋಮವಾರ ಮಂಡ್ಯ ರೈಲು ನಿಲ್ದಾಣದಲ್ಲಿ ಅಪರಿಚಿತ ಮಹಿಳೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ(Vande Bharat Express) ಸಿಲುಕಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.
ಬೆಳಗ್ಗೆ 11.30ರ ಸುಮಾರಿಗೆ ಮಹಿಳೆ ಪ್ಲಾಟ್ಫಾರ್ಮ್ ನಂ 2ರ ಬಳಿ ರೈಲ್ವೆ ಹಳಿಗಳ ಮೇಲೆ ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೆಂಗಳೂರಿನಿಂದ ಮೈಸೂರಿಗೆ ಹೊರಟಿದ್ದ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಅತ್ಯಂತ ವೇಗದಲ್ಲಿ ನಿಲ್ದಾಣವನ್ನು ದಾಟಿತು.
ರೈಲು ನಿಲ್ದಾಣದಲ್ಲಿದ್ದವರು ಕೂಗಿ ಮಹಿಳೆಯನ್ನು ಎಚ್ಚರಿಸಲು ಪ್ರಯತ್ನಿಸಿದರೂ ವೇಗವಾಗಿ ಬಂದ ರೈಲು ಆಕೆಯ ಮೇಲೆ ಹರಿದಿದೆ. ಈ ಪರಿಣಾಮ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೈಸೂರು ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.