ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!
Twitter
Facebook
LinkedIn
WhatsApp
ಮಡಂತ್ಯಾರು ಜೂನ್ 11: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆಯು ಜೂನ್ 11 ರಂದು ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೇಕ್ರೆಡ್ ಹಾರ್ಟ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಅಲೆಕ್ಸ್ ಐವನ್ ಸೀಕ್ವೆರಾ ರವರು ವಹಿಸಿದರು. ಶಿಕ್ಷಕ ರಕ್ಷಕ ಸಂಘದ ಸಂಯೋಜಕರಾದ ಪ್ರೋ. ಈಶ್ವರ್ ಗೌಡ ರವರು ಆಗಮಿಸಿದ ಅತಿಥಿಗಳನ್ನು ಸ್ವಾಗತಿಸಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ವರದಿಯನ್ನು ತಿಳಿಸಿದರು ಹಾಗೂ ಸಹ ಸಂಯೋಜಕರಾದ ಪ್ರೀತಿ ಡಿಸೋಜ ರವರು ಆಯವ್ಯಯ ಲೆಕ್ಕಪತ್ರವನ್ನು ಮಂಡಿಸಿದರು. ತದನಂತರ 2023-24 ನೇ ಸಾಲಿನ ಆಯ್ದ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನ ನೀಡಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಅಲೆಕ್ಸ್ ಐವನ್ ಸಿಕ್ವೇರಾ ರವರು ಮಾತನಾಡಿ ಕಾಲೇಜಿನಲ್ಲಿ ನಡೆಯುತ್ತಿರುವ ಕಾರ್ಯಚಟುವಟಿಕೆಗಳು, ವಿದ್ಯಾರ್ಥಿಗಳ ಸಾಧನೆಗಳು ,ವಿದ್ಯಾರ್ಥಿಗಳಿಗೆ ಒದಗಿಸುತ್ತಿರುವ ಸೌಕರ್ಯಗಳು ಹಾಗೂ ಹೆತ್ತವರು ವಹಿಸಬೇಕಾದ ಎಚ್ಚರಿಕೆಗಳ ಬಗ್ಗೆ ಮಾಹಿತಿ ನೀಡಿದರು.ನಂತರ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಈ ಕಾರ್ಯಕ್ರಮದಲ್ಲಿ ಸೆಕ್ರೇಡ್ ಹಾರ್ಟ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ ಅಲೆಕ್ಸ್ ಐವನ್ ಸಿಕ್ವೇರಾ, ಶಿಕ್ಷಕ ರಕ್ಷಕ ಸಂಘದ ಸಂಯೋಜಕರಾದ ಪ್ರೊ. ಈಶ್ವರ್ ಗೌಡ , ಸಹಸಂಯೋಜಕರಾದ ಶ್ರೀಮತಿ. ಪ್ರೀತಿ ಡಿಸೋಜ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಪ್ರೊ. ಪ್ರಕಾಶ್ ಕ್ರಮದಾರಿ, IQAC ಸಂಯೋಜಕರಾದ ರೋಬಿನ್ ಜೋಸೆಫ್ ಸೇರಾ, ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಜೋಸೆಫ್ ಕೆ. ಜೆ., ಹಾಗೂ ಸದಸ್ಯರು, ಹೆತ್ತವರು ಉಪಸ್ಥಿತರಿದ್ದರು . ಆಗಮಿಸಿದ ಅತಿಥಿಗಳನ್ನು ವಿದ್ಯಾರ್ಥಿಕ್ಷೇಮಪಾಲನಾ ಅಧಿಕಾರಿ ಪ್ರೊ. ಪ್ರಕಾಶ್ ಕ್ರಮಧಾರಿ ವಂದಿಸಿದರು.