ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮತ್ತೆ ಏರಿಕೆ ಕಂಡ ಪೆಟ್ರೋಲ್ ಬೆಲೆ!!

Twitter
Facebook
LinkedIn
WhatsApp
ಮತ್ತೆ ಏರಿಕೆ ಕಂಡ ಪೆಟ್ರೋಲ್ ಬೆಲೆ!!

ಬೆಂಗಳೂರು, ಜು. 17: ಗಗನಕ್ಕೇರುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆಯಾಗುವ ಯಾವುದೇ ಲಕ್ಷಣ ಕಾಣುತ್ತಿಲ್ಲ. ನಿನ್ನೆ ತಟಸ್ಥವಾಗಿದ್ದ ಪೆಟ್ರೋಲ್ ಬೆಲೆ ಇವತ್ತು ಮತ್ತೆ ಏರಿಕೆಯಾಗಿದೆ. ಇಂದು ಪೆಟ್ರೋಲ್ ಬೆಲೆ ಸುಮಾರು 30 ಪೈಸೆಯಷ್ಟು ದುಬಾರಿಯಾಗಿದೆ. ಇದೊಂದು ಜುಲೈ ತಿಂಗಳಲ್ಲಿ ಪೆಟ್ರೋಲ್ ಬೆಲೆ ಹೆಚ್ಚಳವಾಗುತ್ತಿರುವುದು ಇದು ಹತ್ತನೇ ಬಾರಿ. ಆದರೆ, ಇವತ್ತು ಡೀಸೆಲ್ ಬೆಲೆಯಲ್ಲಿ ವ್ಯತ್ಯಯವಾಗಿಲ್ಲ ಎಂಬುದು ಸಮಾಧಾನದ ವಿಚಾರ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 105 ರೂ ದಾಟಿದೆ. ನಿನ್ನೆ ಇಲ್ಲಿ 104.94 ರೂ ಇದ್ದ ಪೆಟ್ರೋಲ್ ಇಂದು 105.25 ರೂಪಾಯಿಗೆ ಬಂದು ಮುಟ್ಟಿದೆ. ಇನ್ನು, ಡೀಸೆಲ್ ಬೆಲೆ ಇಲ್ಲಿ ಲೀಟರ್​ಗೆ 95.26 ರೂ ಇದೆ. ಬೆಂಗಳೂರಿನಲ್ಲಿ ಕಳೆದ 10 ದಿನಗಳಿಂದ ಪೆಟ್ರೋಲ್ ಬೆಲೆ 1.49 ರೂಪಾಯಿಯಷ್ಟು ಏರಿಕೆ ಕಂಡಿದೆ. ಇದೇ ಅವಧಿಯಲ್ಲಿ ಡೀಸೆಲ್ ಬೆಲೆಯಲ್ಲಿ 37 ಪೈಸೆಯಷ್ಟು ಹೆಚ್ಚಳವಾಗಿದೆ.

ದೇಶದ 20 ರಾಜ್ಯಗಳಲ್ಲಿ ಇದೀಗ ಪೆಟ್ರೋಲ್ ಬೆಲೆ ನೂರು ರೂ ಗಡಿ ದಾಟಿದೆ. ಮಧ್ಯಪ್ರದೇಶ ರಾಜಧಾನಿ ಭೋಪಾಲ್​ನಲ್ಲಿ ಪೆಟ್ರೋಲ್ ಬೆಲೆ 110 ರೂ ಮುಟ್ಟಿದೆ. ಇನ್ನು, ರಾಜಸ್ಥಾನದಲ್ಲಿ ಪಾಕಿಸ್ತಾನದ ಗಡಿ ಸಮೀಪವೇ ಇರುವ ಶ್ರೀ ಗಂಗಾನಗರ್ ಜಿಲ್ಲೆಯಲ್ಲಿ ಪೆಟ್ರೋಲ್ ಬೆಲೆ 113.21 ರೂ ಇದೆ. ಇದು ದೇಶದಲ್ಲೇ ಅತಿ ದುಬಾರಿ ಪೆಟ್ರೋಲ್ ಇರುವ ಜಿಲ್ಲೆ ಎನಿಸಿದೆ. ಈ ಜಿಲ್ಲೆಯಲ್ಲಿ ಡೀಸೆಲ್ ಬೆಲೆ ಕೂಡ ಕೆಲ ದಿನಗಳ ಹಿಂದೆಯೇ ಶತಕ ಭಾರಿಸಿದೆ. ಇಲ್ಲಿ ಡೀಸೆಲ್ ಬೆಲೆ ಲೀಟರ್​ಗೆ 103.15 ರೂ ಇದೆ. ರಾಜಸ್ಥಾನ, ಒಡಿಶಾ ಮತ್ತು ಮಧ್ಯ ಪ್ರದೇಶದ ಕೆಲ ಜಿಲ್ಲೆಗಳಲ್ಲಿ ಡೀಸೆಲ್ ಬೆಲೆ ಶತಕ ದಾಟಿ ಮುಂದೆ ಹೋಗಿದೆ.

ವಿವಿಧೆಡೆ ಇರುವ ಇಂದಿನ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ:

ಪೆಟ್ರೋಲ್ ಬೆಲೆ:

ಬೆಂಗಳೂರು: 105.25 ರೂ

ಚೆನ್ನೈ: 102.49

ಮುಂಬೈ: 107.83ನವದೆಹಲಿ: 101.84 ರೂ

ಕೋಲ್ಕತಾ: 102.08

ಹೈದರಾಬಾದ್: 105.83

ಚಂದೀಗಡ್: 97.93

ಭುಬನೇಶ್ವರ್: 102.65 ರೂ

ಡೀಸೆಲ್ ಬೆಲೆ:

ಬೆಂಗಳೂರು: 95.26 ರೂ

ಚೆನ್ನೈ: 94.39

ಮುಂಬೈ: 97.45

ನವದೆಹಲಿ: 89.87 ರೂ

ಕೋಲ್ಕತಾ: 93.02

ಹೈದರಾಬಾದ್: 97.96

ಚಂದೀಗಡ್: 89.50

ಭುಬನೇಶ್ವರ್: 97.94 ರೂ

ಭಾರತದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಗಳು ಮಾರುಕಟ್ಟೆ ನಿಯಂತ್ರಿತವಾಗಿವೆ ಎಂದು ಸರ್ಕಾರ ಹೇಳುತ್ತದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬೆಲೆಯಲ್ಲಾಗುವ ಬದಲಾವಣೆಯು ಭಾರತದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯ ಮೇಲೆ ಪರಿಣಾಮ ಬೀರುತ್ತವೆ. ಜೊತೆಗೆ ಇಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರತ್ಯೇಕವಾಗಿ ತೆರಿಗೆ ಹಾಕುತ್ತವೆ. ಪೆಟ್ರೋಲ್ ಬೆಲೆಯಲ್ಲಿ ಶೇ. 60 ರಷ್ಟು ಭಾಗ ತೆರಿಗೆಯೇ ಆಗಿರುತ್ತದೆ ಎಂಬುದು ಗಮನಾರ್ಹ. ಕೇಂದ್ರ ಸರ್ಕಾರ ಪ್ರತೀ ಲೀಟರ್ ಪೆಟ್ರೋಲ್​ಗೆ ವಿಧಿಸುವ ಅಬಕಾರಿ ಸುಂಕದ ಮೊತ್ತ 32.90 ರೂ ಇರುತ್ತದೆ. ಹಾಗೆಯೇ, ಡೀಸೆಲ್ ಬೆಲೆಯಲ್ಲಿ ಶೇ. 54ರಷ್ಟು ತೆರಿಗೆ ಇದೆ. ಇದರಲ್ಲಿ ಅಬಕಾರಿ ಸುಂಕದ ಮೊತ್ತ 31.80 ರೂ ಇದೆ.

ಇನ್ನು, ರಾಜ್ಯ ಸರ್ಕಾರಗಳೂ ಕೂಡ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತಮ್ಮದೇ ವ್ಯಾಟ್ (ಮೌಲ್ಯ ವರ್ಧಿತ ತೆರಿಗೆ) ತೆರಿಗೆ ವಿಧಿಸುತ್ತವೆ. ಒಂದೊಂದು ರಾಜ್ಯದಲ್ಲಿ ಒಂದೊಂದು ರೀತಿಯ ವ್ಯಾಟ್ ತೆರಿಗೆ ಇರುವುದರಿಂದ ವಿವಿಧ ರಾಜ್ಯಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ವ್ಯತ್ಯಾಸವಾಗುತ್ತದೆ. ರಾಜಸ್ಥಾನ, ಮಧ್ಯ ಪ್ರದೇಶ, ಆಂಧ್ರ ಪ್ರದೇಶ, ತೆಲಂಗಾಣ ರಾಜ್ಯಗಳಲ್ಲಿ ಅತಿ ಹೆಚ್ಚು ವ್ಯಾಟ್ ತೆರಿಗೆ ಇದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು