ಶನಿವಾರ, ಜುಲೈ 20, 2024
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಬಂಟ್ವಾಳ: ಪುಂಜಾಲಕಟ್ಟೆ ಬಳಿ ಲಾರಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ.!-ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು-Hardik Pandya - Natasa: ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ-ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-World Record: ಟೆಸ್ಟ್ ಕ್ರಿಕೆಟಿನಲ್ಲಿ ಅತಿ ವೇಗದ 50 ರನ್; ವಿಶ್ವ ದಾಖಲೆ ನಿರ್ಮಿಸಿದ ಇಂಗ್ಲೆಂಡ್-ದಿಬ್ರುಗಢ ಎಕ್ಸ್‌ಪ್ರೆಸ್ ಅಪಘಾತದ ಬಗ್ಗೆ ಪ್ರಧಾನ ಮಂತ್ರಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ-Aanvi Kamdar: ವಿಡಿಯೋ ಮಾಡುವ ವೇಳೆ 300 ಅಡಿ ಎತ್ತರದ ಫಾಲ್ಸ್​​ನಿಂದ ಬಿದ್ದು ಇನ್​ಸ್ಟಾ ತಾರೆ ಸಾವು-ದಕ್ಷಿಣ ಕನ್ನಡ ಜಿಲ್ಲೆಯ ಈ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು.18 ರಂದು ರಜೆ ಘೋಷಣೆ-ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮತ್ತೆ ರೋಚಕ ಘಟ್ಟಕ್ಕೆ ಮುಖ್ಯಮಂತ್ರಿ ಬದಲಾವಣೆ. ಇಂದು ರಾತ್ರಿ ಹೈಕಮಾಂಡ್ ನಿಂದ ಸಂದೇಶ?

Twitter
Facebook
LinkedIn
WhatsApp
ಸಂಜೆಯೊಳಗೆ ಹೈಕಮಾಂಡ್‌ ಸಂದೇಶ– ನಾಳೆ ಸಿಎಂ ಪದತ್ಯಾಗ?

ಬೆಂಗಳೂರು – ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಳಗಾವಿ ಪ್ರವಾಸ ಮುಗಿಸಿ ಬೆಂಗಳೂರಿಗೆ ತಲುಪಿದ್ದಾರೆ.
ಬೆಳಗ್ಗೆ ಬೆಳಗಾವಿಯಿಂದ ಈಗ ಬೆಂಗಳೂರಿನವರೆಗೆ ಹತ್ತಾರು ಬಾರಿ ಮಾಧ್ಯಮದವರ ಪ್ರಶ್ನೆಗೆ ಯಡಿಯೂರಪ್ಪ ಅವರ ಒಂದೇ ಉತ್ತರ – ಇಂದು ಸಂಜೆ ಅಥವಾ ರಾತ್ರಿಯೊಳಗೆ ಹೈಕಮಾಂಡ್ ಸಂದೇಶ ಬರಲಿದೆ. ಅದರಂತೆ ನಡೆದುಕೊಳ್ಳುತ್ತೇನೆ. 
ಸಂದೇಶ ಬರುವ ದಿನಾಂಕವನ್ನು ಹೈಕಮಾಂಡ್ ಹೇಳಿದೆಯಾ ಅಥವಾ ನೀವೇ ಹೇಳುತ್ತಿದ್ದೀರಾ ಎನ್ನುವ ಪ್ರಶ್ನೆಗೆ ಅದನ್ನೆಲ್ಲ ಚರ್ಚಿಸಲು ಬಯಸುವುದಿಲ್ಲ ಎಂದರು.
ಯಡಿಯೂರಪ್ಪ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೇ ಹೇಳಿದ್ದಾರಲ್ಲಾ, ಮತ್ತೇಕೆ ಬದಲಾವಣೆ ಪ್ರಶ್ನೆ ಎಂದು ಕೇಳಿದಾಗ ಅವರ ನಮ್ಮ ರಾಷ್ಟ್ರೀಯ ಅಧ್ಯಕ್ಷರು, ಅವರು ಹೇಳಿದಂತೆ ನಡೆದುಕೊಳ್ಳುತ್ತೇನೆ ಎಂದಷ್ಟೆ ಹೇಳಿದರು.
ಸಂದೇಶ ಬರದಿದ್ದರೆ ಮುಂದೇನು ಎನ್ನುವ ಪ್ರಶ್ನೆಗೆ ನಾಳೆ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.
ಸಂದೇಶದ ದಾರಿ ಕಾಯುತ್ತಲೂ ಇಷ್ಟೊಂದು ಚಟುವಟಿಕೆಯಿಂದಿದ್ದೀರಲ್ಲಾ ಎಂದು ಕೇಳಿದಾಗ, ನಾನು ಕೊನೆಯ ಕ್ಷಣದವರೆಗೂ ಕೆಲಸ ಮಾಡುತ್ತೇನೆ. ರಾಜಿನಾಮೆ ಕೊಡು ಎಂದರೆ ಅವರು ಹೇಳಿದ ದಿನ ಕೊಡುತ್ತೇನೆ. ಮುಂದುವರಿಯಿರಿ ಎಂದರೆ ಮುಂದುವರಿಯುತ್ತೇನೆ. ನಾಳೆ ಮೊದಲೇ ನಿಗದಿಯಾದಂತೆ ನಮ್ಮ ಸರಕಾರದ 2 ವರ್ಷದ ಸಂಭ್ರಮ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಎಷ್ಟೇ ಪ್ರಶ್ನೆ ಕೇಳಿದರೂ ಯಾವುದೇ ಸುಳಿವು ನೀಡದ ಯಡಿಯೂರಪ್ಪ, ಸ್ವಲ್ಪವೂ ವಿಚಲಿತರಾಗದೆ ಉತ್ತರಿಸಿದರು. ಬಿಜೆಪಿ ಹೈಕಮಾಂಡ್ ಅವರನ್ನು ಸಂದೇಶಕ್ಕಾಗಿ ಕಾಯುವಂತೆ ತುದಿಗಾಲಲ್ಲಿ ನಿಲ್ಲಿಸಿದೆಯಾ ಅಥವಾ ಅವರನ್ನೇ ಮುಂದುವರಿಸಲು ನಿರ್ಧರಿಸಿ ಸಂದೇಶ ನೀಡುವ ಸುಳಿವು ಅವರಿಗೆ ಸಿಕ್ಕಿದೆಯೇ ಎನ್ನುವ ಪ್ರಶ್ನೆ ಹಾಗೆಯೇ ಉಳಿದಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ದಕ್ಷಿಣ ಕನ್ನಡ ಜಿಲ್ಲೆ: ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆ ಜುಲೈ 20 ರಂದು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು