ಅಕ್ರಮವಾಗಿ ಮಗು ದತ್ತು ಪಡೆದ ಪ್ರಕರಣದಲ್ಲಿ ಜೈಲು ಸೇರಿದ್ದ ‘ಬಿಗ್ ಬಾಸ್’ (Bigg Boss Kannada) ಖ್ಯಾತಿಯ ಸೋನು ಶ್ರೀನಿವಾಸ್ ಗೌಡ (Sonu Srinivas Gowda) ತಮ್ಮ ಮದುವೆ (Wedding) ಬಗ್ಗೆ ಮೌನ ಮುರಿದಿದ್ದಾರೆ. ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಮದುವೆ ಮತ್ತು ರಾಜಕೀಯಕ್ಕೆ (Politics) ಎಂಟ್ರಿ ಕೊಡುವ ಬಗ್ಗೆ ನಟಿ ಮಾತನಾಡಿದ್ದಾರೆ.
ಮದುವೆ ಆಗಲ್ಲ, ಆದರೆ ರಾಜಕೀಯಕ್ಕೆ ಹೋಗುವ ಆಸೆ ಇದೆ; ಸೋನು ಶ್ರೀನಿವಾಸ್ ಗೌಡ
Twitter
Facebook
LinkedIn
WhatsApp

ಸದಾ ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಇರುವ ನಟಿ ಇದೀಗ ಅಭಿಮಾನಿಗಳ ಜೊತೆ ಪ್ರಶ್ನಾವಳಿ ಮಾಡಿದ್ದಾರೆ. ಅವರು ಕೇಳುವ ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ಅಭಿಮಾನಿಯೊಬ್ಬರು ನೀವು ಯಾವಾಗ ಮದುವೆಯಾಗುತ್ತೀರಾ? ಎಂದು ಸೋನುಗೆ ಪ್ರಶ್ನೆ ಕೇಳಿದ್ದಾರೆ. ಅದಕ್ಕೆ ತಮ್ಮ ಯೂಟ್ಯೂಬ್ ಚಾನೆಲ್ನಲ್ಲಿ ಹಲವು ಪ್ರಶ್ನೆಗಳಿಗೆ ನಟಿ ಉತ್ತರಿಸಿದ್ದಾರೆ. ನಾನು ಮದುವೆ ಬಗ್ಗೆ ಪ್ಲ್ಯಾನ್ ಇಲ್ಲ. ನಾನು ಮದುವೆ ಆಗಬಾರದು ಎಂದುಕೊಂಡಿದ್ದೇನೆ ಎಂದಿದ್ದಾರೆ.
ಚಿತ್ರರಂಗದಲ್ಲಿ ನಟಿಯಾಗಿ ಗುರುತಿಸಿಕೊಳ್ಳಬೇಕು ಎಂದು ಆಸಕ್ತಿ ಇತ್ತು. ಈಗ ಇಲ್ಲ, ಆದರೆ ರಾಜಕೀಯಕ್ಕೆ ಹೋಗಬೇಕು. ಅಲ್ಲಿ ಕಾಣಿಸಿಕೊಳ್ಳಬೇಕು ಎಂದು ಪ್ಲ್ಯಾನ್ ಇದೆ. ಮುಂದಿನ ದಿನಗಳಲ್ಲಿ ನೋಡೋಣ ಎಂದು ಸೋನು ಮಾತನಾಡಿದ್ದಾರೆ.
‘ಕ್ಯಾಡ್ಬರಿಸ್’ ಎಂಬ ಸಿನಿಮಾದಲ್ಲಿ ಸೋನು ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಸ್ಪೆಷಲ್ ಹಾಡಿಗೆ ಹೆಜ್ಜೆ ಕೂಡ ಹಾಕಲಿದ್ದಾರೆ. ಸದ್ಯದಲ್ಲೇ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ.