ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಧ್ಯಾಹ್ನದ ಬಿಸಿಯೂಟದಲ್ಲಿ ಹಾವು ಪತ್ತೆ; ಶಾಲಾ ಮಕ್ಕಳು ಅಸ್ವಸ್ಥ

Twitter
Facebook
LinkedIn
WhatsApp
Shubhra Ayyappa 1

ಕೊಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಬಿರ್ಭುಮ್ ಜಿಲ್ಲೆಯಲ್ಲಿ ಶಾಲೆಯೊಂದರ ಬಿಸಿಯೂಟದಲ್ಲಿ (Mid-Day Meal) ಸತ್ತ ಹಾವು ಪತ್ತೆಯಾಗಿದೆ. ಈ ಊಟವನ್ನು ಸೇವಿಸಿದ ಹಲವಾರು ಶಾಲಾ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿರ್ಭುಮ್ ಜಿಲ್ಲೆಯ ಮಯೂರೇಶ್ವರ ಬ್ಲಾಕ್‌ನ ಪ್ರಾಥಮಿಕ ಶಾಲೆಯ ಸುಮಾರು 30 ವಿದ್ಯಾರ್ಥಿಗಳು ಸೋಮವಾರ ಮಧ್ಯಾಹ್ನದ ಬಿಸಿಯೂಟದಲ್ಲಿ ಬಡಿಸಿದ ಆಹಾರವನ್ನು ಸೇವಿಸಿದ ನಂತರ ಅಸ್ವಸ್ಥರಾಗಿದ್ದಾರೆ.

ಊಟವನ್ನು ಸಿದ್ಧಪಡಿಸಿದ್ದ ಶಾಲೆಯ ಸಿಬ್ಬಂದಿಯೊಬ್ಬರು ಬೇಳೆ ತುಂಬಿದ ಕಂಟೈನರ್ ಒಂದರಲ್ಲಿ ಹಾವು ಕಂಡುಬಂದಿದೆ ಎಂದು ಹೇಳಿಕೊಂಡಿದ್ದಾರೆ. ಬಿಸಿಯೂಟ ತಿಂದ ಮಕ್ಕಳು ವಾಂತಿ ಮಾಡಲು ಪ್ರಾರಂಭಿಸಿದ್ದರಿಂದ ನಾವು ಅವರನ್ನು ರಾಂಪುರಹತ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಿದೆವು ಎಂದು ಶಾಲಾ ಸಿಬ್ಬಂದಿ ಹೇಳಿದ್ದಾರೆ.

ಮಧ್ಯಾಹ್ನದ ಊಟ ತಿಂದು ಮಕ್ಕಳು ಅಸ್ವಸ್ಥರಾಗುತ್ತಿರುವ ಬಗ್ಗೆ ಹಲವಾರು ಗ್ರಾಮಸ್ಥರಿಂದ ದೂರುಗಳು ಬಂದಿವೆ ಎಂದು ಬ್ಲಾಕ್ ಅಭಿವೃದ್ಧಿ ಅಧಿಕಾರಿ ದೀಪಾಂಜನ್ ಜನಾ ಸುದ್ದಿಗಾರರಿಗೆ ತಿಳಿಸಿದ್ದಾರೆ. ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದ ಒಬ್ಬರನ್ನು ಹೊರತುಪಡಿಸಿ ಉಳಿದೆಲ್ಲಾ ಮಕ್ಕಳನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಕ್ಕಳು ಅಸ್ವಸ್ಥರಾಗಿದ್ದರಿಂದ ಕೋಪಗೊಂಡ ಪೋಷಕರು ಶಾಲೆಯ ಮುಖ್ಯೋಪಾಧ್ಯಾಯರ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ಅವರ ಬೈಕನ್ನು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ