ಮಂಗಳವಾರ, ಫೆಬ್ರವರಿ 7, 2023
ಕಟ್ಟಡದ ಅವಶೇಷಗಳಡಿಯೇ ಮಗುವಿಗೆ ಜನ್ಮ ನೀಡಿ ಮಹಿಳೆ ಸಾವು-ಬೈಕ್‌ನಲ್ಲಿ ರಾಂಚಿ ಸ್ಟೇಡಿಯಂನಿಂದ ಬಿಂದಾಸ್‌ ಆಗಿ ಹೊರಟ ಎಂ ಎಸ್ ಧೋನಿ..! ವಿಡಿಯೋ ವೈರಲ್-ಹೊಸ ಮುಖದ ಬಗ್ಗೆ ರಾಹುಲ್ ಗಾಂಧಿ ಒಲವು. ಕೊಡಗಿನಲ್ಲಿ ಪೊನ್ನನ್ನ,ಡಾ. ಮಂತರ್ ಗೌಡ, ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಬಹುತೇಕ ಫಿಕ್ಸ್.-ಡಿಕ್ಕಿಹೊಡೆದ ಗಡಿಬಿಡಿಗೆ ಬ್ರೇಕ್ ಬದಲು ಎಕ್ಸಲೇಟರ್ ತುಳಿದ ಮಹಿಳೆ; ಬೈಕ್ ಸವಾರ ಸ್ಥಳದಲ್ಲಿಯೇ ಸಾವು-ಸೀರೆಯುಟ್ಟು ಜಿಮ್​ ವರ್ಕೌಟ್ ಮಾಡುತ್ತಿರುವ ಮಹಿಳೆಯ ವಿಡಿಯೋ ವೈರಲ್; ನೆಟ್ಟಿಗರ ಮಿಶ್ರ ಪ್ರತಿಕ್ರಿಯೆ-ಮಂಗಳೂರು: ವಿಷಾಹಾರ ಸೇವಿಸಿದ ನರ್ಸಿಂಗ್ ವಿದ್ಯಾರ್ಥಿಗಳ ಪೈಕಿ ಹಲವರು ಚೇತರಿಕೆ-ಬೆಳ್ತಂಗಡಿ: ಏಕಾಲದಲ್ಲಿ ಉಜಿರೆಯ ಲಾಡ್ಜ್‌‌ಗಳ ಮೇಲೆ ವಿಶೇಷ ಪೊಲೀಸ ತಂಡ ದಾಳಿ-ತುಮಕೂರು: ಬೈಕ್-ಲಾರಿ ನಡುವೆ ಅಪಘಾತ, ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ-T20I ನಾಯಕ ಆರನ್ ಫಿಂಚ್ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ-ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ – ತೃತೀಯಲಿಂಗಿಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಧ್ಯ ನೈಜೀರಿಯಾದಲ್ಲಿ ಬಾಂಬ್​ ಸ್ಫೋಟ, 27 ಕುರಿಗಾಹಿಗಳ ಸಾವು

Twitter
Facebook
LinkedIn
WhatsApp
ಮಧ್ಯ ನೈಜೀರಿಯಾದಲ್ಲಿ ಬಾಂಬ್​ ಸ್ಫೋಟ, 27 ಕುರಿಗಾಹಿಗಳ ಸಾವು

ನೈಜೀರಿಯಾ: ಜನಾಂಗೀಯ ಮತ್ತು ಧಾರ್ಮಿಕ ಉದ್ವಿಗ್ನತೆಗಳಿಗೆ ಕುಖ್ಯಾತ ಮಧ್ಯ ನೈಜೀರಿಯಾದಲ್ಲಿ ಬಾಂಬ್​ ಸ್ಫೋಟಗೊಂಡು ಜಾನುವಾರು ಸೇರಿದಂತೆ 27 ಜನ ಕುರಿಗಾಹಿಗಳು ಮೃತಪಟ್ಟ ದುರ್ಘಟನೆ ನಡೆದಿದೆ. ನಸರವಾ, ಬೆನ್ಯೂ ರಾಜ್ಯಗಳ ಗಡಿ ಭಾಗ ರುಕುಬಿ ಬಳಿ ಕುರಿಗಾಹಿಗಳು ತಮ್ಮ ಜಾನುವಾರುಗಳನ್ನು ಮೇಯಿಸಲು ಬಂದಾಗ ಘಟನೆ ನಡೆದಿದೆ. ಬಾಬ್ ಸ್ಫೋಟದಲ್ಲಿ 27 ಜನ ಮೃತಪಟ್ಟಿದ್ದು ಹಲವರಿಗೆ ಗಾಯಗಳಾಗಿವೆ. ಈ ಬಗ್ಗೆ ನಸರವಾ ಪೊಲೀಸ್ ಕಮಿಷನರ್ ಮೈಯಾಕಿ ಮಹಮ್ಮದ್ ಬಾಬಾ ಮಾಹಿತಿ ನೀಡಿದ್ದಾರೆ.

ಇನ್ನು ಘಟನೆ ನಡೆದ ಸ್ಥಳದಲ್ಲಿ ಮತ್ತಷ್ಟು ಜನರಿಗಾಗಿ ಶೋಧ ಕಾರ್ಯ ನಡೆಯುತ್ತಿದ್ದು ಸಾವಿನ ಸಂಖ್ಯೆ ಮತ್ತಷ್ಟು ಏರುವ ಸಾಧ್ಯತೆ ಇದೆ. ಪೊಲೀಸ್ ಬಾಂಬ್ ತಜ್ಞರು ಸ್ಫೋಟದ ಮೂಲದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ ಎಂದು ಮಹಮ್ಮದ್ ಬಾಬಾ ತಿಳಿಸಿದರು.

ಮಿಲಿಟರಿ ಸ್ಟ್ರೈಕ್​ನಿಂದಾಗಿ ಈ ಸ್ಫೋಟ ಸಂಭವಿಸಿದೆ ಎಂದು ದನಗಾಹಿಗಳನ್ನು ಪ್ರತಿನಿಧಿಸುವ ಗುಂಪಿನ ಸದಸ್ಯರೊಬ್ಬರು ಮಾಹಿತಿ ನೀಡಿದ್ದರೆ. ಘಟನೆ ಸಂಬಂಧ ನೈಜೀರಿಯಾದ ವಾಯುಪಡೆಯ ವಕ್ತಾರರಿಗೆ ಮಾಹಿತಿ ಕೇಳಲಾಗಿದ್ದು ಅವರ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ಸುದ್ದಿ ಮಾಧ್ಯಮವೊಂದು ವರದಿ ಮಾಡಿದೆ.

ಮಧ್ಯ ನೈಜೀರಿಯಾದಲ್ಲಿ ದನಗಾಹಿಗಳು ಮತ್ತು ರೈತರು ತಮ್ಮ ಜಾನುವಾರುಗಳಿಗೆ ಮೇವು ಮತ್ತು ನೀರಿನ ಸಮಸ್ಯೆ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ. ದಶಕಗಳ ಕಾಲದ ಈ ಸಂಘರ್ಷವು ಇತ್ತೀಚಿನ ವರ್ಷಗಳಲ್ಲಿ ಜನಾಂಗೀಯ ಮತ್ತು ಧಾರ್ಮಿಕ ಆಯಾಮವನ್ನು ಪಡೆದುಕೊಂಡಿದೆ, ಹೆಚ್ಚಿನ ಕುರುಬರು ಮುಸ್ಲಿಮರು ಮತ್ತು ರೈತರು ಹೆಚ್ಚಾಗಿ ಕ್ರಿಶ್ಚಿಯನ್ನರಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ