ಮಂಗಳವಾರ, ಜೂನ್ 25, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮನ್‌ ಕಿ ಬಾತ್‌ನಲ್ಲಿ ಭಾರತೀಯ ಯುವಶಕ್ತಿ‌ಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ

Twitter
Facebook
LinkedIn
WhatsApp
ಮನ್‌ ಕಿ ಬಾತ್‌ನಲ್ಲಿ ಭಾರತೀಯ ಯುವಶಕ್ತಿ‌ಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ಮೋದಿ ಅವರ ತಿಂಗಳ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನ 80 ನೇ ಅವತರಣಿಕೆ ಇಂದು ನಡೆಯಿತು. ಕಾರ್ಯಕ್ರಮ‌ದಲ್ಲಿ ಭಾರತೀಯರನ್ನುದ್ದೇಶಿಸಿ ಮಾತನಾಡಿದ ಅವರು, ಈ ಸಂದರ್ಭದಲ್ಲಿ ಭಾರತೀಯ ಯುವಶಕ್ತಿ‌ಯನ್ನು ಶ್ಲಾಘಿಸಿದರು. ಭಾರತೀಯ ಯುವ ಸಮೂಹ ಗುಣಮಟ್ಟಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡುತ್ತಿದ್ದಾರೆ. ಈ ಹಿಂದಿನ ಪೂರ್ವ ನಿರ್ಧರಿತ ಹಾದಿಯಲ್ಲಿಯೇ ನಡೆಯಲು ಇಂದಿನ ಯುವಜನರು ಬಯಸುತ್ತಿಲ್ಲ. ಬದಲಾಗಿ ಅವರ ಗುರಿ ಹೊಸದು, ಆ ಗುರಿಯನ್ನು ತಲುಪುವ ಹೊಸ ಹಾದಿಯನ್ನು ಅವರು ಕಂಡುಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಹಾಗೆಯೇ ಭಾರತೀಯ ಯುವ ಸಮೂಹ ಹೊಸ ಗುರಿಯನ್ನು ತಮ್ಮ ದೃಢ ಸಂಕಲ್ಪವನ್ನಾಗಿ ಮಾಡಿ, ಅದರ ಸಾಧನೆಗೆ ಹಗಲಿರುಳು ಎನ್ನದೆ ಶ್ರಮಿಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಹಾಗೆಯೇ, ಕ್ರೀಡಾ ವಲಯಕ್ಕೆ ಸಂಬಂಧಿಸಿದಂತೆ‌ಯೂ ನಮ್ಮ ಯುವ ಸಮುದಾಯದಲ್ಲಿ ಮಹತ್ವದ ಬದಲಾವಣೆ ಕಾಣುತ್ತಿದೆ. ಯುವ ಜನರ ಮನಸ್ಸು ವಿಕಾಸವಾಗುತ್ತಿದ್ದು, ಹಳೆಯ ವಿಧಾನಗಳಿಂದ ಹೊಸ ಬದಲಾವಣೆಗಳ, ಹೊಸ ಕ್ರಮಗಳತ್ತ ತೆರೆದುಕೊಳ್ಳುತ್ತಿದ್ದಾರೆ ಎಂದು ಮೋದಿ ಹೇಳಿದ್ದಾರೆ. ಇಂದಿನ ಯುವ ಜನತೆ ವಿಭಿನ್ನ‌ತೆಯನ್ನು ಬಯಸುತ್ತಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಹಾಗೆಯೇ ಭಾರತೀಯರು ಖಾದಿ ವಸ್ತುಗಳ ಖರೀದಿಗೆ ಹೆಚ್ಚು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಖಾದಿ ಖರೀದಿಸುವಂತೆ ಮನವಿ ಮಾಡಿದ್ದಾರೆ. ಇದರಿಂಥ ಭಾರತ್ ಜೋಡೋ ಆಂದೋಲನಕ್ಕೆ ಪ್ರೋತ್ಸಾಹ ದೊರೆಯಲಿದೆ ಎಂದು ಹೇಳಿದ್ದಾರೆ. ಹಾಗೆಯೇ ಬಾಹ್ಯಾಕಾಶ ಕ್ಷೇತ್ರ‌ಕ್ಕೆ ಸಂಬಂಧಿಸಿದಂತೆ ಭಾರತದ ಸುಧಾರಣೆಗಳು, ಯುವಕರ ಕಲ್ಪನೆಗಳನ್ನು ಸಹ ಅವರು ಈ ಸಂದರ್ಭದಲ್ಲಿ ನೆನಪಿಸಿಕೊಂಡಿದ್ದಾರೆ. ಹಾಗೆಯೇ ಭಾರತದ ಮಹತ್ವದ ಪಾರಂಪರಿಕ ಸಂಪ್ರದಾಯ‌ಗಳನ್ನು ಮುಂದುವರೆಸುವಂತೆಯೂ ಅವರು ಜನರಿಗೆ ಮನವಿ ಮಾಡಿದರು

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು