ಶನಿವಾರ, ಜುಲೈ 13, 2024
13 ರಲ್ಲಿ 10 ಸ್ಥಾನಗಳೊಂದಿಗೆ ಭರ್ಜರಿ ಗೆಲುವು ಸಾಧಿಸಿದ INDIA ಮೈತ್ರಿಕೂಟ; ಬಿಜೆಪಿಗೆ 2 ಸ್ಥಾನ-ಪಿಚ್‌ನ ಮಣ್ಣು ತಿಂದ ರಹಸ್ಯ; ರೋಹಿತ್ ಶರ್ಮ ಹೇಳಿದ್ದೇನು?-ವಾಲ್ಮೀಕಿ ನಿಗಮ, ಮುಡಾ ಹಗರಣ ನ್ಯಾಯಯುತ ತನಿಖೆಗಾಗಿ ಸಿಬಿಐಗೆ ವಹಿಸಬೇಕು: ಸಂಸದ ಯದುವೀರ್ ಒಡೆಯರ್-ಡಿಸಿಸಿ ಬ್ಯಾಂಕ್‌ಗೆ ನೂತನ ಅಧ್ಯಕ್ಷರಾಗಿ ಮಂಜುನಾಥ ಗೌಡ; ಉಪಾಧ್ಯಕ್ಷರಾಗಿ ಮರಿಯಪ್ಪ ಅವಿರೋಧ ಆಯ್ಕೆ!-ಪಿಸ್ತೂಲ್ ಹಿಡಿದು ರೈತರನ್ನು ಬೆದರಿಸುವ ವಿಡಿಯೋ ವೈರಲ್; ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ತಾಯಿ ಮನೋರಮಾ ವಿರುದ್ಧ ಎಫ್ಐಆರ್!-WCL 2024: ಇರ್ಫಾನ್ - ಯೂಸುಫ್ ಪಠಾಣ್ ಸಿಡಿಲಬ್ಬರದ ಬ್ಯಾಟಿಂಗ್, ಭಾರತ - ಪಾಕಿಸ್ತಾನ ಫೈನಲ್​ಗೆ ಲಗ್ಗೆ!-ಬಿಜೆಪಿ ಮೈತ್ರಿಕೂಟಕ್ಕೆ ಪರಿಷತ್ತಿನ ಚುನಾವಣೆಯಲ್ಲಿ 11ರ ಪೈಕಿ 9 ಸ್ಥಾನಗಳಲ್ಲಿ ಜಯ!-Aparna: ಕನ್ನಡ ನಾಡು ಕಂಡ ಅಪರೂಪದ ನಿರೂಪಕಿ, ನಟಿ ಅಪರ್ಣಾ ಇನ್ನಿಲ್ಲ-ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!-ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್​ ಗಂಭೀರ್ ನೇಮಕ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಲೆನಾಡಿನಲ್ಲಿ ಭಾರಿ ಮಳೆ – ರಸ್ತೆ, ಭೂ ಕುಸಿತ, ಆತಂಕದಲ್ಲಿ ಜನರು.

Twitter
Facebook
LinkedIn
WhatsApp
ಮಲೆನಾಡಿನಲ್ಲಿ ಭಾರಿ ಮಳೆ  – ರಸ್ತೆ, ಭೂ ಕುಸಿತ, ಆತಂಕದಲ್ಲಿ ಜನರು.

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ವರುಣದೇವ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ. ಕಳೆದ ರಾತ್ರಿ ಭಾರೀ ಮಳೆಯಾಗಿದ್ದ ಮಲೆನಾಡಲ್ಲಿ ಇಂದು ಹಗಲಲ್ಲಿ ಸ್ವಲ್ಪ ಬಿಡುವು ನೀಡಿದ್ದಾನೆ. ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಮಲೆನಾಡಿನಾದ್ಯಂತ ಇಂದು ಅಲ್ಲಲ್ಲೇ ಸಣ್ಣ-ಪುಟ್ಟ ಅನಾಹುತ, ಅವಘಡಗಳು ಸಂಭವಿಸಿವೆ.

ಭಾರೀ ಮಳೆಯಿಂದ ಚಿಕ್ಕಮಗಳೂರು ತಾಲೂಕಿನ ಮುತ್ತೋಡಿ ಸಮೀಪದ ಹೊನ್ನಾಳ ಚೆಕ್‍ಪೋಸ್ಟ್ ಬಳಿ ರಸ್ತೆ ಬಿರುಕು ಬಿಟ್ಟಿದ್ದು, ರಸ್ತೆ ಬದಿಯ ಮಣ್ಣು ಕುಸಿದು ಬಿದ್ದಿದೆ. ಹಾಗಾಗಿ, ಈ ಮಾರ್ಗದಲ್ಲಿ ಸಂಚರಿಸುವ ಹತ್ತಾರು ಹಳ್ಳಿಯ ಜನ ಆತಂಕಕ್ಕೀಡಾಗಿದ್ದಾರೆ. ಇಲ್ಲಿನ ಜನಕ್ಕೆ ಈ ಮಾರ್ಗ ಹೊರತುಪಡಿಸಿ ಬೇರ್ಯಾವುದೇ ಮಾರ್ಗವಿಲ್ಲ. ಇಲ್ಲಿನ ಹತ್ತಾರು ಹಳ್ಳಿಯ ಜನ ಪ್ರತಿಯೊಂದಕ್ಕೂ ಚಿಕ್ಕಮಗಳೂರು ನಗರವನ್ನೇ ಆಶ್ರಯಿಸಿದ್ದಾರೆ. ಹಾಗಾಗಿ, ಇಲ್ಲಿನ ಜನ ಈ ಭಾಗದಲ್ಲಿ ಭಾರೀ ವಾಹನಗಳಿಗೆ ನಿಷೇಧ ಹೇರುವಂತೆ ಆಗ್ರಹಿಸಿದ್ದಾರೆ.

ಕಳಸ ತಾಲೂಕಿನ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಕಳಸ-ಹೊರನಾಡಿಗೆ ಸಂಪರ್ಕ ಕಲ್ಪಿಸುವ ಹೆಬ್ಬಾಳೆ ಸೇತುವೆ ಕೂಡ ಮುಳುಗುವ ಹಂತ ತಲುಪಿದೆ. ಹೆಬ್ಬಾಳೆ ಸೇತುವೆ ಮುಳುಗಡೆಗೆ ಮೂರ್ನಾಲ್ಕು ಅಡಿಯಷ್ಟೆ ಬಾಕಿ ಇದೆ. ಇದೇ ವೇಳೆ, ಮೂಡಿಗೆರೆ ತಾಲೂಕಿನ ಬೊಮ್ಮನಗದ್ದೆ ಎಂಬ ಗ್ರಾಮದಲ್ಲಿ ಮನೆ ಮೇಲೆ ಮರ ಬಿದ್ದು ಮನೆಯ ಮೇಲ್ಛಾವಣಿಗೆ ಕುಸಿದು ಬಿದ್ದಿದೆ. ಧರ್ಮಸ್ಥಳ ವಿಪತ್ತು ನಿರ್ವಹಣಾ ತಂಡ ಮನೆ ದುರಸ್ಥಿಗೊಳಿಸಿದೆ.
ಕೊಪ್ಪ ತಾಲೂಕಿನ ಅಬ್ಬಿಕಲ್ಲು ಹಾಗೂ ಮಲ್ಲಿಗೆ ಗ್ರಾಮದಲ್ಲೂ ಧರೆ ಕುಸಿದು ರಸ್ತೆಬದಿಯ ಮರಗಳು ಧರೆಗುರುಳಿವೆ. ಅತ್ತಿಕೂಡಿಗೆ ಗ್ರಾಮದಿಂದ ಹೊರನಾಡು, ಶೃಂಗೇರಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಕೂಡ ಬಂದ್ ಆಗಿದೆ. ಮಲೆನಾಡಲ್ಲಿ ಕಳೆದ ರಾತ್ರಿಯಿಂದ ಸುರಿದ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಲೆನಾಡ ಕೆಲ ಗ್ರಾಮಗಳು ಕತ್ತಲಲ್ಲಿ ಬದುಕುವಂತಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..!

ಮಂಗಳೂರಿನಲ್ಲಿ ದರೋಡೆ ಮಾಡಿ ಭಯ ಹುಟ್ಟಿಸಿದ ಚಡ್ಡಿ ಗ್ಯಾಂಗ್ ಅರೆಸ್ಟ್..! Twitter Facebook LinkedIn WhatsApp Mangalore: ಕಡಲನಗರಿ ಮಂಗಳೂರನ್ನು(Mangalore) ತಲ್ಲಣಗೊಳಿಸಿದ್ದ ಚಡ್ಡಿ ಗ್ಯಾಂಗ್​ನ್ನು ಕೃತ್ಯ ನಡೆದ ಐದೇ ಗಂಟೆಯಲ್ಲಿ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು