ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಳೆ ಹಾನಿ ಪರಿಹಾರ 15 ದಿನದೊಳಗೆ ವಿತರಿಸಲು ಚಾರುಲತಾ ಸೋಮಲ್ ಸೂಚನೆ

Twitter
Facebook
LinkedIn
WhatsApp
ಮಳೆ ಹಾನಿ ಪರಿಹಾರ 15 ದಿನದೊಳಗೆ ವಿತರಿಸಲು ಚಾರುಲತಾ ಸೋಮಲ್ ಸೂಚನೆ.

ಮಡಿಕೇರಿ;- ಮಳೆ ಹಾನಿ ಸಂಬಂಧ 15 ದಿನದೊಳಗೆ ಪರಿಹಾರ ವಿತರಿಸುವಂತೆ ತಹಶಿಲ್ದಾರರಿಗೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂದಾಯ ಹಾಗೂ ವಿವಿಧ ಇಲಾಖೆ ಅಧಿಕಾರಿಗಳ ಜೊತೆ ವಿಡಿಯೊ ಸಂವಾದದಲ್ಲಿ ಅವರು ಮಾತನಾಡಿದರು.
ಮಳೆಯಿಂದ ಮನೆ ಹಾಗೂ ಬೆಳೆ ಹಾನಿ ಸಂಬಂಧಿಸಿದಂತೆ ತ್ವರಿತವಾಗಿ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು. ಹಾಗೆಯೇ ಕಳೆದ ವರ್ಷ ಪ್ರಾಕೃತಿಕ ವಿಕೋಪದಿಂದ ಮನೆ ಹಾನಿ ಹಾಗೂ ಬೆಳೆ ನಷ್ಟವಾಗಿದ್ದಲ್ಲಿ ಪರಿಹಾರ ವಿತರಿಸಬೇಕು. ಯಾವುದೇ ಕಾರಣಕ್ಕೂ ವಿಳಂಭ ಮಾಡಬಾರದು ಎಂದು ಜಿಲ್ಲಾಧಿಕಾರಿ ಅವರು ತಿಳಿಸಿದರು.
ಮೂಲಭೂತ ಸೌಕರ್ಯ ಸಂಬಂಧಿಸಿದಂತೆ ರಸ್ತೆ, ಶಾಲೆ, ಅಂಗನವಾಡಿ ಹಾಗೂ ಸರ್ಕಾರಿ ಕಟ್ಟಡಗಳ ಹಾನಿ ಮತ್ತು ವಿದ್ಯುತ್ ಸಂಬಂಧ ನಷ್ಟ ಉಂಟಾಗಿದ್ದಲ್ಲಿ ಮಾಹಿತಿ ಪಡೆದು ವರದಿ ನೀಡುವಂತೆ ಚಾರುಲತಾ ಸೋಮಲ್ ಅವರು ನಿರ್ದೇಶನ ನೀಡಿದರು. ಕಳೆದ ಬಾರಿ ಪ್ರಾಕೃತಿಕ ವಿಕೋಪದಿಂದ ಕಟ್ಟಡ ದುರಸ್ತಿ ಸಂಬಂಧಿಸಿದಂತೆ ಅನುಮೋದನೆ ಪಡೆದಿರುವುದಕ್ಕೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಅವರು ಹೇಳಿದರು.
ಪರಿಹಾರವನ್ನು ನಿಯಮಾನುಸಾರ ವಿತರಿಸಬೇಕು, ಬಡವರಿಗೆ ಹಾಗೂ ಕೃಷಿಕರಿಗೆ ಯಾವುದೇ ರೀತಿಯಲ್ಲಿ ತೊಂದರೆ ಆಗದಂತೆ ಗಮನ ಹರಿಸಬೇಕು ಎಂದು ಜಿಲ್ಲಾಧಿಕಾರಿ ಆವರು ಸಲಹೆ ಮಾಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಬೆಳೆ ಹಾನಿ ಹಾಗೂ ಮನೆ ಹಾನಿ ಸಂಬಂಧಿಸಿದಂತೆ ಬಡವರಿಗೆ ಪರಿಹಾರ ವಿತರಿಸಬೇಕು. ಭಾಗಶಃ ಹಾನಿಗೆ ತಮ್ಮ ಹಂತದಲ್ಲಿಯೇ ಪರಿಹಾರ ವಿತರಿಸಲು ಅಗತ್ಯ ಕ್ರಮ ವಹಿಸುವಂತೆ ತಹಶಿಲ್ದಾರರಿಗೆ ಸೂಚಿಸಿದರು.
ಮನೆ ಹಾನಿ ಹಾಗೂ ಬೆಳೆ ಹಾನಿ ಪರಿಹಾರ ಸಂಬಂಧ ದೂರುಗಳು ಕೇಳಿಬರದಂತೆ ಗಮನ ಹರಿಸಬೇಕು. ಪ್ರಸಕ್ತ ವರ್ಷದಲ್ಲಿ ರೂ.90 ಕೋಟಿ ಮಳೆಯಿಂದ ಹಾನಿಯಾಗಿದೆ ಎಂದು ಮಾಹಿತಿ ನೀಡಲಾಗಿದ್ದು, ಇನ್ನೂ ಹಾನಿ ಆಗಿದ್ದಲ್ಲಿ ಮಾಹಿತಿ ಒದಗಿಸಬಹುದಾಗಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಹೇಳಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕಾರಾದ ಶಬನಾ ಎಂ.ಶೇಖ್ ಅವರು ಮಾತನಾಡಿ, ರೈತರು ಬೆಳೆ ಸಮೀಕ್ಷೆ ಮಾಡಲು ಅವಕಾಶ ನೀಡಬೇಕು. ಕೃಷಿ, ತೋಟಗಾರಿಕೆ, ಕಂದಾಯ ಅಧಿಕಾರಿಗಳು ಜಂಟಿಯಾಗಿ ಬೆಳೆ ಸಮೀಕ್ಷೆ ಕೈಗೊಳ್ಳಲು ಸಹಕರಿಸುವಂತೆ ಅವರು ಕೋರಿದರು.
ಭತ್ತ ಬೆಳೆಗೆ ವಿಮೆ ಇದ್ದು, ನೋಂದಣೆಗೆ ಬಾಕಿ ಇರುವ ಕೃಷಿಕರು ವಿಮೆ ನೋಂದಣಿ ಮಾಡಿಸಿಕೊಳ್ಳಲು ಮಾಹಿತಿ ನೀಡಬೇಕು ಎಂದು ಅವರು ಕೋರಿದರು.
ಇದೇ ಸಂದರ್ಭದಲ್ಲಿ ಕೋವಿಡ್-19 ನಿಯಂತ್ರಣ ಸಂಬಂಧಿಸಿದಂತೆ ಮಾಹಿತಿ ಪಡೆದ ಜಿಲ್ಲಾಧಿಕಾರಿ ಅವರು ಗಡಿ ಪ್ರದೇಶದ ಚೆಕ್ ಪೋಸ್ಟ್‍ಗಳಲ್ಲಿ ಕೋವಿಡ್ ಪರೀಕ್ಷೆ ಮಾಡಬೇಕು, 72 ಗಂಟೆಗಳ ಅವಧಿಯ ಕೋವಿಡ್ ನೆಗೆಟಿವ್ ವರದಿ ಇರಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ಯಾವುದೇ ಪ್ರದೇಶದಲ್ಲಿ 10 ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳು ಕಂಡುಬಂದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು. ಕಂಟೈನ್‍ಮೆಂಟ್ ವಲಯಗಳಲ್ಲಿ ಹೆಚ್ಚಿನ ನಿಗಾ ವಹಿಸಬೇಕು ಎಂದು ಜಿಲ್ಲಾದಿಕಾರಿ ಅವರು ಸೂಚಿಸಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ಕೋವಿಡ್‍ನಿಂದ ಮೃತಪಟ್ಟ ಬಡವರಿಗೆ 1 ಲಕ್ಷ ಪರಿಹಾರ ನೀಡಲು ಸರ್ಕಾರ ಪ್ರಕಟಿಸಿದೆ, ಆ ದಿಸೆಯಲ್ಲಿ ಕೋವಿಡ್ ನಿಂದ ಮೃತಪಟ್ಟ ಕುಟುಂಬದವರಿಗೆ ವಿಳಂಬ ಮಾಡದೆ ಪರಿಹಾರ ವಿತರಿಸುವಂತೆ ಅವರು ಸೂಚಿಸಿದರು.
ತಹಶಿಲ್ದಾರರಾದ ಮಹೇಶ್, ಗೋವಿಂದ್ ರಾಜು, ಯೋಗಾನಂದ, ತೋಟಗಾರಿಕೆ ಉಪ ನಿರ್ದೇಶಕ ಎಚ್.ಶಶಿಧರ, ಪಶುಪಾಲನ ಉಪ ನಿರ್ದೇಶಕ ಸುರೇಶ್ ಭಟ್, ಕಾಫಿ ಮಂಡಳಿ ಉಪ ನಿದೇಶಕರು ಶಿವಕುಮಾರ ಸ್ವಾಮಿ, ಲೋಕೋಪಯೋಗಿ ಇಲಾಖೆಯ ಎಇಇ ಶಿವರಾಮ್, ಪಿಎಂಜಿಎಸ್‍ವೈ ಎಂಜಿನಿಯರ್ ಪ್ರಭು, ಕಂದಾಯ ಇಲಾಖೆ ಶಿರಸ್ತೆದಾರರು ಪ್ರವೀಣ್ ಕುಮಾರ್, ಪ್ರಕಾಶ್ ಇತರರು ಇದ್ದರು. 

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು