ಮಸೀದಿಯೊಂದರಲ್ಲಿ ಸ್ಫೋಟ, 2 ಸಾವು, 68 ಮಂದಿಗೆ ಗಾಯ
ಪೇಶಾವರ: ಪಾಕಿಸ್ತಾನದ ಪೇಶಾವರ ಮಸೀದಿಯಲ್ಲಿ ಸ್ಫೋಟ (Pakistan Mosque Blast) ಸಂಭವಿಸಿದ್ದು, ಹಲವು ಸಾವು ನೋವುಗಳು ಸಂಭವಿಸಿದೆ ಎಂದು ವರದಿ ಹೇಳಿದೆ. ಪಾಕಿಸ್ತಾನದ ವಾಯುವ್ಯ ನಗರವಾದ ಪೇಶಾವರದಲ್ಲಿ ಸ್ಫೋಟಗೊಂಡಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದ ಪೇಶಾವರದ ಮಸೀದಿಯೊಂದರಲ್ಲಿ ಸ್ಫೋಟದಲ್ಲಿ 90 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ರಾಯಿಟರ್ಸ್ಗೆ ತಿಳಿಸಿದ್ದು, 17 ಜನ ಸಾವನ್ನಪ್ಪಿದ್ದಾರೆ ಎಂದು ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ. ಇನ್ನೂ ಕೆಲವರು ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರಾರ್ಥನೆಗಾಗಿ ಸೇರಿದ್ದ ಮಸೀದಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ಸಿಕಂದರ್ ಖಾನ್ ತಿಳಿಸಿದ್ದಾರೆ. ಕಟ್ಟಡದ ಒಂದು ಭಾಗವು ಕುಸಿದಿದೆ ಮತ್ತು ಹಲವಾರು ಜನರು ಅದರ ಅಡಿಯಲ್ಲಿದ್ದಾರೆ ಎಂದು ಹೇಳಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.
ಅಫ್ಘಾನಿಸ್ತಾನದ ಬಳಿಯ ಪೇಶಾವರದಲ್ಲಿ ಮಧ್ಯಾಹ್ನದ ಪ್ರಾರ್ಥನೆಯ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಮುಖ್ಯಸ್ಥ ಮುಹಮ್ಮದ್ ಇಜಾಜ್ ಖಾನ್ ಎಎಫ್ಪಿಗೆ ತಿಳಿಸಿದ್ದಾರೆ. ನಾವು ಮೃತ ದೇಹಗಳನ್ನು ಗುರುತಿಸಿದ್ದು. ಇದು ತುರ್ತು ಪರಿಸ್ಥಿತಿ ಎಂದು ಪೇಶಾವರದ ಮುಖ್ಯ ಆಸ್ಪತ್ರೆಯ ವಕ್ತಾರ ಮುಹಮ್ಮದ್ ಅಸಿಮ್ ಖಾನ್ ಹೇಳಿದ್ದಾರೆ.