ಗುರುವಾರ, ಅಕ್ಟೋಬರ್ 10, 2024
Ratan Tata: ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ ಇನ್ನಿಲ್ಲ-ಇಂದು ಜಮ್ಮು-ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ; ಮತ ಎಣಿಕೆ ಶುರು-ಮಡಿಕೇರಿ ದಸರಾಕ್ಕೆ ದಸರಾ ಇತಿಹಾಸದಲ್ಲಿ ಅತಿ ಹೆಚ್ಚು 1.50 ಕೋಟಿ ರೂಪಾಯಿ ಅನುದಾನ: ಡಾ. ಮಂತರ್ ಗೌಡ-ಬಿಜೆಪಿಯಿಂದ ವಿಧಾನಪರಿಷತ್ತಿಗೆ ಕಾರ್ಯಕರ್ತ ಅಭ್ಯರ್ಥಿ: ಪುತ್ತೂರಿನ ಕಿಶೋರ್ ಬೊಟ್ಯಾಡಿ ಅಧಿಕೃತ ಅಭ್ಯರ್ಥಿಯಾಗಿ ಘೋಷಣೆ.-30 ವರ್ಷಗಳ ಕಾಲ ಕಾಂಗ್ರೆಸ್ ಕಾರ್ಯಕರ್ತ, 2 ಬಾರಿ ಜಿ. ಪಂ ಚುನಾವಣೆಯಲ್ಲಿ ಘಟಾನುಘಟಿಗಳನ್ನು ಸೋಲಿಸಿದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಯವರಿಗೆ ಸಿಗಬಹುದೇ ಕಾಂಗ್ರೆಸ್ ಟಿಕೆಟ್?-ಮುಡಾ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ; 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ!-Naravi: ಲಾರಿ ಮತ್ತು ಬೈಕ್ ಮಧ್ಯೆ ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರು ಸಾವು-Udayanidhi Stalin: ಉಪ ಮುಖ್ಯಮಂತ್ರಿಯಾಗಿ ಉದಯನಿಧಿ ಸ್ಟಾಲಿನ್ ನೇಮಕ; ತಮಿಳುನಾಡು ರಾಜಕೀಯದಲ್ಲಿ ಹೊಸ ಅಧ್ಯಾಯ!-CM Siddaramaiah: ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜೀನಾಮೆ ನೀಡಬೇಕು ಅಲ್ಲವೇ?-MLC Election:ಸ್ಥಳೀಯ ಸಂಸ್ಥೆಗಳ ಎಂಎಲ್ಸಿ ಚುನಾವಣೆ: ಕಾಂಗ್ರೆಸ್ಸಿನಿಂದ ಚಂದ್ರ ಪ್ರಕಾಶ್ ಶೆಟ್ಟಿ ತುಂಬೆ, ಡಿ. ಆರ್. ರಾಜು ಹೆಸರು ಮುಂಚೂಣಿಯಲ್ಲಿ.
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಸೀದಿಯೊಂದರಲ್ಲಿ ಸ್ಫೋಟ, 2 ಸಾವು, 68 ಮಂದಿಗೆ ಗಾಯ

Twitter
Facebook
LinkedIn
WhatsApp
17 1455684655 gasblast 12 1478931974 31 1490932675

ಪೇಶಾವರ: ಪಾಕಿಸ್ತಾನದ ಪೇಶಾವರ ಮಸೀದಿಯಲ್ಲಿ ಸ್ಫೋಟ (Pakistan Mosque Blast) ಸಂಭವಿಸಿದ್ದು, ಹಲವು ಸಾವು ನೋವುಗಳು ಸಂಭವಿಸಿದೆ ಎಂದು ವರದಿ ಹೇಳಿದೆ. ಪಾಕಿಸ್ತಾನದ ವಾಯುವ್ಯ ನಗರವಾದ ಪೇಶಾವರದಲ್ಲಿ ಸ್ಫೋಟಗೊಂಡಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಪಾಕಿಸ್ತಾನದ ಪೇಶಾವರದ ಮಸೀದಿಯೊಂದರಲ್ಲಿ ಸ್ಫೋಟದಲ್ಲಿ 90 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿ ರಾಯಿಟರ್ಸ್‌ಗೆ ತಿಳಿಸಿದ್ದು, 17 ಜನ  ಸಾವನ್ನಪ್ಪಿದ್ದಾರೆ  ಎಂದು ಆಸ್ಪತ್ರೆಯ ವಕ್ತಾರರು ತಿಳಿಸಿದ್ದಾರೆ. ಇನ್ನೂ ಕೆಲವರು ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಹೆಚ್ಚಿನ ಸಂಖ್ಯೆಯಲ್ಲಿ ಜನರು ಪ್ರಾರ್ಥನೆಗಾಗಿ ಸೇರಿದ್ದ ಮಸೀದಿಯಲ್ಲಿ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿ ಸಿಕಂದರ್ ಖಾನ್ ತಿಳಿಸಿದ್ದಾರೆ. ಕಟ್ಟಡದ ಒಂದು ಭಾಗವು ಕುಸಿದಿದೆ ಮತ್ತು ಹಲವಾರು ಜನರು ಅದರ ಅಡಿಯಲ್ಲಿದ್ದಾರೆ ಎಂದು ಹೇಳಿದ್ದಾರೆ ಎಂದು ಪೊಲೀಸ್ ಅಧಿಕಾರಿ ಹೇಳಿದ್ದಾರೆ.

ಅಫ್ಘಾನಿಸ್ತಾನದ ಬಳಿಯ ಪೇಶಾವರದಲ್ಲಿ ಮಧ್ಯಾಹ್ನದ ಪ್ರಾರ್ಥನೆಯ ವೇಳೆ ಈ ಘಟನೆ ನಡೆದಿದೆ ಎಂದು ಪೊಲೀಸ್ ಮುಖ್ಯಸ್ಥ ಮುಹಮ್ಮದ್ ಇಜಾಜ್ ಖಾನ್ ಎಎಫ್‌ಪಿಗೆ ತಿಳಿಸಿದ್ದಾರೆ. ನಾವು ಮೃತ ದೇಹಗಳನ್ನು ಗುರುತಿಸಿದ್ದು. ಇದು ತುರ್ತು ಪರಿಸ್ಥಿತಿ ಎಂದು ಪೇಶಾವರದ ಮುಖ್ಯ ಆಸ್ಪತ್ರೆಯ ವಕ್ತಾರ ಮುಹಮ್ಮದ್ ಅಸಿಮ್ ಖಾನ್ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ