ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಹಿಳೆಯರ ಮೇಲಿನ ಅಪರಾಧಗಳ ವಿಚಾರದಲ್ಲಿ ಕುರುಡಾಗದಿರಿ: ನಟಿ ರಮ್ಯಾ

Twitter
Facebook
LinkedIn
WhatsApp
ಮಹಿಳೆಯರ ಮೇಲಿನ ಅಪರಾಧಗಳ ವಿಚಾರದಲ್ಲಿ ಕುರುಡಾಗದಿರಿ: ನಟಿ ರಮ್ಯಾ

ಗಂಡಸರು ಮಹಿಳೆಯರ ಮೇಲೆ ಎಸಗುವ ಪ್ರತಿಯೊಂದು ಅಪರಾಧಕ್ಕೂ ಮಹಿಳೆಯರನ್ನೇ ದೂಷಿಸಲಾಗುತ್ತದೆ. ಅದು ಅತ್ಯಾಚಾರ ಆಗಿರಬಹುದು, ದೈಹಿಕ ದೌರ್ಜನ್ಯ ಅಥವಾ ಮೌಖಿಕ ಶೋಷಣೆಯೇ ಆಗಿರಬಹುದು. ನಿನ್ನದೇ ತಪ್ಪು ಎಂದು ಮಹಿಳೆಗೆ ಹೇಳಲಾಗುತ್ತದೆ. ಮಹಿಳೆಯರ ಮೇಲಿನ ಅಪರಾಧಗಳ ವಿಚಾರದಲ್ಲಿ ಕುರುಡಾಗದಿರಿ, ದನಿ ಎತ್ತಿ ಎಂದು ನಟಿ, ಮಾಜಿ ಸಂಸದೆ ನಟಿ ರಮ್ಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಿಳೆಯರ ಮೇಲಿನ ಅಪರಾಧಗಳ ವಿಚಾರದಲ್ಲಿ ಕುರುಡಾಗದಿರಿ: ನಟಿ ರಮ್ಯಾ

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿಯೊರ್ವಳ ಮೇಲೆ ಅಮಾನವೀಯ ಸಾಮೂಹಿಕ ಅತ್ಯಾಚಾರ ನಡೆದಿದ್ದ ಬೆನ್ನಲ್ಲೇ “ಯುವಕ-ಯುವತಿ 7, 7:30ಯ ಸಮಯಕ್ಕೆ ಅಲ್ಲಿಗೆ ಹೋಗಿದ್ದಾರೆ. ಅದು ನಿರ್ಜನವಾದ ಪ್ರದೇಶ. ಅವರು ಹೋಗಬಾರದಿತ್ತು. ಯಾರನ್ನು ಅಲ್ಲಿಗೆ ಹೋಗಬೇಡಿ ಎಂದು ತಡೆಯಲು ನಮಗೆ ಆಗುವುದಿಲ್ಲ. ಅವರು ಹೋಗಿದ್ದಾರೆ” ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಯುವತಿ ಅಲ್ಲಿಗೆ ಹೋಗಿದ್ದೆ ತಪ್ಪು, ಸಂಜೆಯ ವೇಳೆ ಹೊರ ಬಂದಿದ್ದೆ ತಪ್ಪು ಎನ್ನುವಂತೆ ಮಾತನಾಡಿದ್ದರು.
ಅವರ ಹೇಳಿಕೆ ವಿರುದ್ದ ಆಕ್ರೋಶ ವ್ಯಕ್ತವಾಗುತ್ತಿದ್ದು, ರಮ್ಯಾ ಕೂಡ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಅವರು ಬರೆದಿರುವ ಪೋಸ್ಟ್‌ ಹೀಗಿದೆ:
”ಗಂಡಸರು ಮಹಿಳೆಯರ ಮೇಲೆ ಎಸಗುವ ಪ್ರತಿಯೊಂದು ಅಪರಾಧಕ್ಕೂ ಮಹಿಳೆಯರನ್ನೇ ದೂಷಿಸಲಾಗುತ್ತದೆ. ಅದು ಅತ್ಯಾಚಾರ ಆಗಿರಬಹುದು, ದೈಹಿಕ ದೌರ್ಜನ್ಯ ಅಥವಾ ಮೌಖಿಕ ಶೋಷಣೆಯೇ ಆಗಿರಬಹುದು. ನಿನ್ನದೇ ತಪ್ಪು ಎಂದು ಮಹಿಳೆಗೆ ಹೇಳಲಾಗುತ್ತದೆ” ಎಂದಿದ್ದಾರೆ.
“ಇದು ನಿನ್ನ ತಪ್ಪು, ನೀನು ಆ ರೀತಿ ಮಾತನಾಡಬಾರದಿತ್ತು, ನೀನು ಆ ರೀತಿ ಮಾಡಬಾರದಿತ್ತು, ನೀನು ಆ ಉಡುಪನ್ನು ಧರಿಸಬಾರದಿತ್ತು ತುಂಬ ಬಿಗಿ ಆದಂತಹ, ತುಂಬ ಸಡಿಲ ಆಗಿರುವಂತಹ ಬಟ್ಟೆ ಧರಿಸಬಾರದಿತ್ತು, ತಡರಾತ್ರಿ ನೀನು ಹೊರಗೆ ಹೋಗಬಾರದಿತ್ತು, ಹೊರಗೇ ಹೋಗಬಾರದಿತ್ತು, ಮೇಕ್‌ಅಪ್‌ ಹಾಕಿಕೊಳ್ಳಬಾರದಿತ್ತು, ಯಾಕೆ ಕೆಂಪುಬಣ್ಣದ ಲಿಪ್‌ಸ್ಟಿಕ್‌, ನೀವು ಕಣ್ಣು ಮಿಟುಕಿಸಬಾರದಿತ್ತು..ಹೀಗೆ ನೀನು ಅದು ಮಾಡಬಾರದಿತ್ತು…ಇದು ಮಾಡಬಾರದಿತ್ತು… ಏಕೆ..? ಏಕೆಂದರೆ ಪುರುಷರು ಯಾವಗಲೂ ಇರುವುದೇ ಹಾಗೆ, ನಾವು ರಾಜಿ ಮಾಡಿಕೊಳ್ಳಬೇಕು, ನಾವು ಬದಲಾಗಬೇಕು, ನಾವು ಹೊಂದಿಕೊಳ್ಳಬೇಕು, ನಾವು ಸಹಿಸಿಕೊಳ್ಳಬೇಕು- ಇಲ್ಲ. ಇಲ್ಲ… ಇಂಥ ಅಸಂಬದ್ಧವೆಲ್ಲ ಕೊನೆಯಾಗಬೇಕು. ಪ್ರಾಮಾಣಿಕವಾಗಿ ಹೇಳಬೇಕಂದರೆ ಈ ದೂಷಣೆಯನ್ನು ಒಪ್ಪಿಕೊಳ್ಳುವ ತಪ್ಪನ್ನು ನಾನೂ ಮಾಡಿದ್ದೇನೆ. ಸ್ನೇಹಿತರಿಗೂ ಹೇಳಿದ್ದೇನೆ. ಆದರೆ ಇನ್ಮುಂದೆ ಸಾಧ್ಯವಿಲ್ಲ. ಮಹಿಳೆಯರ ವಿರುದ್ಧ ನಡೆಯುವ ಅಪರಾಧಗಳನ್ನು ನೋಡಿಕೊಂಡು ಸುಮ್ಮನಿರಬೇಡಿ, ಕುರುಡಾಗದಿರಿ. ಧ್ವನಿ ಎತ್ತಿ’ ಇದು ಇಂದಿಗೆ ಕೊನೆಯಾಗಲಿ” ಎಂದು ರಮ್ಯಾ ಪೋಸ್ಟ್ ಮಾಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು