
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕೊಡಗು:ಅರಕಲಗೂಡು ತಾಲೂಕಿನಲ್ಲಿ ಹಾದು ಹೋಗಲಿರುವ ಮಾಗಡಿಯಿಂದ – ಸೋಮವಾರಪೇಟೆ ವರೆಗಿನ ರಾಜ್ಯ ಹೆದ್ದಾರಿ ಕಾಮಗಾರಿಗೆ ತಕ್ಷಣದಿಂದಲೇ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿ ಎಂದು ಕೆಶಿಪ್ ಯೋಜನೆಯ ವಿಶೇಷ ಜಿಲ್ಲಾಧಿಕಾರಿ ಆರ್. ಲೋಕನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ತಾಲೂಕು ಕಚೇರಿ ಸಭಾಂಗಣದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು,ಮಾಗಡಿಯಿಂದ – ಅರಕಲಗೂಡು -ಸೋಮವಾರಪೇಟೆವರೆಗಿನ ರಾಜ್ಯ ಹೆದ್ದಾರಿಗೆ ರಾಜ್ಯ ಸರ್ಕಾರ 1140 ಕೋಟಿ ರು ವೆಚ್ಚದಲ್ಲಿ 166 ಕಿಲೋಮೀಟರ್ ರಸ್ತೆ ನಿರ್ಮಾಣ ಮಾಡುತ್ತಿದ್ದು ಇದರಲ್ಲಿ 21 ಕಿಲೋಮೀಟರ್ ತಾಲೂಕಿನಲ್ಲಿ ಹಾದುಹೋಗುವುದರಿಂದ ರಾಜ್ಯ ಹೆದ್ದಾರಿಗೆ ಅವಶ್ಯಕವಿರುವ 1938 ಎಕರೆ ಜಮೀನನ್ನು ಭೂಸ್ವಾಧೀನ ಪಡಿಸಿಕೊಳ್ಳಲು ತಾಲ್ಲೂಕು ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ತಕ್ಷಣದಿಂದಲೇ ಕಾರ್ಯಪ್ರವೃತ್ತವಾಗಬೇಕು. ರಸ್ತೆಗೆ ಭೂಮಿ ನೀಡಲು ಒಪ್ಪದ ರೈತರನ್ನು ಮನವೊಲಿಸಿ ಭೂಮಿಯನ್ನು ವಶಪಡಿಸಿಕೊಳ್ಳಬೇಕು ಇಲ್ಲದಿದ್ದರೆ ಉಪವಿಭಾಗಾಧಿಕಾರಿಯ ಮೂಲಕ ಅಗತ್ಯ ಮಾಹಿತಿಯನ್ನು ನಮಗೆ ಕಳುಹಿಸಿದರೆ ಸರ್ಕಾರದ ನಿಯಮಾವಳಿ ಪ್ರಕಾರ ಭೂ ಸ್ವಾಧೀನ ಪಡಿಸಿಕೊಳ್ಳಲಾಗುವುದು ಎಂದರು.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್