ಮಂಗಳವಾರ, ಅಕ್ಟೋಬರ್ 3, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾಜಿ ಶಾಸಕ ವೈಎಸ್‌ವಿ ದತ್ತಾ, ಶಾಸಕ ಹೆಚ್.ನಾಗೇಶ್ ಕಾಂಗ್ರೆಸ್ ಸೇರ್ಪಡೆ

Twitter
Facebook
LinkedIn
WhatsApp
KPCC 01 780x450 1

ಬೆಂಗಳೂರು: ಜೆಡಿಎಸ್  ಮಾಜಿ ಶಾಸಕ ವೈಎಸ್‌ವಿ ದತ್ತಾ ಹಾಗೂ ಪಕ್ಷೇತರ ಶಾಸಕ ಹೆಚ್. ನಾಗೇಶ್  ಶನಿವಾರ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡಿದ್ದಾರೆ.

ಕೆಪಿಸಿಸಿಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ದತ್ತಾ, ನಾಗೇಶ್ ಅವರಿಗೆ ಕಾಂಗ್ರೆಸ್ ಪಕ್ಷದ ಶಾಲು, ಪಕ್ಷದ ಬಾವುಟ ನೀಡಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಮೈಸೂರು ಮುಡಾ ಮಾಜಿ ಅಧ್ಯಕ್ಷ ಮೋಹನ್ ಕುಮಾರ್ ಸಹ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.

ನೂಕು ನುಗ್ಗಲು: ಪ್ರಬಲ ನಾಯಕರು ಪಕ್ಷ ಸೇರ್ಪಡೆಯಾಗುತ್ತಿದ್ದಂತೆ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸತೊಡಗಿದರು. ಆದ್ದರಿಂದ ನೂಕು ನುಗ್ಗಲು ಶುರುವಾಗಿತ್ತು. ಈ ವೇಳೆ ಕಾರ್ಯಕರ್ತರನ್ನ ಗದರಿಸಿದ ಡಿಕೆಶಿ, ಎಲ್ಲರೂ ಶಾಂತಿಯಿಂದ ಇದ್ದರೇ ಸಭೆ ಮಾಡುತ್ತೇನೆ ಇಲ್ಲದಿದ್ದರೆ ಮಾಡಲ್ಲ ಎಂದು ಹೇಳಿದರು. ಬಳಿಕ ಕಾರ್ಯಕರ್ತರು ಶಾಂತಿಯಾದರು.

ಪಕ್ಷ ಸೇರ್ಪಡೆ ಬಳಿಕ ಮಾತನಾಡಿದ ವೈಎಸ್‌ವಿ ದತ್ತಾ, ಇದು ಮಾತನಾಡುವ ಸಮಯವಲ್ಲ, ಕೆಲಸ ಮಾಡುವ ಸಮಯ. ಕಳೆದ ಹಲವು ದಶಕಗಳಿಂದ ನಾನು ಒಂದೇ ಪಕ್ಷದಲ್ಲಿದ್ದೆ. ಆದ್ರೆ ಈಗ ಈ ತೀರ್ಮಾನ ತೆಗೆದುಕೊಂಡಿದ್ದೇನೆ. ಇದು ನಮ್ಮ ರಾಷ್ಟ್ರದ ತುರ್ತು ಅಗತ್ಯವಾಗಿದೆ ಎಂದರು

KPCC 05

ಸಂವಿಧಾನ ಹಾಗೂ ಸೌಹಾರ್ದತೆಯನ್ನ ಬುಡಮೇಲು ಮಾಡುವ ಪ್ರಯತ್ನಗಳು ನಡೆದಿವೆ. ಸರ್ವಾಧಿಕಾರಿ ಶಕ್ತಿಗಳಿಗೆ ಸೋಲಾಗಲಿ ಅನ್ನೋ ಕಾರಣಕ್ಕೆ ಯಾವುದೇ ಶರತ್ತುಗಳಿಲ್ಲದೆ ಪಕ್ಷ ಸೇರುತ್ತಿದ್ದೇನೆ. ನಾನು ಮೊದಲಿನಿಂದಲೂ ಎಡಪಂಥೀಯ. ಹೀಗಾಗಿ ನನಗೆ ಅತ್ಯಂತ ಹತ್ತಿರ ಎನಿಸಿದ ಕಾಂಗ್ರೆಸ್ ಪಕ್ಷ ಸೇರುತ್ತಿದ್ದೇನೆ. ಕ್ಷೇತ್ರದಲ್ಲೂ ಮುಖಂಡರು, ಕಾರ್ಯಕರ್ತರೊಂದಿಗೆ ಚರ್ಚಿಸಿದ್ದೇನೆ. ನಾನು ಕಾರ್ಯಕರ್ತನಾಗಿ ಕಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಶ್ರಮಿಸುತ್ತೇನೆ. ನನ್ನನ್ನು ಸದ್ಬಳಕೆ ಮಾಡಿಕೊಳ್ಳಿ ಎಂದು ಮನವಿ ಮಾಡಿದರು.

ಮಾಜಿ ಸಚಿವ, ಹಾಲಿ ಶಾಸಕ ಹೆಚ್. ನಾಗೇಶ್ ಮಾತನಾಡಿ, ನನಗೆ ಕಾಂಗ್ರೆಸ್ ಸಿದ್ಧಾಂತಗಳು ಇಷ್ಟ ಆಗಿ ಸೇರುತ್ತಿದ್ದೇನೆ. ನನ್ನ ತಂದೆ-ತಾಯಿ ಕೂಡ `ಕೈ’ಗೆ ಮತ ಕೊಡುತ್ತಿದ್ದರು. ರಾಜ್ಯಾದ್ಯಂತ ಪ್ರವಾಸ ಮಾಡಿ ನಮ್ಮ ಜನಾಂಗಕ್ಕೆ ತಿಳಿಹೇಳುತ್ತೇನೆ. ಕಾಂಗ್ರೆಸ್ ದಾರಿಯೇ ನನ್ನ ದಾರಿ. ಇನ್ಮುಂದೆ ನಾನು ಎಲ್ಲೂ ಹೋಗಲ್ಲ. ಸ್ವಂತ ಬಲದ ಮೇಲೆ ಕಾಂಗ್ರೆಸ್ ಅಧಿಕಾರಕ್ಕೆ ತರಬೇಕು ಎಂದು ಕರೆ ನೀಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ