ಶುಕ್ರವಾರ, ಜೂನ್ 9, 2023
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು-ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!-ಭಯಾನಕ ಮರ್ಡರ್; ಸಂಗಾತಿಯ ಶರೀರವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ ಪ್ರೇಮಿ..!-ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ-ಸುಧಾಕರ್​​ನಿಂದಲೇ ನಾನು ಸೋತಿದ್ದು; ಎಂಟಿಬಿ ನಾಗರಾಜ್ ನೇರ ಆರೋಪ-ಕೇರಳಕ್ಕೆ ಮಳೆಯ ಅಬ್ಬರ ಶುರು, 48 ಗಂಟೆಗಳಲ್ಲಿ ಕರ್ನಾಟಕದಲ್ಲೂ ಮಳೆ!-16 ಸಾವಿರ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದ ಹೃದ್ರೋಗ ತಜ್ಞ ಹೃದಯಾಘಾತದಿಂದ ನಿಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಾಜಿ ಸಚಿವ ಸಿಎನ್ ಅಶ್ವತ್ಥ ನಾರಾಯಣ ವಿರುದ್ಧ ಮೈಸೂರಿನಲ್ಲಿ ದಾಖಲಾಗಿದ್ದ ಪ್ರಕರಣ ಮಂಡ್ಯ ಪೊಲೀಸ್ ಠಾಣೆಗೆ ವರ್ಗಾವಣೆ

Twitter
Facebook
LinkedIn
WhatsApp
Untitled 19

ಮೈಸೂರು: ಸಿದ್ದರಾಮಯ್ಯ (Siddaramaiah) ಅವರನ್ನು ಮುಗಿಸಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಮಾಜಿ ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ (Dr. CN Ashwath Narayan) ವಿರುದ್ಧ ಮೈಸೂರಿನಲ್ಲಿ ದಾಖಲಾಗಿದ್ದ ಪ್ರಕರಣ ಮಂಡ್ಯ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಫೆಬ್ರವರಿ ತಿಂಗಳಲ್ಲಿ ಮಂಡ್ಯದ ಸಾತನೂರಿನಲ್ಲಿ ಸಿದ್ದರಾಮಯ್ಯ ಕೊಲೆಗೆ ಪ್ರಚೋದಿಸುವ ಹೇಳಿಕೆ ನೀಡಿದ್ದಾಗಿ ಆರೋಪಿಸಿ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಅವರು ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದ ಪ್ರಕರಣ ಇದಾಗಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಆಗಿ ಹೋದ ಘಟನೆಗಳನ್ನು ಕೆದಕಿ ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಿಸಲಾಗುತ್ತಿದೆ. ಸಿಎನ್ ಅಶ್ವತ್ಥನಾರಾಯಣ, ಶಾಸಕ ಹರೀಶ್ ಪೂಂಜಾ ಸೇರಿದಂತೆ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಕ್ರಮ ಆಗಲಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಹೇಳಿದ್ದಾರೆ. ನಿನ್ನೆ ಬೆಂಗಳೂರು ನಗರ ಪೊಲೀಸ್ ಅಧಿಕಾರಿಗಳ ಸಭೆಯ ನಂತರ ಈ ಹೇಳಿಕೆ ನೀಡಿದ್ದರು.

ಬಿಜೆಪಿ ಸರ್ಕಾರದಲ್ಲಿ ಉನ್ನತ ಶಿಕ್ಷಣ ಸಚಿವರಾಗಿದ್ದ ಅಶ್ವತ್ಥ ನಾರಾಯಣ ಅವರು ಮಂಡ್ಯದ ಸಾತನೂರಿನಲ್ಲಿ ಸಿದ್ದರಾಮಯ್ಯ ಅವರನ್ನು ಟೀಕಿಸುವ ಭರದಲ್ಲಿ ಟಿಪ್ಪು ಮುಗಿಸಿದಂತೆ ಅವರನ್ನೂ ಮುಗಿಸಬೇಕು ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಕ್ಕೆ ಕಾಂಗ್ರೆಸ್ ನಾಯಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಎಚ್ಚೆತ್ತಿದ್ದ ಅವರು ಕ್ಷಮಾಪಣೆ ಕೇಳಿದ್ದರು. ಅದಾಗ್ಯೂ, ಅಶ್ವತ್ಥನಾರಾಯಣ ವಿರುದ್ಧ ಫೆಬ್ರವರಿ 17ರಂದು ಪ್ರಕರಣ ದಾಖಲಿಸಲಾಗಿತ್ತು. ಆದರೆ ಕ್ರಮ ಕೈಗೊಂಡಿರಲಿಲ್ಲ.

ಕಾಂಗ್ರೆಸ್ ಸರ್ಕಾರ ಬಂದ ನಂತರ ಮಂಡ್ಯ ಕಾಂಗ್ರೆಸ್ ಜಿಲ್ಲಾ ಸಮಿತಿ ಅಧ್ಯಕ್ಷ ಡಾ.ಬಿ.ಜೆ. ಅಜಯ್ ಕುಮಾರ್ ಅವರು ಠಾಣೆಗೆ ಆಗಮಿಸಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು. ಈ ವೇಳೆ, ಹಿಂದೆ ನೀಡಿದ ದೂರಿನ ಅನ್ವಯ ಎಫ್​ಐಆರ್ ದಾಖಲಿಸಲು ಸಾಧ್ಯವಿಲ್ಲ, ಮತ್ತೆ ಪ್ರಕರಣ ನೀಡುವಂತೆ ಇನ್​ಸ್ಪೆಕ್ಟರ್ ಅವರು ನೀಡಿದ ಸೂಚನೆ ಮೇರೆಗೆ ಲಕ್ಷ್ಮಣ ಅವರು ದೂರು ದಾಖಲಿಸಿದ್ದರು.

ತನ್ನ ವಿರುದ್ಧ ದಾಖಲಾದ ಪ್ರಕರಣದ ಬಗ್ಗೆ ಪ್ರತಿಕ್ರಿಯೆ ನೀಡಿದ್ದ ಅಶ್ವತ್ಥ ನಾರಾಯಣ, ಕಾಂಗ್ರೆಸ್ ಪಕ್ಷವನ್ನು ಚುನಾವಣೆಯಲ್ಲಿ ಸೋಲಿಸಬೇಕು ಎಂಬ ಚಿಂತನೆಯಲ್ಲಿ ಹೇಳಿದ್ದೆ. ವೈಯಕ್ತಿಕವಾಗಿ ನನಗೆ ಸಿದ್ದರಾಮಯ್ಯ ಮೇಲೆ ಗೌರವ ಇದೆ. ಸೈದ್ದಾಂತಿಕವಾಗಿ ನಮಗೂ ಅವರಿಗೂ ಬಹಳ ವ್ಯತ್ಯಾಸ ಇದೆ. ನಾನು ಸದನದಲ್ಲಿ ಕೂಡಾ ಸ್ಪಷ್ಟವಾಗಿ ಹೇಳಿಕೆ ಕೊಟ್ಟಿದ್ದೇನೆ ಎಂದು ಸ್ಪಷ್ಟನೆ ನೀಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ