ಬುಧವಾರ, ಫೆಬ್ರವರಿ 8, 2023
‘ಐ ಲವ್ ಯೂ’ ಎಂದ ನಟಿ ಶ್ರಾವ್ಯ ರಾವ್-ಇಂದಿನಿಂದ ಕರ್ನಾಟಕ vs ಸೌರಾಷ್ಟ್ರ ಸೆಮೀಸ್ ಫೈಟ್-ಯುವತಿಗೆ ಮೆಸೇಜ್ ಮಾಡಿದಕ್ಕೆ ಸಹೋದರನಿಂದ ಯುವಕನ ಮೇಲೆ ಹಲ್ಲೆ-ಮದುವೆಗೂ ಮುಂಚೆ ಕಂಡೀಷನ್ಸ್ ಅಪ್ಲೈ- ಬೆಂಗಳೂರಿನ ವಧು, ವರರ ನಯಾ ಟ್ರೆಂಡ್-ಟರ್ಕಿ ಸಿರಿಯಾ ಭೂಕಂಪ: ಸಾವಿನ ಸಂಖ್ಯೆ 8 ಸಾವಿರ; ಗಾಯಾಳುಗಳ ಸಂಖ್ಯೆ 35 ಸಾವಿರ, ರಕ್ಷಣಾ ಕಾರ್ಯಕ್ಕೆ ಅಡಚಣೆ-ಮನೆ ಮುಂದೆ ಮಲಗಿದವರ ಮೇಲೆ ಹುಚ್ಚು ನಾಯಿ ದಾಳಿ – 25ಕ್ಕೂ ಅಧಿಕ ಜನ ಆಸ್ಪತ್ರೆ ದಾಖಲು-ಕಾರ್ಕಳ : ಮಹಿಳೆ ನೇಣು ಬಿಗಿದು ಆತ್ಮಹತ್ಯೆ-ಕಟ್ಟಡದ ಅವಶೇಷಗಳಡಿಯೇ ಮಗುವಿಗೆ ಜನ್ಮ ನೀಡಿ ಮಹಿಳೆ ಸಾವು-ಬೈಕ್‌ನಲ್ಲಿ ರಾಂಚಿ ಸ್ಟೇಡಿಯಂನಿಂದ ಬಿಂದಾಸ್‌ ಆಗಿ ಹೊರಟ ಎಂ ಎಸ್ ಧೋನಿ..! ವಿಡಿಯೋ ವೈರಲ್-ಹೊಸ ಮುಖದ ಬಗ್ಗೆ ರಾಹುಲ್ ಗಾಂಧಿ ಒಲವು. ಕೊಡಗಿನಲ್ಲಿ ಪೊನ್ನನ್ನ,ಡಾ. ಮಂತರ್ ಗೌಡ, ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಬಹುತೇಕ ಫಿಕ್ಸ್.
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಾರೊಕ್ಕೂ ವಿರುದ್ಧ ಪಂದ್ಯ ಸೋತ ಬೆಲ್ಜಿಯಂ – ಅಭಿಮಾನಿಗಳಿಂದ ಹಿಂಸಾಚಾರ

Twitter
Facebook
LinkedIn
WhatsApp
ಮಾರೊಕ್ಕೂ ವಿರುದ್ಧ ಪಂದ್ಯ ಸೋತ ಬೆಲ್ಜಿಯಂ – ಅಭಿಮಾನಿಗಳಿಂದ ಹಿಂಸಾಚಾರ

ಬೆಲ್ಜಿಯನ್: ಫಿಫಾ ವಿಶ್ವಕಪ್‍ನಲ್ಲಿ (FIFA World Cup) ಮಾರೊಕ್ಕೂ (Morocco) ವಿರುದ್ಧ ಬೆಲ್ಜಿಯಂ (Belgium) ಸೋತ ಬೆನ್ನಲ್ಲೇ ಬೆಲ್ಜಿಯನ್‍ನಲ್ಲಿ ಅಭಿಮಾನಿಗಳು ರೊಚ್ಚಿಗೆದ್ದು ಹಿಂಸಾಚಾರಕ್ಕಿಳಿದಿದ್ದಾರೆ.

ಬೆಲ್ಜಿಯಂ ವಿರುದ್ಧ ಮಾರೊಕ್ಕೂ 2-0 ಅಂತರದಲ್ಲಿ ಗೆದ್ದ ಬೆನ್ನಲ್ಲೇ ಇತ್ತ ಬೆಲ್ಜಿಯಂ ರಾಜಧಾನಿ ಬೆಲ್ಜಿಯನ್‍ನಲ್ಲಿ ಫುಟ್‍ಬಾಲ್ ಅಭಿಮಾನಿಗಳು ಹಿಂಸಾಚಾರಕ್ಕೆ ಇಳಿದಿದ್ದಾರೆ. ರಸ್ತೆಯಲ್ಲಿದ್ದ ಕಾರ್, ಬೈಕ್‍ಗಳಿಗೆ ಬೆಂಕಿ ಇಟ್ಟು ಮಾರೊಕ್ಕೂ ದೇಶದ ಧ್ವಜವನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಫುಟ್‍ಬಾಲ್ ಅಭಿಮಾನಿಗಳ ಕೋಪಕ್ಕೆ ಹಿಂಸಾಚಾರ ಹೆಚ್ಚುತ್ತಿದ್ದಂತೆ ಬೆಲ್ಜಿಯಂ ಪೊಲೀಸರು 12ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಿದ್ದಾರೆ.

ಹಿಂಸಾಚಾರಕ್ಕೆ ಇಳಿದ ಗುಂಪೊಂದು ರಾಷ್ಟ್ರೀಯ ಹೆದ್ದಾರಿಗಿಳಿದು ದಾಂಧಲೆಗೆ ಮುಂದಾಗಿದೆ. ಘಟನೆಯಲ್ಲಿ ಪತ್ರಕರ್ತರು ಸೇರಿದಂತೆ ಹಲವು ಮಂದಿ ಗಾಯಗೊಂಡಿದ್ದು, ಪೊಲೀಸರು ಹಿಂಸಾಚಾರದ ಸ್ಥಳದಲ್ಲಿ ಟಿಯರ್ ಗ್ಯಾಸ್ ಹಾಗೂ ನೀರು ಸಿಂಪಡಿಸಿ ಜನರನ್ನು ಚದುರಿಸಿದ್ದಾರೆ. ಈಗಾಗಲೇ ಬೆಲ್ಜಿಯನ್‍ನಲ್ಲಿ ಹಲವು ನಿರ್ಬಂಧಗಳನ್ನು ಹೊರಡಿಸಲಾಗಿದ್ದು, ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಸ್ಥಳೀಯ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ