ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಿಜೋರಾಂ ಘರ್ಷಣೆ : ಅಸ್ಸಾಂನ ಐವರು ಪೊಲೀಸರು ದುರಂತ ಸಾವು.

Twitter
Facebook
LinkedIn
WhatsApp
ಮಿಜೋರಾಂ  ಘರ್ಷಣೆ : ಅಸ್ಸಾಂನ ಐವರು ಪೊಲೀಸರು ದುರಂತ ಸಾವು.

ಅಸ್ಸಾಂ ಮತ್ತು ಮಿಜೋರಾಂ ನಡುವಿನ ಗಡಿ ವಿವಾದದ ತೀವ್ರ ಉಲ್ಬಣಗೊಂಡಿದ್ದು, ಹಿಂಸಾತ್ಮಕ ಘರ್ಷಣೆಯಲ್ಲಿ ಕನಿಷ್ಠ ಐದು ಅಸ್ಸಾಂ ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ. 50ಕ್ಕೂ ಹೆಚ್ಚು ಸಾರ್ವಜನಿಕರು ಗಾಯಗೊಂಡಿದ್ದಾರೆ. ಕಚಾರ್ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಕೂಡ ಗುಂಡೇಟಿನಿಂದ ಗಾಯಗೊಂಡಿದ್ದಾರೆ ಎಂದು ಅಸ್ಸಾಂ ಸರಕಾರ ತಿಳಿಸಿದೆ.
ಅಸ್ಸಾಂನ ವೈರೆಂಟ್ಗೆ ಪಟ್ಟಣದಲ್ಲಿ ಹಿಂಸಾಚಾರ ತಲೆದೋರಿದೆ. ಲೈಲಾಪುರದಲ್ಲಿ ಮೀಸಲು ಅರಣ್ಯ ಪ್ರದೇಶವನ್ನು ನಾಶಪಡಿಸಿ ರಸ್ತೆ ನಿರ್ಮಿಸಲಾಗುತ್ತಿದೆ ಮತ್ತು ಸೇನಾ ಶಿಬಿರವೊಂದನ್ನು ಸ್ಥಾಪನೆ ಮಾಡಲಾಗುತ್ತಿದೆ ಎಂದು ಮಿಜೋರಾಂ ವಿರುದ್ಧ ಅಸ್ಸಾಂ ಆರೋಪಿಸಿದೆ. ದುಷ್ಕರ್ಮಿಗಳು ತನ್ನ ಪೊಲೀಸರ ಮೇಲೆ ದಾಳಿ ನಡೆಸಿದ್ದು, ಬಳಿಕ ಪರಿಸ್ಥಿತಿ ನಿಯಂತ್ರಿಸಲು ಹೋದ ಮಿಜೋರಾಂ ಪೊಲೀಸರ ಮೇಲೆಯೂ ದಾಳಿ ನಡೆದಿದೆ ಎಂದು ಅದು ಹೇಳಿದೆ.
ಅಸ್ಸಾಂ ಪೊಲೀಸರು ಗಡಿ ದಾಟಿ ಒಳಬಂದ ಬಳಿಕ ಹಿಂಸಾಚಾರ ಆರಂಭವಾಗಿದೆ. ಅಸ್ಸಾಂ ಪೊಲೀಸರು ರಾಷ್ಟ್ರೀಯ ಹೆದ್ದಾರಿಯಲ್ಲಿನ ವಾಹನಗಳಿಗೆ ಹಾನಿ ಮಾಡಿದ್ದಲ್ಲದೆ, ತನ್ನ ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ಮಿಜೋರಾಂ ಆರೋಪಿಸಿದೆ.
ಬೆಳಿಗ್ಗೆ 11.30ರ ವೇಳೆಗೆ ಸುಮಾರು 200 ಅಸ್ಸಾಂ ಪೊಲೀಸರು ವೈರೆಂಟ್ಗೆ ಪಟ್ಟಣದ ಆಟೋ ರಿಕ್ಷಾ ನಿಲ್ದಾಣಕ್ಕೆ ಬಂದಿದ್ದರು. ಸಮೀಪದಲ್ಲಿದ್ದ ಕೇಂದ್ರ ಮೀಸಲು ಪೊಲೀಸ್ ಪಡೆಯ ನೆಲೆಯನ್ನು ಬಲವಂತವಾಗಿ ಮುಚ್ಚಿಸಿದರು. ಬಳಿಕ ಹೆದ್ದಾರಿಯಲ್ಲಿ ವಾಹನಗಳಿಗೆ ಹಾನಿ ಮಾಡಿದರು. ಅದನ್ನು ತಡೆಯಲು ಪ್ರಯತ್ನಿಸಿದ ನಮ್ಮ ಅಧಿಕಾರಿಗಳ ಮಾತನ್ನು ಅವರು ಕೇಳಲಿಲ್ಲ. ಅಶ್ರುವಾಯು, ಗ್ರೆನೇಡ್‌ಗಳನ್ನು ಎಸೆದರು. ಸಂಜೆ 4.30ರ ವೇಳೆಗೆ ಗುಂಡುಗಳನ್ನು ಕೂಡ ಹಾರಿಸಿದರು ಎಂದು ಮಿಜೋರಾಂ ಮುಖ್ಯಮಂತ್ರಿ ಜೊರಂತಗಾ ಆರೋಪಿಸಿದ್ದಾರೆ. ಈ ಎರಡೂ ರಾಜ್ಯಗಳ ಸಿಎಂಗಳು ಟ್ವಿಟ್ಟರ್‌ನಲ್ಲಿ ಕಿತ್ತಾಡಿಕೊಂಡಿದ್ದಾರೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ, ಟ್ವಿಟ್ಟರ್ ಪೋಸ್ಟ್ನಲ್ಲಿ ಅಗಲಿದ ಅಸ್ಸಾಂ ಪೋಲಿಸರಿಗೆ ಸಂತಾಪ ಸೂಚಿಸಿದ್ದಾರೆ.
ಮಿಜೋರಾಂ ಗಡಿಯಲ್ಲಿ ನಡೆದ ಘರ್ಷಣೆಯಲ್ಲಿ ಅಸ್ಸಾಂ ಐವರು ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಎಂದು ಮುಖ್ಯಮಂತ್ರಿ ಹಿಮಂತ ಶರ್ಮಾ ಸೋಮವಾರ ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು