ಭಾನುವಾರ, ಸೆಪ್ಟೆಂಬರ್ 15, 2024
20 ವರ್ಷಗಳ ಬಳಿಕ ಹುಕ್ಕೇರಿ ಪುರಸಭೆ ಕಾಂಗ್ರೆಸ್ ತೆಕ್ಕೆಗೆ-ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೀನು ಹಿಡಿಯಲು ಹೋಗಿದ್ದವರಿಗೆ ಗುಂಡೇಟು- ಓರ್ವ ಸಾವು, ಇಬ್ಬರು ಗಂಭೀರ

Twitter
Facebook
LinkedIn
WhatsApp
HASSAN FIRING

ಹಾಸನ: ಮೀನು (Fish) ಹಿಡಿಯಲು ಹೋಗಿದ್ದವರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದು ಸ್ಥಳದಲ್ಲೇ ಓರ್ವ ಸಾವನ್ನಪ್ಪಿ, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ (Hassan) ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಹೋಬಳಿ ತಂಬಲಗೇರಿ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ.

ತಂಬಲಗೇರಿ ಗ್ರಾಮದ ನವೀನ್ ಅಲಿಯಾಸ್ ಪಚ್ಚಿ (39) ಮೃತ ವ್ಯಕ್ತಿಯಾಗಿದ್ದು, ದಯಾನಂದ ಹಾಗೂ ಪದ್ಮನಾಭ ಎಂಬವರು ಗುಂಡಿನ ತಗುಲಿ ಗಂಭೀರವಾಗಿ ಗಾಯಗೊಂಡಿದ್ದು ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನವೀನ್, ದಯಾನಂದ, ಪದ್ಮನಾಭ, ರಾಜಾಚಾರಿ ಸೇರಿ ನಾಲ್ವರು ರಾತ್ರಿ ಮೀನು ಹಿಡಿಯಲು ತೆರಳಿದ್ದರು. ಹೇಮಾವತಿ ನದಿಯ ದಡದಲ್ಲಿ ಮೀನು ಹಿಡಿಯಲು ಬೆಂಕಿ ಹಾಕಿಕೊಂಡು ಕೂಳಿತಿದ್ದ ವೇಳೆ ನಾಲ್ವರು ಸ್ನೇಹಿತರ ಮೇಲೆ ಅಪರಿಚಿತರು ಗುಂಡಿನ ದಾಳಿ ನಡೆಸಿದ್ದಾರೆ. ನವೀನ್ ಸ್ಥಳದಲ್ಲೇ ಗುಂಡಿಗೆ ಬಲಿಯಾದರೆ, ದಯಾನಂದ ಹಾಗೂ ಪದ್ಮನಾಭ ಗಂಭೀರವಾಗಿ ಗಾಯಗೊಂಡಿದ್ದಾರೆ.

ಅದೃಷ್ಟವಶಾತ್ ರಾಜಾಚಾರಿ ಗುಂಡಿನ ದಾಳಿಯಿಂದ ಪಾರಾಗಿದ್ದಾರೆ. ಹತ್ಯೆಗೀಡಾದ ನವೀನ್ ಬಿಜೆಪಿ (BJP Activist) ಯ ಸಕ್ರಿಯ ಕಾರ್ಯಕರ್ತನಾಗಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿಯೂ ಗುರುತಿಸಿಕೊಂಡಿದ್ದರು. ಶಿಕಾರಿಗೆ ತೆರಳಿದ್ದವರಿಂದ ಗುಂಡಿನ ದಾಳಿ ನಡೆದಿದೆಯೋ ಅಥವಾ ಹತ್ಯೆ ಮಾಡಲೆಂದು ನಡೆಸಿದ ದಾಳಿಯೋ ಎಂಬ ಬಗ್ಗೆ ತನಿಖೆ ತೀವ್ರಗೊಂಡಿದ್ದು, ಸ್ಥಳ ಪರಿಶೀಲನೆಗಾಗಿ ವಿಧಿ ವಿಜ್ಞಾನ ಪ್ರಯೋಗಾಯದ ತಜ್ಞರು ತಯಾರಿ ನಡೆಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ