ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೀರಾಬಾಯಿ ಗೆ ಒಂದು ಕೋಟಿ ರೂಪಾಯಿ. ಸರ್ಕಾರಿ ಹುದ್ದೆ!

Twitter
Facebook
LinkedIn
WhatsApp
ಮೀರಾಬಾಯಿಗೆ ಒಂದು ಕೋಟಿ ರೂಪಾಯಿ. ಸರ್ಕಾರಿ ಹುದ್ದೆ!

ಇಂಫಾಲ್: ಟೋಕಿಯೋ ಒಲಿಂಪಿಕ್ಸ್​ನ ಮೊದಲ ದಿನವೇ ಭಾರತಕ್ಕೆ ಬೆಳ್ಳಿ ಪದಕ ತಂದುಕೊಟ್ಟ ಮೀರಾಬಾಯಿ ಚಾನುಗೆ ದೇಶಾದ್ಯಂತ ಸಾಕಷ್ಟು ಪ್ರಶಂಸೆಗಳ ಸುರಿಪ್ರಮಳೆ ಹರಿದುಬರುತ್ತಿದೆ. ಪ್ರತಿಯೊಬ್ಬರು ವಾಟ್ಸ್​ಅಪ್​ ಸ್ಟೇಟಸ್​ ಹಾಗೂ ಫೇಸ್​ಬುಕ್​ ಮತ್ತು ಇನ್​ಸ್ಟಾಗ್ರಾಂ ಸ್ಟೋರಿಯಲ್ಲಿ ಮೀರಾಬಾಯಿ ಚಾನು ಫೋಟೋ ಶೇರ್​ ಮಾಡಿಕೊಂಡು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಇದೀಗ ಮೀರಾಬಾಯಿ ಚಾನು ಸಾಧನೆಗೆ ತಲೆಬಾಗಿರುವ ಮಣಿಪುರ ಸರ್ಕಾರ ಮೀರಾಗೆ ಬಹುಮಾನವಾಗಿ 1 ಕೋಟಿ ರೂಪಾಯಿಗಳನ್ನು ಘೋಷಿಸಿದೆ. ಮೀರಾಬಾಯಿ ಮಣಿಪುರ ಮೂಲದವರು. ರಾಜ್ಯಕ್ಕೆ ಕೀರ್ತಿ ತಂದುಕೊಟ್ಟ ಗೌರವಪೂರ್ವಕವಾಗಿ ಮಣಿಪುರ ಮುಖ್ಯಮಂತ್ರಿ ಎನ್​. ಬೈರೆನ್​ ಸಿಂಗ್​ ಶನಿವಾರ ಒಂದು ಕೋಟಿ ಬಹುಮಾನ ಘೋಷಣೆ ಮಾಡಿದ್ದಾರೆ. ಇಷ್ಟೇ ಅಲ್ಲದೆ, ರಾಜ್ಯ ಸರ್ಕಾರವು ಮೀರಾಬಾಯಿಗೆ ಉದ್ಯೋಗ ನೀಡುವ ಭರವಸೆಯನ್ನು ನೀಡಿದೆ.ಪ್ರಸ್ತುತ ಮೀರಾಬಾಯಿ ಭಾರತೀಯ ರೈಲ್ವೆ ಇಲಾಖೆಯಲ್ಲಿ ಟಿಕೆಟ್​ ಕಲೆಕ್ಟರ್​ ಆಗಿ ಕೆಲಸ ಮಾಡುತ್ತಿದ್ದಾರೆ.

ಪದಕ ಗೆದ್ದ ಬಳಿಕ ಮೀರಾಬಾಯಿ ಜತೆ ಮಾತನಾಡಿದ ವಿಡಿಯೋವನ್ನು ಸಿಎಂ ಬೈರೆನ್​ ಸಿಂಗ್​ ಶೇರ್​ ಮಾಡಿಕೊಂಡಿದ್ದು, ಇನ್ಮುಂದೆ ರೈಲು ನಿಲ್ದಾಣ ಮತ್ತು ರೈಲಿನಲ್ಲಿ ಟಿಕೆಟ್​ ಸಂಗ್ರಹಿಸಬೇಕಾಗಿಲ್ಲ. ನಿನಗಾಗಿ ವಿಶೇಷ ಉದ್ಯೋಗವೊಂದನ್ನು ಕಾಯ್ದಿರಿಸಿದ್ದೇನೆ. ಆದರೆ, ಆ ಪೋಸ್ಟ್​ ಯಾವುದು ಎಂದು ಹೇಳುವುದಿಲ್ಲ. ಸದ್ಯ ಅದು ರಹಸ್ಯವಾಗಿಯೇ ಇರಲಿದೆ. ಭಾರತಕ್ಕೆ ಬಂದಾಗ ಏನೆಂದು ತಿಳಿಯಲಿದೆ ಎಂದು ಬೈರೆನ್​ ಸಿಂಗ್​ ಹೇಳಿದ್ದಾರೆ.

26 ವರ್ಷದ ಮೀರಾಬಾಯಿ 49ಕೆಜಿ ಭಾರ ಎತ್ತುವ ವಿಭಾಗದಲ್ಲಿ ಬೆಳ್ಳಿ ಪದಕವನ್ನು ಜಯಿಸಿದ್ದಾರೆ. ಒಟ್ಟು 202 ಕೆಜಿ (87 ಕೆಜಿ + 115 ಕೆಜಿ) ಭಾರ ಎತ್ತಿದರು. 2000ದಲ್ಲಿ ನಡೆದ ಸಿಡ್ನಿ ಒಲಿಂಪಿಕ್ಸ್​ನಲ್ಲಿ ಕರ್ಣಮ್​ ಮಲ್ಲೇಶ್ವರಿ ಅವರು ಕಂಚಿನ ಪದಕವನ್ನು ಬೇಟೆಯಾಡಿದ್ದರು. ಅಂದಿನಿಂದ ಭಾರ ಎತ್ತುವ ಸ್ಪರ್ಧೆಯಲ್ಲಿ ಪದಕವು ಮರೀಚಿಕೆ ಆಗಿತ್ತು. ಆದರೆ, ಟೋಕಿಯೋ ಒಲಿಂಪಿಕ್ಸ್​ನಲ್ಲಿ ಮೊದಲ ದಿನವೇ ಪದಕ ಗೆಲ್ಲುವ ಮೂಲಕ ಮೀರಾಬಾಯಿ ಮಹತ್ತರ ಸಾಧನೆ ಮಾಡಿದ್ದಾರೆ. ಅಲ್ಲದೆ, ಇದುವರೆಗೂ ಭಾರತ ಒಲಿಂಪಿಕ್ಸ್​ನ ಮೊದಲ ದಿನವೇ ಪದಕ ಬೇಟೆ ಆಡಿರಲಿಲ್ಲ. ಆದರೆ, ಮೀರಾಬಾಯಿ ಆ ಕೊರಗನ್ನು ನೀಗಿಸಿದ್ದಾರೆ.

ಇನ್ನು ಚೀನಾದ ಹೌ ಜಿಹಿ ಒಟ್ಟು 210 ಕೆಜಿ (94ಕೆಜಿ + 116ಕೆಜಿ) ಭಾರ ಎತ್ತುವ ಮೂಲಕ ಚಿನ್ನದ ಪದಕ ಜಯಿಸಿದ್ದಾರೆ. ಇಂಡೋನೇಷ್ಯಾದ ಕ್ಯಾಂಟಿಕಾ ಐಶಾ 194 ಕೆಜಿ (84ಕೆಜಿ + 110ಕೆಜಿ) ಭಾರ ಎತ್ತುವ ಮೂಲಕ ಕಂಚಿನ ಪದಕ ಜಯಿಸಿದರು. ಮೀರಾಬಾಯಿ ಚಾನು ಅವರು ತಮ್ಮ ಗೆಲುವನ್ನು ದೇಶಕ್ಕೆ ಅರ್ಪಿಸಿದ್ದಾರೆ. (ಏಜೆನ್ಸೀಸ್​)

‘ಪದಕ ಗೆಲ್ಲುವ ನನ್ನ ಕನಸು ನನಸಾಗಿದೆ’, ಅದನ್ನು ದೇಶಕ್ಕೆ ಅರ್ಪಿಸುತ್ತೇನೆ: ಮೀರಾಬಾಯಿ ಚಾನು

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು