ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!
ಮುಂಬೈ: ವಾಣಿಜ್ಯ ನಗರಿ ಮುಂಬೈಯ ಘಾಟ್ಕೋಪರ್ ಪ್ರದೇಶದಲ್ಲಿ ಹೋರ್ಡಿಂಗ್ ಕುಸಿದು ಬಿದ್ದು ಮೃತಪಟ್ಟವರ ಸಂಖ್ಯೆ 12 ಕ್ಕೆ ಏರಿದ್ದು, 74 ಜನರು ಗಾಯಗೊಂಡಿದ್ದಾರೆ ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ಸೋಮವಾರ ಮುಂಬೈಯಲ್ಲಿ ಸಾಯಂಕಾಲ ಹೊತ್ತಿನಲ್ಲಿ ಭಾರೀ ಧೂಳು ಬಿರುಗಾಳಿ ಮತ್ತು ಅಕಾಲಿಕ ಮಳೆ ಸುರಿಯಿತು. ಈ ಸಂದರ್ಭದಲ್ಲಿ ಭಾರೀ ಗಾಳಿಗೆ ಘಾಟ್‌ಕೋಪರ್‌ನ ಪೆಟ್ರೋಲ್ ಪಂಪ್‌ನಲ್ಲಿ 100 ಅಡಿ ಎತ್ತರದ ಅಕ್ರಮವಾಗಿ ಅಳವಡಿಸಿದ್ದ ಜಾಹೀರಾತು ಫಲಕ ಕೆಳಗೆ ಬಿದ್ದಿದೆ.
ಛೇಡಾ ನಗರ ಮೂಲದ ಪೆಟ್ರೋಲ್ ಪಂಪ್‌ನಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದು ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಅಧಿಕಾರಿಗಳು ಹೇಳುತ್ತಿದ್ದಾರೆ.
ಮೃತರ ಸಂಖ್ಯೆ 12 ಕ್ಕೆ ಏರಿದೆ, ಗಾಯಗೊಂಡವರ ಸಂಖ್ಯೆ 74ಕ್ಕೆ ಏರಿದ್ದು, ಗಾಯಗೊಂಡವರಲ್ಲಿ 31 ಜನರನ್ನು ರಾಜವಾಡಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಮತ್ತು 35 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ, ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಬಿಎಂಸಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇನ್ನೂ ಎಂಟು ಗಾಯಾಳುಗಳು ಮೂರು ಖಾಸಗಿ ಮತ್ತು ಮುಂಬೈ ಮಹಾನಗರ ಪಾಲಿಕೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ಹೇಳಿದರು.
ಪ್ರಾಥಮಿಕ ಅಂದಾಜಿನ ಪ್ರಕಾರ ಪಂತ್‌ನಗರದ ಪೂರ್ವ ಎಕ್ಸ್‌ಪ್ರೆಸ್ ಹೆದ್ದಾರಿಯುದ್ದಕ್ಕೂ ಪೊಲೀಸ್ ಗ್ರೌಂಡ್ ಪೆಟ್ರೋಲ್ ಪಂಪ್‌ನಲ್ಲಿ 100 ಕ್ಕೂ ಹೆಚ್ಚು ವ್ಯಕ್ತಿಗಳು ಅವಶೇಷಗಳಲ್ಲಿ ಸಿಕ್ಕಿಬಿದ್ದಿದ್ದಾರೆ.
ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ: ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ಅವಲೋಕಿಸಿದರು. ಗಾಯಾಳುಗಳಿಗೆ ಅಗತ್ಯ ಚಿಕಿತ್ಸೆ ನೀಡಲಾಗುವುದು ಮತ್ತು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿಗಳನ್ನು ನೀಡಲಾಗುವುದು ಎಂದು ಭರವಸೆ ನೀಡಿದರು. ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳನ್ನು ತಡೆಯಲು ಮಹಾನಗರ ಮುಂಬೈಯಲ್ಲಿರುವ ಜಾಹೀರಾತು ಫಲಕಗಳ ಲೆಕ್ಕಪರಿಶೋಧನೆ ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಮುಂಬೈ ಮತ್ತು ಅದರ ಉಪನಗರಗಳಲ್ಲಿ ಸ್ಕ್ಯಾಫೋಲ್ಡಿಂಗ್ ಕುಸಿತದ ಇದೇ ರೀತಿಯ ಘಟನೆಗಳು ವರದಿಯಾಗಿವೆ. ಜೋಗೇಶ್ವರಿ ನಗರದಲ್ಲಿ ಬೀಸಿದ ಗಾಳಿಗೆ ಮರ ಉರುಳಿ ಆಟೋರಿಕ್ಷಾ ಮೇಲೆ ಬಿದ್ದಿದೆ. ಚಾಲಕ ಗಾಯಗೊಂಡಿದ್ದು, ಸ್ಥಳೀಯರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಘಟನೆಯ ನಂತರ ಮುಂಬೈ ಪೊಲೀಸರು ಇಗೋ ಮೀಡಿಯಾ ಮಾಲೀಕ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಈ ಮಧ್ಯೆ, ಬೃಹನ್ ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (BMC) ಜಾಹೀರಾತು ಏಜೆನ್ಸಿಗೆ ನೋಟಿಸ್ ಜಾರಿ ಮಾಡಿದ್ದು, ಸ್ಥಳದ ಸಮೀಪವಿರುವ ಉಳಿದ ಮೂರು ಹೋರ್ಡಿಂಗ್‌ಗಳನ್ನು ತಕ್ಷಣ ತೆಗೆದುಹಾಕುವಂತೆ ಸೂಚಿಸಿದೆ. ಪೆಟ್ರೋಲ್ ಪಂಪ್‌ನಲ್ಲಿ ಹೋರ್ಡಿಂಗ್ ಅಳವಡಿಸಿದ್ದಕ್ಕಾಗಿ M/s Ego Media ಗೆ ನೋಟಿಸ್ ನೀಡಲಾಗಿದೆ.
ಒಟ್ಟು 88 ಜನರನ್ನು ರಕ್ಷಿಸಲಾಗಿದೆ, ಅವರಲ್ಲಿ 14 ಮಂದಿ ಮೃತಪಟ್ಟಿದ್ದಾರೆ ಮತ್ತು 31 ಮಂದಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ವೈದ್ಯರು ಘೋಷಿಸಿದ್ದಾರೆ. ಪೆಟ್ರೋಲ್ ಪಂಪ್ ಇಲ್ಲಿ ಇರುವುದರಿಂದ ಗ್ಯಾಸೋಲಿನ್ ಆಧಾರಿತ ಕತ್ತರಿ ಸಾಧನವನ್ನು ಬಳಸಲು ನಮಗೆ ಸಾಧ್ಯವಾಗುತ್ತಿಲ್ಲ. ಈಗ ಎರಡು ಎನ್ ಡಿಆರ್ ಎಫ್ ತಂಡ ಸ್ಥಳದಲ್ಲಿ ಬೀಡುಬಿಟ್ಟಿದೆ ಎಂದು ಎನ್‌ಡಿಆರ್‌ಎಫ್ ಸಹಾಯಕ ಕಮಾಂಡೆಂಟ್ ನಿಖಿಲ್ ಮುಧೋಲ್ಕರ್ ಹೇಳಿದ್ದಾರೆ.
#WATCH | Mumbai's Ghatkopar hoarding collapse incident: NDRF assistant commandant Nikhil Mudholkar says, "A total of 88 people were rescued, of whom 14 were declared dead by doctors and 31 were discharged... The problem is that we are unable to use our gasoline-based cutting… https://t.co/vk4pYTgneL pic.twitter.com/Uf5g1FvB7e
— ANI (@ANI) May 14, 2024