ಶುಕ್ರವಾರ, ಜೂನ್ 9, 2023
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು-ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!-ಭಯಾನಕ ಮರ್ಡರ್; ಸಂಗಾತಿಯ ಶರೀರವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ ಪ್ರೇಮಿ..!-ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ-ಸುಧಾಕರ್​​ನಿಂದಲೇ ನಾನು ಸೋತಿದ್ದು; ಎಂಟಿಬಿ ನಾಗರಾಜ್ ನೇರ ಆರೋಪ-ಕೇರಳಕ್ಕೆ ಮಳೆಯ ಅಬ್ಬರ ಶುರು, 48 ಗಂಟೆಗಳಲ್ಲಿ ಕರ್ನಾಟಕದಲ್ಲೂ ಮಳೆ!-16 ಸಾವಿರ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದ ಹೃದ್ರೋಗ ತಜ್ಞ ಹೃದಯಾಘಾತದಿಂದ ನಿಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮುಖ್ಯಮಂತ್ರಿ ಕಾರ್ಯಕ್ರಮಕ್ಕೆ ಭಾಗವಹಿಸಲು ತೆರಳುತ್ತಿದ್ದ ಬಸ್‌ ಪಲ್ಟಿ; ಮೂವರು ಮೃತ್ಯು

Twitter
Facebook
LinkedIn
WhatsApp
11

ಭೋಪಾಲ್: ಬಸ್‌ ಪಲ್ಟಿಯಾಗಿ ಮೂವರು ಮೃತಪಟ್ಟಿರುವ ಘಟನೆ ಬುಧವಾರ ಮಧ್ಯಪ್ರದೇಶದ ಶಾಹದೋಲ್ ಜಿಲ್ಲೆಯಲ್ಲಿ ಬುಧವಾರ( ಮೇ.24 ರಂದು) ನಡೆದಿರುವುದು ವರದಿಯಾಗಿದೆ.

ಸಿಎಂ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಲು ಜನ ಪ್ರಯಾಣಿಸುತ್ತಿದ್ದ ವೇಳೆ ಉಮಾರಿಯಾದ ಗಘರ್ ನಾಕಾ ಪ್ರದೇಶದ ಬಳಿ ಈ ಅಪಘಾತ ಸಂಭವಿಸಿದೆ.

ಅತೀ ವೇಗದಲ್ಲಿ ಬಸ್‌ ಸಾಗುತ್ತಿತ್ತು. ಈ ವೇಳೆ ಮುಂದೆ ಹೋಗುತ್ತಿದ್ದ ಬೈಕ್‌ ಗೆ ಢಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಬಸ್‌ ಪಲ್ಟಿಯಾಗಿದೆ. ಬಸ್‌ ಪಲ್ಟಿಯಾದ ಪರಿಣಾಮ ಬೈಕ್‌ ಸವಾರರು ಬಸ್ಸಿನಡಿ ಬಿದ್ದು ಮೃತಪಟ್ಟಿದ್ದು, ಮುಂದೆ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೂ ಕೂಡ ಬಸ್‌ ಢಿಕ್ಕಿ ಹೊಡೆದು ಮೃತಪಟ್ಟಿದ್ದಾನೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಹೇಳಿದ್ದಾರೆ.

ಗಾಯಾಳುಗಳನ್ನು ಉಮಾರಿಯಾ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮೃತರಿಗೆ 10 ಲಕ್ಷ ರೂ. ಘೋಷಿಸಿದ್ದು, ಮೃತರ ಕುಟುಂಬದ ಓರ್ವ ಸದಸ್ಯನಿಗೆ ಸರ್ಕಾರಿ ನೌಕರಿ ಕೊಡುವ ಭರವಸೆಯನ್ನು ಸಿಎಂ ನೀಡಿದ್ದಾರೆ. ಘಟನೆ ಬಳಿಕ ಸಿಎಂ ಕಾರ್ಯಕ್ರಮವನ್ನು ರದ್ದು ಮಾಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ