ಭಾನುವಾರ, ಮೇ 26, 2024
ಜೂನ್ 1 ರಿಂದ ಐದು ದಿನ ಮದ್ಯ ಮಾರಾಟ ಬಂದ್..!-ನಾನು ಕೈಹಿಡಿದು ಬೆಳೆಸಿದವರೇ ನನ್ನನ್ನು ವಜಾ ಮಾಡಲು ಶಿಫಾರಸ್ಸು ಮಾಡಿದ್ದಾರೆ; ರಘುಪತಿ ಭಟ್-ಚುನಾವಣೆ ಗೆದ್ದು ಬಿಜೆಪಿಯ ಶಾಸಕನಾಗುತ್ತೇನೆ; ಜಗದೀಶ್ ಶೆಟ್ಟರ್ ನನಗೆ ಮಾದರಿ - ರಘುಪತಿ ಭಟ್-ಎಸ್ಆರ್ ಹೆಚ್ ತಂಡದ ಮಾಲಕಿ ನ್ಯಾಷನಲ್ ಕ್ರಶ್ ಕಾವ್ಯ ಮಾರನ್ ಹಿನ್ನೆಲೆ ಏನು..!-ಉಡುಪಿ: ನಡು ರಸ್ತೆಯಲ್ಲೇ ಎರಡು ತಂಡದ ಯುವಕರ ನಡುವೆ ಗ್ಯಾಂಗ್ ವಾರ್; ಇಲ್ಲಿದೆ ವಿಡಿಯೋ-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಬಸ್ಸನ್ನು ಚಲಾಯಿಸುವಾಗಲೇ ಛತ್ರಿ ಹಿಡಿದು ವಿಡಿಯೋ ಮಾಡಿದ ಡ್ರೈವರ್; ನಿರ್ವಾಹಕಿ ಮತ್ತು ಚಾಲಕ ಸಸ್ಸೆಂಡ್..!-ಪೋರ್ಷೆ ಕಾರು ಅಪಘಾತ ಪ್ರಕರಣ: ಅಪ್ರಾಪ್ತನ ತಂದೆಗೆ ನ್ಯಾಯಾಂಗ ಬಂಧನ ; ಇಬ್ಬರು ಪೊಲೀಸರು ಅಮಾನತು..!-miyazaki mango: ಜಗತ್ತಿನಲ್ಲಿ ದುಬಾರಿ ಮಾವಿನ ಹಣ್ಣಿನ ಪಟ್ಟಿಯಲ್ಲಿ ಮಿಯಾಜಕಿ ಹಣ್ಣಿನ ವಿಶೇಷತೆ ಏನು..?-ಮಧ್ಯಪ್ರಿಯರಿಗೆ ಜೂನ್ ಮೊದಲ ವಾರದಲ್ಲಿ ಎಣ್ಣೆ ಸಿಗೋದು ಡೌಟ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮುಸ್ಲಿಂ ಯುವತಿಯೊಂದಿಗಿದ್ದ ಯುವಕನ ಮೇಲೆ ಹಲ್ಲೆ, ಇಬ್ಬರ ಬಂಧನ

Twitter
Facebook
LinkedIn
WhatsApp
28

ಚಿಕ್ಕಬಳ್ಳಾಪುರ: ಹಿಂದೂ ಯುವಕ ಮತ್ತು ಮುಸ್ಲಿಂ ಸಮುದಾಯಕ್ಕೆ ಸೇರಿದ ಯುವತಿಯು ಹೋಟೆಲ್‌ಗೆ ಬಂದಿದ್ದಕ್ಕೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಶುಕ್ರವಾರ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಧಿತರನ್ನು ಚಿಕ್ಕಬಳ್ಳಾಪುರದ ನಕ್ಕಲಕುಂಟೆ ನಿವಾಸಿಗಳಾದ 20 ವರ್ಷದ ವಯೀದ್ ಮತ್ತು 21 ವರ್ಷದ ಸದ್ದಾಂ ಎಂದು ಗುರುತಿಸಲಾಗಿದೆ. ಮತ್ತೊಬ್ಬ ಆರೋಪಿ ಇಮ್ರಾನ್‌ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಮುಸ್ಲಿಂ ಸಮುದಾಯದ ಯುವಕರ ಗುಂಪೊಂದು ತಮ್ಮ ಧರ್ಮದ ಯುವತಿಯೊಂದಿಗೆ ಸುತ್ತಾಡಿದ್ದಕ್ಕಾಗಿ ಹಿಂದೂ ಯುವಕನಿಗೆ ಥಳಿಸಿರುವ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಆರೋಪಿಗಳು ಯುವತಿಯ ಮೇಲೂ ಹಲ್ಲೆ ನಡೆಸಿ, ಬೆದರಿಕೆ ಹಾಕಿದ್ದಾರೆ.

ಸಂತ್ರಸ್ತರು ಚಿಕ್ಕಬಳ್ಳಾಪುರದ ಸಣ್ಣ ಹೋಟೆಲ್‌ವೊಂದರಲ್ಲಿ ಕುಳಿತಿರುವುದು ಗ್ಯಾಂಗ್‌ನ ಗಮನಕ್ಕೆ ಬಂದಿದೆ. ಯುವತಿ ಬುರ್ಖಾ ಧರಿಸಿದ್ದಳು. ಆರೋಪಿ ತಂಡವು ಇಬ್ಬರನ್ನು ಗಮನಿಸಿ ಯುವಕ ಹಿಂದೂ ಎಂದು ದೃಢಪಟ್ಟ ಬಳಿಕ ಅವರ ಮೇಲೆ ಹಲ್ಲೆ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗ್ಯಾಂಗ್ ಮೊದಲು ಯುವಕನನ್ನು ಹೊರಗೆ ಕರೆದು ಥಳಿಸಿತು. ಯುವತಿ ಆತನ ರಕ್ಷಣೆಗೆ ಧಾವಿಸಿ, ಆರೋಪಿಗಳ ಕೃತ್ಯಗಳನ್ನು ಪ್ರಶ್ನಿಸಿದ್ದಾಳೆ. ಆದರೆ, ಆರೋಪಿಗಳು ಯುವತಿ ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ.

ಬಳಿಕ ಯುವತಿ ಚಿಕ್ಕಬಳ್ಳಾಪುರ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜ್ಯದಲ್ಲಿ ನೈತಿಕ ಪೊಲೀಸ್‌ಗಿರಿಯನ್ನು ಸಹಿಸುವುದಿಲ್ಲ ಎಂದು ಕಟುವಾಗಿ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ