
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಳೆದ ಬಾರಿಯೂ ಜಿದ್ದಾಜಿದ್ದಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಚಲನ ಸೃಷ್ಟಿಸಿದ ಮೂಡಬಿದ್ರೆ ಕ್ಷೇತ್ರ ಮತ್ತೆ ರಾಜ್ಯವ್ಯಾಪಿ ಗಮನಸೆಳೆಯುತ್ತಿದೆ.
ನಿನ್ನೆ ಮಾಜಿ ಶಾಸಕ ಅಭಯಚಂದ್ರ ಜೈನ್ ಚುನಾವಣಾ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ. ಮಂಗಳೂರಿನ ಪ್ರಮುಖ ಖಾಸಗಿ ವಾಹಿನಿಯಲ್ಲಿ ಸಂಜೆ ಮಾತನಾಡಿದ ಅವರು ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅವರಿಗೆ ಮೂಡಬಿದ್ರೆ ಕ್ಷೇತ್ರದಲ್ಲಿ ಸ್ಪರ್ಧಿಸಲು ತನ್ನ ಸಂಪೂರ್ಣ ಬೆಂಬಲ ಇರುವುದಾಗಿ ಘೋಷಿಸಿದ್ದಾರೆ.
ಈ ನಡುವೆ ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ ಮೂಡಬಿದ್ರೆಗೆ ಎಂಟ್ರಿ ನೀಡಿದ್ದಾರೆ. ನಿನ್ನೆ ದಿವಸ ಪುತ್ತಿಗೆ ಮತ್ತು ಇತರ ಪ್ರದೇಶಗಳಲ್ಲಿ ಕಾರ್ಯಕ್ರಮಗಳನ್ನು ಉದ್ಘಾಟಿಸಿದ್ದ ಲ್ಲದೆ, ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಿದ್ದಾರೆ. ಈ ಮೂಲಕ ನಾಲ್ಕು ವರ್ಷ ಹಿಂದೆ ನಡೆದ ಜಿದ್ದಾಜಿದ್ದಿ ಮತ್ತೊಮ್ಮೆ ಮರುಕಳಿಸುವ ಸೂಚನೆ ಲಭ್ಯವಾಗಿದೆ.
ಅಭಯಚಂದ್ರ ಜೈನ್ ನಿವೃತ್ತಿ ಘೋಷಿಸಿದ ನಂತರ ಹಲವಾರು ನಾಯಕರುಗಳು ಮೂಡುಬಿದ್ರೆ ಮೇಲೆ ಕಣ್ಣಿಟ್ಟಿದ್ದಾರೆ. ಅವರುಗಳಲ್ಲಿ ಮುಖ್ಯವಾಗಿ ಮಿಥುನ್ ರೈ ಹಾಗೂ ಐವನ್ ಡಿಸೋಜಾ ಮುಂಚೂಣಿಯಲ್ಲಿದ್ದಾರೆ. ಈ ಜಿದ್ದಾಜಿದ್ದಿ ಕಳೆದ ಬಾರಿ ಬಹಳಷ್ಟು ಜೋರಾಗಿತ್ತು. ಈ ಬಾರಿ ಮತ್ತೊಮ್ಮೆ ಮರುಕಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಕಳೆದ ಬಾರಿ ಐವನ್ ಡಿಸೋಜ ಮೂಡಬಿದ್ರೆಯಲ್ಲಿ ತನ್ನ ಕಚೇರಿಯನ್ನು ತೆರೆದಿದ್ದರು. ಆದರೆ ಅಂತಿಮ ಹಂತದಲ್ಲಿ ಮಿಥುನ್ ರೈ ಮತ್ತು ಐವನ್ ಡಿಸೋಜಾ ಇಬ್ಬರಿಗೂ ಟಿಕೆಟ್ ನೀಡದೆ ಅಭಯಚಂದ್ರ ಜೈನ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಈ ಬಾರಿಯೂ ಈ ಜಿದ್ದಾಜಿದ್ದಿ ಏರ್ಪಡುವುದು ಬಹುತೇಕ ಖಚಿತವಾಗಿದೆ. ಒಟ್ಟಿನಲ್ಲಿ ಕಾಂಗ್ರೆಸ್ನಲ್ಲಿ ಬಣ ರಾಜಕೀಯ ಜೋರಾಗಿ ನಡೆಯುತ್ತಿದ್ದು, ಬಿಜೆಪಿಯನ್ನು ಎದುರು ಮಾಡುವುದಕ್ಕಿಂತ ಹೆಚ್ಚಾಗಿ ಒಳಗಿಂದಲೇ ಬಡಿದಾಡಿ ಕೊಳ್ಳುವುದು ಹೆಚ್ಚಾಗಿದೆ. ಈ ಎಲ್ಲ ಅಂಶಗಳನ್ನು ಬಿಜೆಪಿ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಲಾಭ ಎತ್ತಲು ಸರ್ವಪ್ರಯತ್ನಗಳನ್ನೂ ಬಿಜೆಪಿ ಮಾಡುತ್ತಿದೆ ಎಂದು ತಿಳಿದುಬಂದಿದೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್