ಬುಧವಾರ, ಮಾರ್ಚ್ 29, 2023
ರಾಜ್ಯದ ಅತಿ ಕಿರಿಯ ಮೇಯರ್​: ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮೇಯರ್​​​ ಆಗಿ ಡಿ. ತ್ರಿವೇಣಿ ಆಯ್ಕೆ-ಏ.1ರಿಂದ ಸಿಗರೇಟ್, ತಂಬಾಕು ಉತ್ಪನ್ನಗಳ ಬೆಲೆ ಹೆಚ್ಚಳ-ಮಂಗಳೂರು: ಸೌದಿಯಲ್ಲಿ ಅಪಘಾತ ಮಲ್ಲೂರಿನ ಯುವಕ ಮೃತ್ಯು-ಮಂಗಳೂರು: ಸೌದಿಯಲ್ಲಿ ಅಪಘಾತ ಮಲ್ಲೂರಿನ ಯುವಕ ಮೃತ್ಯು-ಬೆಳ್ತಂಗಡಿ: ಹೆಂಡತಿಗೆ ಕತ್ತಿಯಿಂದ ಕಡಿದ ಗಂಡ - ಪತ್ನಿಆಸ್ಪತ್ರೆಗೆ, ಪತಿ ರಕ್ತದೊತ್ತಡದಿಂದ ಸಾವು-ಶೋಭಿತಾ ಜೊತೆ ಡೇಟಿಂಗ್‌, ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದ ನಾಗಚೈತನ್ಯ-ಸಂಭಾವನೆಗಾಗಿ ಎಂದೂ ಬೇಡಬಾರದು: ನಟಿ ಸಮಂತಾ-ಮೇ 10 ರಂದು ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ, 13ಕ್ಕೆ ಮತ ಎಣಿಕೆ: ಚುನಾವಣಾ ಆಯೋಗ ಘೋಷಣೆ-ಪ್ರಿಯಕರನ ಜೊತೆ ಸೇರಿ ಪತಿಯನ್ನೆ ಮುಗಿಸಿದ ಪತ್ನಿ- ತನಿಖೆಯಲ್ಲಿ ಸತ್ಯ ಬಯಲು-ಮಂಗಳೂರು: ಕದ್ರಿ ಜೋಗಿ ಮಠದ ಮತ್ಸ್ಯೇಂದ್ರನಾಥ ಗುಡಿ ಆವರಣದಲ್ಲಿ ಕ್ರಿ.ಶ 1423 ಕಾಲದ ಶಾಸನ ಪತ್ತೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮೂಲ್ಕಿ: ನೇಣಿಗೆ ಶರಣಾದ ವಾಮದಪದವು ಕಾಲೇಜಿನ ಅತಿಥಿ ಉಪನ್ಯಾಸಕಿ

Twitter
Facebook
LinkedIn
WhatsApp

ಮೂಲ್ಕಿ : ಇಲ್ಲಿಗೆ ಸಮೀಪದ ಎಸ್ ಕೋಡಿ ಎಂಬಲ್ಲಿ ಉಪನ್ಯಾಸಕಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆ ಫೆ.6 ರಂದು ಸೋಮವಾರ ನಡೆದಿದೆ. ಮೃತ ಮಹಿಳೆಯನ್ನು ಸ್ಥಳೀಯ ನಿವಾಸಿ ಅಮಿತಾ ಬಿವಿ (34)ಎಂದು ಗುರುತಿಸಲಾಗಿದೆ.

ಮೃತ ಮಹಿಳೆ ಅಮಿತಾ ಮದುವೆಯಾಗಿ 12 ವರ್ಷಗಳಾಗಿದ್ದು ತಾಯಿ ಮನೆಯಿಂದ ಬಂದು ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ತಮ್ಮ ಬೆಡ್ ರೂಮ್ ನ ಫ್ಯಾನ್ ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುಲ್ಕಿ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಮೃತರು ಪತಿ ಹಾಗೂ ಎಂಟು ವರ್ಷದ ಪುತ್ರಿಯನ್ನು ಅಗಲಿದ್ದಾರೆ. ಅಮಿತಾ ಅವರು ಬಂಟ್ವಾಳ ತಾಲೂಕಿನ ರಾಯಿ ನಿವಾಸಿ ಬಿ.ಎಸ್.ಎನ್.ಎಲ್ ಉದ್ಯೋಗಿ ವೀರಪ್ಪ ಪುತ್ರಿಯಾಗಿದ್ದಾಳೆ. ಅತ್ಯಂತ ಕ್ರಿಯಾಶೀಲ ಮಹಿಳೆಯಾಗಿದ್ದು, ಇವಳು ವಾಮದಪದವು ಕಾಲೇಜಿನಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.

ಇವರು ಅತಿಥಿ ಉಪನ್ಯಾಸಕಿಯಾಗಿದ್ದು, ವಾಮದಪದವು ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದರು. ಇಲ್ಲಿನ ಪ್ರತಿ ವಿಭಾಗದ ವಿದ್ಯಾರ್ಥಿಗಳಿಗೂ ಇವರು ಅಚ್ಚುಮೆಚ್ಚಿನ ಉಪನ್ಯಾಸಕಿಯಾಗಿದ್ದರು. ಇವರ ಸಾವಿನ ಸುದ್ದಿ ತಿಳಿದು ಇಡೀ ಕಾಲೇಜು ಇಂದು ಮೌನವಾಗಿದೆ. ಸೋಮವಾರದಂದು ಕೂಡ ಕಾಲೇಜಿಗೆ ಆಗಮಿಸಿದ್ದ ಅಮಿತ ಸಂಜೆ ವೇಳೆ ಗಂಡನ ಮನೆಗೆ ತೆರಳಿದ್ದರು. ಅಲ್ಲಿ ಹೋಗಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಆತ್ಮಹತ್ಯೆ ಗೆ ಇನ್ನೂ ಕೂಡ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ