ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೆಟ್ರೋ ಪಿಲ್ಲರ್‌ ಬಿದ್ದು ತಾಯಿ -ಮಗು ಸಾವು: ಇಂಜಿನಿಯರ್‌ಗಳ ಅಮಾನತಿಗೆ ಸಿಎಂ ಆದೇಶ

Twitter
Facebook
LinkedIn
WhatsApp
metro pillar accident in bengaluru victim family 96890041

ಬೆಂಗಳೂರು: ನಮ್ಮ ಮೆಟ್ರೋ ಪಿಲ್ಲರ್ ಕುಸಿದು ಬಿದ್ದು ತಾಯಿ-ಮಗು ಸಾವನ್ನಪ್ಪಿದ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬಿಎಂಆರ್​ಸಿಎಲ್​ನ ಮುಖ್ಯ ಇಂಜಿನಿಯರ್​​ನ್ನು​ ಅಮಾನತು ಮಾಡುವಂತೆ ಆದೇಶ ಹೊರಡಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಮೆಟ್ರೊ ಎಂಡಿ, ಬೆಂಗಳೂರು ನಗರ ಪೊಲಿಸ್ ಆಯುಕ್ತ ಹಾಗೂ ಡಿಸಿಪಿ ಜೊತೆ ಸಿಎಂ ಬೊಮ್ಮಾಯಿ ಸಭೆ ನಡೆಸಿದರು. ಸಭೆಯಲ್ಲಿ ಬಿಎಂಆರ್​ಸಿಎಲ್​ನ ಮುಖ್ಯ ಇಂಜಿನಿಯರ್​​ನ್ನು​ ಅಮಾನತು ಮಾಡುವಂತೆ ಸಿಎಂ ಬೊಮ್ಮಾಯಿ ಆದೇಶ ಹೊರಡಿಸಿದ್ದಾರೆ. ಜೊತೆಗೆ ಎನ್​ಸಿಸಿ ಕಂಪನಿ ಮುಖ್ಯಸ್ಥರ ವಿರುದ್ಧ, ಮೆಟ್ರೋ ಕಂಟ್ರ್ಯಾಕ್ಟರ್, ಇಂಜಿನಿಯರ್​ಗಳ ವಿರುದ್ಧವೂ ಕ್ರಿಮಿನಲ್​ ಕೇಸ್​ ದಾಖಲಿಸುವಂತೆ ಬಿಎಂಆರ್​ಸಿಎಲ್​ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಸಭೆ ನಂತರ ಮಾತನಾಡಿದ ಸಿಎಂ ಬೊಮ್ಮಾಯಿ ಅವರು, ಇಂಥ ಘಟನೆ ಮತ್ತೆ ನಡೆಯದಂತೆ ಕ್ರಮಕೈಗೊಳ್ಳಲು ಸೂಚಿಸಿದ್ದೇನೆ. ತನಿಖೆ ಯಾವ ರೀತಿ ನಡೆಸಬೇಕೆಂದು ನಾಳೆ ತೀರ್ಮಾನಿಸುತ್ತೇವೆ. ಮೃತರ ಕುಟುಂಬಕ್ಕೆ ಮೆಟ್ರೋ ಕಡೆಯಿಂದ, ನಮ್ಮ ಕಡೆಯಿಂದ ಪರಿಹಾರ ನೀಡಿದ್ದೇವೆ. ಆದರೆ ಪರಿಹಾರ ನೀಡುವುದು ಮುಖ್ಯವಲ್ಲ. ಘಟನೆಗೆ ಕಾರಣರಾದವರನ್ನು ಪತ್ತೆ ಹಚ್ಚಿ ಕ್ರಮಕ್ಕೆ ಸೂಚಿಸಿದ್ದೇನೆ ಎಂದರು.

ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದ ಪರಿಣಾಮ 35 ವರ್ಷದ ತೇಜಸ್ವಿನಿ ಹಾಗೂ ವಿಹಾನ್ (2 ವರ್ಷ 6 ತಿಂಗಳು) ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇನ್ನು ಅದೃಷ್ಟವಶಾತ್ ತೇಜಸ್ವಿನಿ ಪತಿ ಹಾಗೂ ಮಗಳು ಪ್ರಾಣಪಾಯದಿಂದ ಪಾರಾಗಿದ್ದರು.

ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ ಬಿಎಂಆರ್ ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜುಂ ಪರ್ವೇಜ್, ಇದೊಂದು ದುರಾದೃಷ್ಟಕರ ಘಟನೆಯಾಗಿದೆ. ಮೆಟ್ರೋ ನಿರ್ಮಾಣದಲ್ಲಿ ಸಾಧ್ಯವಾದಷ್ಟು ಅತ್ಯಂತ ಹೆಚ್ಚಿನ ಗುಣಮಟ್ಟವನ್ನು ಅನುಸರಿಸುತ್ತಿದ್ದೇವೆ. ಘಟನೆ ಸಂಬಂಧ ವಿಸ್ತೃತವಾಗಿ ತನಿಖೆ ನಡೆಸಲಾಗುವುದು, ಒಂದು ವೇಳೆ ತಾಂತ್ರಿಕ ದೋಷ ಅಥವಾ ಕಾರ್ಮಿಕರ ತಪ್ಪಿನಿಂದಾದ ಅವಘಡ ಎಂದು ಕಂಡುಬಂದಲ್ಲಿ ಮುಂದೆ ಇಂತಹ ಘಟನೆ ಸಂಭವಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ