ಸೋಮವಾರ, ಜೂನ್ 17, 2024
ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ; ಸಿಎಂ ಸಿದ್ದರಾಮಯ್ಯ ಮತ್ತು ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ಏನು..?-ಕಿಸಾನ್ ಸಮ್ಮಾನ್ 17 ನೇ ಕಂತಿನ ಹಣ ನಾಳೆ ಬಿಡುಗಡೆ; ನಿಮ್ಮ ಖಾತೆಗೆ ಹಣ ಬಂದಿದೆಯೇ ಎಂದು ತಿಳಿಯುವುದು ಹೇಗೆ.?-ಶಿವಮೊಗ್ಗ ಬಿಜೆಪಿ ಪ್ರತಿಭಟನೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಕುಸಿದುಬಿದ್ದು ನಿಧನ..!-Rain Alert: ಜೂನ್ 21ರಿಂದ ರಾಜ್ಯದಲ್ಲಿ ಮಳೆ ಮುನ್ಸೂಚನೆ..!-ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೇಕೆದಾಟು ಯೋಜನೆಗೆ ಶೀಘ್ರವೇ ಕೇಂದ್ರದ ಅನುಮೋದನೆ: ಸಿಎಂ ವಿಶ್ವಾಸ!

Twitter
Facebook
LinkedIn
WhatsApp
ಮೇಕೆದಾಟು ಯೋಜನೆಗೆ ಶೀಘ್ರವೇ ಕೇಂದ್ರದ ಅನುಮೋದನೆ: ಸಿಎಂ ವಿಶ್ವಾಸ!

ಮೇಕೆದಾಟು ಯೋಜನೆಗೆ ಶೀಘ್ರವೇ ಕೇಂದ್ರ ಸರ್ಕಾರ ಅನುಮೋದನೆ ನೀಡುವ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಮೈಸೂರು ಪ್ರವಾಸದಲ್ಲಿರುವ ಮುಖ್ಯಮಂತ್ರಿಗಳು ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಸಿಎಂ, ಮೇಕೆದಾಟು ಯೋಜನೆಯ ಡಿಪಿಆರ್ ಗೆ ಕೇಂದ್ರ ಸರ್ಕಾರದಿಂದ ಶೀಘ್ರವೇ ಅನುಮೋದನೆ ದೊರೆಯುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
ಮೇಕೆದಾಟು ಯೋಜನೆಯ ಡಿಪಿಆರ್ ಅನ್ನು ಕೇಂದ್ರ ಜಲ ಆಯೋಗಕ್ಕೆ ಈಗಾಗಲೇ ಸಲ್ಲಿಸಲಾಗಿದೆ. ಕಳೆದ ಬಾರಿ ದೆಹಲಿಗೆ ತೆರಳಿದಾಗ ಈ ಯೋಜನೆಗೆ ಒಪ್ಪಿಗೆ ನೀಡುವುದಾಗಿ ಭರವಸೆ ದೊರೆತಿದೆ. ಇದಕ್ಕೆ ಕೆಲವು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕಾಗಿದೆ. ಇದು ಪೂರ್ಣಗೊಂಡ ಕೂಡಲೇ ಕೇಂದ್ರದ ಒಪ್ಪಿಗೆ ದೊರೆಯುವ ವಿಶ್ವಾಸವಿದೆ.
ಮತ್ತೊಮ್ಮೆ ಈ ಉದ್ದೇಶಕ್ಕಾಗಿಯೇ ದೆಹಲಿಗೆ ತೆರಳಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಿ ವಸ್ತುಸ್ಥಿತಿಯನ್ನು ವಿವರಿಸಲಾಗುವುದು. ಸುಪ್ರೀಂ ಕೋರ್ಟಿನ ಆದೇಶಗಳ ಕುರಿತು ಮನವರಿಕೆ ಮಾಡಿಕೊಡಲಾಗುವುದು.
ಇದರೊಂದಿಗೆ ರಾಜ್ಯದ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರೊಂದಿಗೆ ದೆಹಲಿಯಲ್ಲಿ ವಕೀಲರ ತಂಡದೊಂದಿಗೆ ಸಭೆ ನಡೆಸಿ, ಕಾವೇರಿ ತೀರದಲ್ಲಿ ಹೆಚ್ಚುವರಿ ನೀರಿನ ಹಕ್ಕನ್ನು ಕಾನೂನು ಪ್ರಕಾರ ಪಡೆದುಕೊಳ್ಳುವ ಕುರಿತು ಸಹ ಚರ್ಚಿಸಲಾಗುವುದು ಎಂದು ತಿಳಿಸಿದರು.
ಕೋವಿಡ್ 19 ಮುನ್ನೆಚ್ಚರಿಕೆ:
ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತು ಕೇರಳ ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಈ ಎಲ್ಲ ಜಿಲ್ಲೆಗಳಿಗೆ ತಾವು ಭೇಟಿ ನೀಡಲಿದ್ದು, ಅಲ್ಲಿನ ಸ್ಥಿತಿಗತಿಗಳನ್ನು ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಕಳೆದ ಬಾರಿ ಈ ಎರಡು ರಾಜ್ಯಗಳಿಂದ ಪ್ರಾರಂಭವಾದ ಎರಡನೇ ಅಲೆ ಇಡೀ ರಾಜ್ಯವನ್ನು ವ್ಯಾಪಿಸಿತ್ತು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು