ಗುರುವಾರ, ಜುಲೈ 25, 2024
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಂಗಳೂರಿನ ಶ್ರೀಯುತ ಮೋಹನ್ ಶೆಟ್ಟಿ ವಿಧಿವಶ-Anandpur: ಮದುವೆಯಾಗುವಂತೆ ಪೀಡಿಸುತ್ತಿದ್ದಾಳೆಂದು ಪ್ರೇಯಸಿ ಕೊಲೆ ಮಾಡಿದ ಪ್ರಿಯಕರ-ಮುಡಾ ಸೈಟ್ ಕೋಲಾಹಲ: ಬಿಜೆಪಿ ಶಾಸಕರಿಂದ ಸದನದಲ್ಲಿ ಶ್ರೀರಾಮನ ಭಜನೆ-Shiroor: ಗುಡ್ಡ ಕುಸಿತದಲ್ಲಿ ನಾಪತ್ತೆಯಾಗಿದ್ದ ಟ್ರಕ್ ಗಂಗಾವಳಿ ನದಿಯಲ್ಲಿ ಪತ್ತೆ-Ladies PG: ಬೆಂಗಳೂರಿನಲ್ಲಿ ಲೇಡಿಸ್ ಪಿಜಿಗೆ ನುಗ್ಗಿ ಯುವತಿಯ ಬರ್ಬರ ಹತ್ಯೆ!-ಕಾಂಗ್ರೆಸ್​ ಹಿರಿಯ ನಾಯಕ ಮರಿಗೌಡ ಪಾಟೀಲ್ ಹುಲ್ಕಲ್ ನಿಧನ-Shimoga: ರಸ್ತೆ ಅಪಘಾತ; ಶಿವಮೊಗ್ಗ ಧರ್ಮಪ್ರಾಂತ್ಯದ ಫಾ.ಆಂಟನಿ ಪೀಟರ್ ಇನ್ನಿಲ್ಲ-Mudra loan: ಮುದ್ರಾ ಸಾಲದ ಮಿತಿ 10 ಲಕ್ಷದಿಂದ 20 ಲಕ್ಷ ರೂಗೆ ಏರಿಕೆ; ಉದ್ದಿಮೆದಾರರಿಗೆ ಉತ್ತೇಜನ-Gold Rate: ಬಜೆಟ್‌ ಬೆನ್ನಲ್ಲೇ ಚಿನ್ನ, ಬೆಳ್ಳಿ ದರ ದಿಢೀರ್‌ ಇಳಿಕೆ-Sanket: ಮಹಿಳಾ ನಿರ್ದೇಶಕಿಯ ಅದ್ಭುತ ನಿರ್ದೇಶನ, ಅಂತರಾಷ್ಟ್ರೀಯ ಮಟ್ಟದ ಬಿಜಿಎಂ, ಕಲಾವಿದರ ಅದ್ಭುತ ಅಭಿನಯ ದಿಂದ ಮನಸೂರೆಗೊಂಡಿರುವ ಕನ್ನಡ ಚಲನಚಿತ್ರ ಸಾಂಕೇತ್ ಜುಲೈ 26ಕ್ಕೆ ಬಿಡುಗಡೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮೈಸೂರಿನಲ್ಲಿ ಆರಂಭಗೊಳ್ಳುತ್ತಿದೆ ಡೆಲ್ಟಾ ಚಿಕಿತ್ಸೆಗೆ ಪ್ರತ್ಯೇಕ ವಾರ್ಡ್

Twitter
Facebook
LinkedIn
WhatsApp
ಮೈಸೂರಿನಲ್ಲಿ  ಆರಂಭಗೊಳ್ಳುತ್ತಿದೆ ಡೆಲ್ಟಾ ಚಿಕಿತ್ಸೆಗೆ ಪ್ರತ್ಯೇಕ ವಾರ್ಡ್ .

ಮೈಸೂರು: ಕೊರೊನಾ ರೂಪಾಂತರಿ ಡೆಲ್ಟಾ ವೈರಸ್‌ಗೆ ಚಿಕಿತ್ಸೆ ನೀಡಲು ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ತೆರೆಯುವ ಚಿಂತನೆ ನಡೆಸಲಾಗಿದೆ. ಕೊರೊನಾ ಪ್ರಕರಣ ದಿನೇ ದಿನೇ ಇಳಿಮುಖವಾಗುತ್ತಿದ್ದು, ಲಾಕ್‌ಡೌನ್ ಹಂತ ಹಂತವಾಗಿ ಸಡಿಲಗೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ಕಾಣಿಸಿಕೊಂಡಿರುವ ರೂಪಾಂತರಿ ʻಡೆಲ್ಟಾ ವೈರಸ್ ಹಾಗೂ ಡೆಲ್ಟಾ ಪ್ಲಸ್ʼ ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿಣಮಿಸಿದೆ. ಈ ಹಿನ್ನೆಲೆಯಲ್ಲಿ ಡೆಲ್ಪಾ ಸೋಂಕಿತರಿಗೆಂದೆ ನಗರದ ಕೆ.ಆರ್.ರಸ್ತೆಯ ಮೇಟಗಳ್ಳಿಯಲ್ಲಿರುವ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ಮೀಸಲಿಡಲು ಜಿಲ್ಲಾಡಳಿತ ಚಿಂತನೆ ನಡೆಸಿದೆ.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ಡಿಸಿ ಡಾ.ಬಗಾದಿ ಗೌತಮ್ ಅವರೊಂದಿಗೆ ಮಾತುಕತೆ ನಡೆಸಲಾಗಿದ್ದು, ಡೆಲ್ಟಾ ಸೋಂಕಿತರ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ತೆರೆಯುವ ಬಗ್ಗೆ ಚರ್ಚೆ ನಡೆಸಲಾಗಿದೆ. ಸದ್ಯ ಪ್ರತಿದಿನ 10 ಸ್ಯಾಂಪಲ್ಸ್‌ಗಳನ್ನು ಬೆಂಗಳೂರಿನ ನಿವ್ಹಾನ್ಸ್‌ಗೆ ಕಳುಹಿಸಲಾಗುತ್ತಿದೆ. ಕೆಲವೊಂದು ಸ್ಯಾಪಲ್‌ಗಳ ರಿಸೆಲ್ಟ್‌ಗೆ ಕಾಯುತ್ತಿದ್ದು, ಡೆಲ್ಟಾ ವೈರಸ್ ಕಾಣಿಸಿಕೊಂಡಿರುವ ಮೂವರ ಮೇಲೆ ನಿಗಾ ಇಡಲಾಗಿದೆ. ಇವರಿಗೆ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲ ಜಿಲ್ಲಾ ಆರೋಗ್ಯ ಅಧಿಕಾರಿ ಅವರು ಮಾಹಿತಿ ನೀಡಿದ್ದಾರೆ.

ಇನ್ನೂ ಡೆಲ್ಟಾಪ್ಲಸ್ ಪ್ರಕರಣದ ವ್ಯಕ್ತಿ ಗುಣಮುಖರಾಗಿದ್ದಾರೆ. ಈ ವ್ಯಕ್ತಿಯ ಟ್ರಾವೆಲ್ ಹಿಸ್ಟರಿಯನ್ನೂ ಸಂಗ್ರಹಿಸಿದ್ದು, ಆತನಿಂದ ಪ್ರಥಮ ಹಾಗೂ ದ್ವಿತೀಯ ಸಂಪರ್ಕಿರನ್ನು ಐಸೋಲೇಷನ್‌ಗೆ ಒಳಪಡಿಸಲಾಗಿದೆ. ಆದ್ದರಿಂದ ಆತಂಕಪಡುವ ಅಗತ್ಯವಿಲ್ಲ ಎಂದೂ ಅವರು ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಡೆಲ್ಟಾ ರೂಪಾಂತರ ವೈರಸ್ ಪತ್ತೆ!

ಮೂರ್ನಾಲ್ಕು ದಿನಗಳ ಹಿಂದೆಯಷ್ಟೇ ಡೆಲ್ಟಾಪ್ಲಸ್ ಒಂದು ಹಾಗೂ ಮೂರು ಡೆಲ್ಟಾ ಪ್ರಕರಣಗಳು ಕಂಡುಬಂದಿತ್ತು. ಇದು ಅಷ್ಟೇನೂ ಆಂತಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ಸಾಂಕ್ರಾಮಿಕ ರೋಗ ತಜ್ಞರು ಅಭಯ ನೀಡಿದರೂ ಸಾರ್ವಜನಿಕ ವಲಯದಲ್ಲಿ ಆತಂಕ ಉಂಟು ಮಾಡಿದೆ. ಮೈಸೂರಿನಲ್ಲಿ ಸದ್ಯ ಕಾಣಿಸಿಕೊಂಡಿರುವ ನಾಲ್ಕು ಪ್ರಕರಣ (3 ಡೆಲ್ಟಾ, 1 ಡೆಲ್ಟಾಪ್ಲಸ್)ದಲ್ಲಿ ಡೆಲ್ಟಾಪ್ಲಸ್ ಸೋಂಕಿತ ವ್ಯಕ್ತಿ ಸಂಪೂರ್ಣ ಗುಣಮುಖನಾಗಿದ್ದು, ಡೆಲ್ಟಾ ಸೋಂಕಿತರ ಮೂವರ ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲವೆಂದು ಜಿಲ್ಲಾ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು