ಶುಕ್ರವಾರ, ಡಿಸೆಂಬರ್ 13, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಯಡಿಯೂರಪ್ಪ, ಕುಮಾರಸ್ವಾಮಿ, ರಮನಾಥ ರೈ ಆಗ್ರಹಕ್ಕೆ ಮಣಿದು ಹೆಸರು ಬದಲಾವಣೆಯ ಕ್ರಮವನ್ನು ಕೈ ಬಿಟ್ಟ ಕೇರಳ ಸರಕಾರ.

Twitter
Facebook
LinkedIn
WhatsApp
ಯಡಿಯೂರಪ್ಪ, ಕುಮಾರಸ್ವಾಮಿ, ರಮನಾಥ ರೈ ಆಗ್ರಹಕ್ಕೆ ಮಣಿದು ಹೆಸರು ಬದಲಾವಣೆಯ ಕ್ರಮವನ್ನು ಕೈ ಬಿಟ್ಟ ಕೇರಳ ಸರಕಾರ.

ಮಂಗಳೂರು: ಗಡಿನಾಡ ಕರ್ನಾಟಕ ಪ್ರದೇಶವಾದ ಕಾಸರಗೋಡು ಜಿಲ್ಲೆಯ ಗ್ರಾಮಗಳ ಕನ್ನಡ ಹೆಸರನ್ನು ಮಲಯಾಳೀಕರಣ ಮಾಡುವಂತೆ ಕೇರಳ ಸರ್ಕಾರ ಆದೇಶಿಸಿಲ್ಲ ಎಂದು ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ಸ್ಪಷ್ಟನೆ ನೀಡಿದ್ದಾರೆ. ಕನ್ನಡ ಗ್ರಾಮಗಳ ಹೆಸರು ಬದಲಾಯಿಸಲಾಗುತ್ತಿದೆ ಎಂಬ ವಿಚಾರ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಈ ಕುರಿತು ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಶಾಸಕರು ಸ್ಪಷ್ಟನೆ ನೀಡಿದ್ದಾರೆ.

ಇನ್ನೊಂದೆಡೆ ಕನ್ನಡ ಹೆಸರುಗಳನ್ನು ಬದಲಾವಣೆ ಮಾಡಬಾರದು ಎಂದು ಸಿಎಂ ಯಡಿಯೂರಪ್ಪ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮುಂತಾದವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಪತ್ರ ಬರೆದಿದ್ದಾರೆ. ಅಲ್ಲದೆ ಮಾಜಿ ಸಚಿವ ರಮನಾಥ ರೈ ಟ್ವೀಟ್ ಮೂಲಕ ಭಾಷಾ ಸೌಹಾರ್ದತೆಯನ್ನು ಕಾಪಾಡಬೇಕು ಎಂದು ಕೇರಳ ಸರಕಾರ ವನ್ನು ಆಗ್ರಹಿಸಿದ್ದರು. ಈ ನಡುವೆ ಕೇರಳದ ಊರುಗಳು ಕನ್ನಡ ಹೆಸರುಗಳನ್ನು ಬದಲಾಯಿಸುವ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ಸ್ಪಷ್ಟಪಡಿಸಿದೆ. ಜಿಲ್ಲಾಧಿಕಾರಿ ಸಜಿತ್ ಬಾಬು ಕಚೇರಿಯಿಂದ ಪ್ರಕಟನೆ ಹೊರಬಿದ್ದಿದೆ.
ಇನ್ನು ಮಂಜೇಶ್ವರ ಶಾಸಕ ಎ.ಕೆ.ಎಂ.ಅಶ್ರಫ್ ‘ಕೇರಳ ಮುಖ್ಯ ಮಂತ್ರಿ ಕಚೇರಿ, ಮುಖ್ಯಮಂತ್ರಿಗಳ ಆಪ್ತ ಸಹಾಯಕ ಮತ್ತು ಕಾಸರಗೋಡು ಜಿಲ್ಲಾಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಲಾಗಿದೆ. ಹೆಸರು ಬದಲಾವಣೆಗೆ ಸಂಬಂಧಿಸಿದ ಯಾವುದೇ ಸುತ್ತೋಲೆ ಕೇರಳ ಸರ್ಕಾರ ಹೊರಡಿಸಿಲ್ಲ. ಅಂತಹ ಯೋಚನೆಯು ಸರ್ಕಾರದ ಮುಂದಿಲ್ಲ. ಆದರೆ ಪಡಿತರ ಕಾರ್ಡ್‌ಗಳಲ್ಲಿ ಸಾಫ್ಟ್‌ವೇರ್ ಕಾರಣದಿಂದ ಕೆಲವು ಹೆಸರುಗಳಲ್ಲಿ ಬದಲಾವಣೆ ಆಗಿರುವುದು ಸತ್ಯ. ಆದರೆ ಇದು ತಾಂತ್ರಿಕ ಕಾರಣದಿಂದ ಉಂಟಾದ ಲೋಪ. ಇದನ್ನು ಸರಿಪಡಿಸಲು ತುರ್ತು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ’ ಎಂದು ಅಶ್ರಫ್‌ ಫೇಸ್‌ಬುಕ್‌ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

‘ಕೇರಳ ವಿಧಾನ ಸಭೆಯಲ್ಲಿ ಮಂಜೇಶ್ವರದ ಶಾಸಕನೆಂಬ ನೆಲೆಯಲ್ಲಿ ಕೆಲವು ವಿಚಾರಗಳನ್ನು ನಿಮ್ಮ ಮುಂದಿಡುತ್ತೇನೆ. ಕಳೆದ ಕೆಲವು ದಿನಗಳಿಂದ ಕಾಸರಗೋಡು ಜಿಲ್ಲೆಯ ವಿವಿಧ ಪ್ರದೇಶಗಳ ಹೆಸರುಗಳನ್ನು ಬದಲಾಯಿಸಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವರು ಈ ವಿಚಾರದಲ್ಲಿ ಟ್ಟೀಟ್ ಮಾಡುವ ಮೂಲಕ ಚರ್ಚೆ ಮಹತ್ವ ಪಡೆದುಕೊಂಡಿದೆ.

ಕರ್ನಾಟಕದ ಗಡಿ ಅಭಿವೃದ್ಧಿ ಪ್ರಾಧಿಕಾರವು ಈ ವಿಚಾರದಲ್ಲಿ ಮನವಿಯನ್ನು ನೀಡಿರುವುದು ಈ ಎಲ್ಲಾ ಚರ್ಚೆಗೆ ಕಾರಣವಾಯಿತು’ ಎಂದು ಅವರು ಹೇಳಿದ್ದಾರೆ.

ಭಾಷಾ ಅಲ್ಪಸಂಖ್ಯಾತ ಕನ್ನಡಿಗರ ಪರವಾಗಿ ಕೆಲವು ಪೂರಕ ಕ್ರಮಗಳನ್ನು ಕೇರಳದಲ್ಲಿ ಎಲ್ಲಾ ಸರ್ಕಾರಗಳು ಕೈಗೊಂಡಿವೆ. ಭಾಷಾ ಅಲ್ಪಸಂಖ್ಯಾತರಿಗೆ ಸಮಸ್ಯೆ ಆಗುವ ವಿಚಾರಗಳನ್ನು ಸರ್ಕಾರದ ಗಮನಕ್ಕೆ ತರಲಾಗಿದೆ. ಈ ಬಗ್ಗೆ ಸರ್ಕಾರ ಧನಾತ್ಮಕವಾಗಿ ಸ್ಪಂದಿಸುವ ವಾತಾವರಣ ಕೇರಳದಲ್ಲಿದೆ. ಪರಿಹಾರವಾಗಬೇಕಾದ ಸಮಸ್ಯೆಗಳು ಇನ್ನೂ ಇರುವುದು ವಾಸ್ತವ. ಇದನ್ನು ಸಂಘಟಿತ ಪ್ರಯತ್ನದಿಂದ ಪರಿಹರಿಸಲು ಸಾಧ್ಯವಾಗುವ ವಾತಾವರಣ ನಿರ್ಮಾಣವಾಗಬೇಕು. ನಾಡಿನ ಭಾಷಾ ಸಾಮರಸ್ಯವನ್ನು, ಸಾಂಸ್ಕೃತಿಕ ವೈವಿಧ್ಯತೆಯನ್ನು ಉಳಿಸಿ ಬೆಳೆಸುವಲ್ಲಿ ಯಾವುದೇ ಗೊಂದಲ ಸೃಷ್ಟಿಯಾಗಬಾರದು’ ಎಂದು ಅವರು ಬರೆದಿದ್ದಾರೆ.
‘ಮಂಜೇಶ್ವರದ ಶಾಸಕ ಹಾಗೂ ಒಬ್ಬ ಅಪ್ಪಟ ಕನ್ನಡಿಗನೆಂಬ ನೆಲೆಯಲ್ಲಿ ಕಾಸರಗೋಡಿನ ಯಾವುದೇ ಪ್ರದೇಶದ ಸ್ಥಳನಾಮವನ್ನು ಬದಲಾಯಿಸುವ ಷಡ್ಯಂತ್ರವೋ, ಸರ್ಕಾರದ ಅದೇಶವೆನಾದರೂ ಬಂದರೆ ಆದರ ವಿರುದ್ದದ ಹೋರಾಟಕ್ಕೆ ನೇತೃತ್ವ ನೀಡಲು ನಾನು ಸಿದ್ಧ. ಕನ್ನಡ ಅಲ್ಪಸಂಖ್ಯಾತರ ಸಂವಿಧಾನ ಬದ್ಧ ಹಕ್ಕುಗಳ ಸಂರಕ್ಷಣೆಯಲ್ಲಿ ಸದಾ ಜಾಗೃತನಾಗಿರುತ್ತೇನೆ’ ಎಂದೂ ಅಶ್ರಫ್ ಅವರು ಭರವಸೆ ನೀಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು