ಬುಧವಾರ, ಫೆಬ್ರವರಿ 21, 2024
ತನ್ನ ಬಗ್ಗೆ ಸುಳ್ಳು ಸುದ್ದಿಯ ಗ್ರಾಫಿಕ್ ಸೃಷ್ಟಿ ಮಾಡಿದವರ ವಿರುದ್ಧ ಕಾನೂನು ಕ್ರಮ - ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಸ್ಪಷ್ಟನೆ-ಲೋಕಸಭಾ ಚುನಾವಣೆಗೆ ಸ್ಪರ್ಧೆ ವಿಚಾರ: ಸ್ಪಷ್ಟನೆ ನೀಡಿದ ಡಾ. ಮಂಜುನಾಥ್-21 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಸಿಗರೇಟ್ ಸೇದುವಂತಿಲ್ಲ : ದಂಡಗಳಲ್ಲಿ ಬದಲಾವಣೆ; ಇಲ್ಲಿದೆ ವಿವರ-Arecanut price :ಕುಸಿತ ಕಂಡ ಅಡಿಕೆ ಧಾರಣೆ; ಬೆಳೆಗಾರರಿಗೆ ಹೊಡೆತ ಬೀಳಲು ಕಾರಣವೇನು?-ಶೋಭಾ ಕರಂದ್ಲಾಜೆ ಲೋಕಸಭೆ ಚುನಾವಣೆ ಸ್ಪರ್ಧಿಸದಂತೆ ಬಿಜೆಪಿ ಕಾರ್ಯಕರ್ತರಿಂದ ಪತ್ರ ಚಳುವಳಿ..!-18 ವರ್ಷ ಬಳಿಕ ದುಬೈ ಜೈಲಿನಲ್ಲಿದ್ದು ಭಾರತಕ್ಕೆ ಮರಳಿ ಕುಟುಂಬದ ಜೊತೆ ಸೇರಿದ ಐವರು; ಇಲ್ಲಿದೆ ವಿಡಿಯೋ-Vidya Balan: ವಿದ್ಯಾ ಬಾಲನ್ ಹೆಸರಿನಲ್ಲಿ ಹಣ ವಸೂಲಿ ;ದೂರು ದಾಖಲು.!-Taruwar Kohli: ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ತರುವರ್ ಕೊಹ್ಲಿ..!-ಉಡುಪಿ : ಗಂಗೊಳ್ಳಿ ಬೋಟ್ ಅಗ್ನಿ ದುರಂತ; ರಾಜ್ಯ ಸರ್ಕಾರದಿಂದ 1.75 ಕೋ. ಪರಿಹಾರ ಮಂಜೂರು..!-ಮೆಫೆಡ್ರೋನ್‌ ಎಂಬ 2,500 ಕೋಟಿ ರೂ. ಮೌಲ್ಯದ ಮಾದಕವಸ್ತು ಜಪ್ತಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯಶ್ ಚಂಡಮಾರುತದ ನಡುವೆ ಮಹಿಳಾ ಪೊಲೀಸ್ ಪೇದೆಯ ಅತ್ಯಾಚಾರಕ್ಕೆ ಯತ್ನಿಸಿದ ಪೊಲೀಸ್ ಅಧಿಕಾರಿಯ ಬಂಧನ!

Twitter
Facebook
LinkedIn
WhatsApp
ಯಶ್ ಚಂಡಮಾರುತದ ನಡುವೆ ಮಹಿಳಾ ಪೊಲೀಸ್ ಪೇದೆಯ ಅತ್ಯಾಚಾರಕ್ಕೆ ಯತ್ನಿಸಿದ ಪೊಲೀಸ್ ಅಧಿಕಾರಿಯ ಬಂಧನ!

ಒರಿಸ್ಸಾ:ಯಾಸ್ ಚಂಡಮಾರುತದಿಂದ ಸಂಕಷ್ಟಕ್ಕೆ ಸಿಲುಕಿದ್ದ ಜನರ ರಕ್ಷಣಾ ಕರ್ತವ್ಯದಲ್ಲಿದ್ದ ಮಹಿಳಾ ಪೇದೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದ ಮೇಲೆ ಒಡಿಶಾದ ಬಾಲಾಸೋರ್‌ ಜಿಲ್ಲೆಯಲ್ಲಿ ಪೊಲೀಸ್‌ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ.
ಮಹಿಳಾ ಕಾನ್‌ಸ್ಟೆಬಲ್ ತಾನು ಕರ್ತವ್ಯದಲ್ಲಿದ್ದಾಗ ಪ್ರಧಾನ್ ತನ್ನೊಂದಿಗೆ ಕೆಟ್ಟದಾಗಿ ವರ್ತಿಸಿದ್ದಾನೆ ಮತ್ತು ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.
ಆರೋಪಿ ಅಧಿಕಾರಿ ಮೇಲೆ ಅತ್ಯಾಚಾರದ ಆರೋಪ ಹೊರಿಸಿರುವ ಮಹಿಳಾ ಕಾನ್‌ಸ್ಟೆಬಲ್‌ನನ್ನು ಮೊದಲಿಗೆ ಖಂಟಪದ ಪೊಲೀಸ್ ಠಾಣೆಯಲ್ಲಿ ಇರಿಸಲಾಗಿತ್ತು. ಆದರೆ, ಯಾಸ್ ಚಂಡಮಾರುತದ ಹಿನ್ನೆಲೆಯಲ್ಲಿ ಆಕೆಗೆ ಗೋಪಾಲಪುರ ಪೊಲೀಸ್ ಔಟ್‌ಪೋಸ್ಟ್‌ನಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಆರೋಪಿ ಪೋಲೀಸ್ ಅಧಿಕಾರಿಯಾದ ಬನ್ಸಿದಾರ್‌ ಪ್ರದಾನ್‌ ಈ ಹೊರಠಾಣೆಯ ಉಸ್ತುವಾರಿ ವಹಿಸಿದ್ದರು.
ಆರಂಭದಲ್ಲಿ ತನ್ನ ದೂರನ್ನು ದಾಖಲಿಸಿಕೊಳ್ಳಲು ಇಲಾಖೆ ಹಿಂದೇಟು ಹಾಕಿದ ಬಳಿಕ ಸಂತ್ರಸ್ತೆ ರೈಲು ಹಳಿಯ ಬಳಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದರು. ಈ ವೇಳೆ ಆಕೆಯನ್ನು ರಕ್ಷಿಸಿದ ರೈಲ್ವೇ ಪೊಲೀಸರು ರಾಜ್ಯ ಪೊಲೀಸ್‌ನ ಪೂರ್ವ ವಿಭಾಗದ ಐಜಿಗೆ ಮಾಹಿತಿ ನೀಡಿದ್ದಾರೆ.
ಐಜಿ ದೀಪ್ತೇಶ್ ಪಟ್ನಾಯಿಕ್‌ ಅವರು ಬನ್ಸಿದಾರ್‌ ಪ್ರದಾನ್ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ ನೀಡಿದ ಬಳಿಕ ಆರೋಪಿ ಅಧಿಕಾರಿಯನ್ನು ಬಾಲಾಸೋರ್‌ ಠಾಣೆಗೆ ಕರೆಯಿಸಿ ಬಂಧಿಸಲಾಗಿದೆ.
ಆಪಾದಿತನ ವಿರುದ್ಧ ಅತ್ಯಾಚಾರ, ಹಲ್ಲೆ ಹಾಗೂ ದುರುದ್ದೇಶಪೂರಿತ ವರ್ತನೆಗಳ ಆರೋಪದ ಮೇಲೆ ಪ್ರಕರಣ ದಾಖಲಿಸಿ ಆತನ ವೈದ್ಯಕೀಯ ಪರೀಕ್ಷೆ ಮಾಡಿ ಸ್ಥಳೀಯ ನ್ಯಾಯಾಲದಲ್ಲಿ ಹಾಜರುಪಡಿಸಲಾಗಿದೆ

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು