ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯಶ್ ಹೊಸ ಸಿನಿಮಾದ ಬಜೆಟ್ ಬರೋಬ್ಬರಿ 400 ಕೋಟಿ: ಜ.8ಕ್ಕೆ ಘೋಷಣೆ

Twitter
Facebook
LinkedIn
WhatsApp
4003 yash

ರಾಕಿಂಗ್ ಸ್ಟಾರ್ ಯಶ್ ಕುರಿತು ಮತ್ತೊಂದು ಮೆಗಾ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ. ಯಶ್ ಅವರ ಮುಂದಿನ ಸಿನಿಮಾ ಕುರಿತು ಮತ್ತೊಂದು ಮಹತ್ವದ ಸುಳಿವು ಸಿಕ್ಕಿದ್ದು, ಈ ಸಿನಿಮಾ ಬರೋಬ್ಬರಿ 400 ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗಲಿದೆಯಂತೆ. ಇಂತಹ ಭಾರೀ ಬಜೆಟ್ ಸಿನಿಮಾಗೆ ಕೆವಿಎನ್ ‍ಪ್ರೊಡಕ್ಷನ್ ಬಂಡವಾಳ ಹೂಡಲಿದೆ ಎಂದು ಹೇಳಲಾಗುತ್ತಿದೆ. ತಮಿಳು ನಿರ್ದೇಶಕರೊಬ್ಬರು ಈ ಚಿತ್ರವನ್ನು ನಿರ್ದೇಶನ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದ್ದು, ಯಶ್ ಹುಟ್ಟು ಹಬ್ಬದ ದಿನದಂದು ಈ ಎಲ್ಲ ಮಾಹಿತಿ ಘೋಷಣೆ ಆಗುವ ಸಾಧ್ಯತೆ ಇದೆಯಂತೆ.

 

178227667 306577430833610 6124095311362051911 n

ಕೆಜಿಎಫ್ 2 ಸಿನಿಮಾದ ನಂತರ ಯಶ್ ಯಾವುದೇ ಸಿನಿಮಾವನ್ನು ಒಪ್ಪಿಕೊಂಡಿರಲಿಲ್ಲ. ಮುಂದಿನ ಸಿನಿಮಾ ಯಾವಾಗ ಎಂದು ಕೇಳಿದಾಗೆಲ್ಲ ಹಾರಿಕೆಯ ಉತ್ತರಗಳನ್ನೇ ಅವರು ನೀಡುತ್ತಾ ಬಂದರು. ಈ ಮಧ್ಯ ನರ್ತನ್ ನಿರ್ದೇಶನದಲ್ಲಿ ಅವರು ಸಿನಿಮಾ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ನರ್ತನ್ ಅವರು ಯಶ್ ಸಿನಿಮಾಗಾಗಿ ಎರಡು ವರ್ಷಗಳಿಂದ ಕೆಲಸ ಮಾಡುತ್ತಲೇ ಬಂದಿದ್ದರು. ಆದರೆ, ಆ ಪ್ರಾಜೆಕ್ಟ್ ಅನ್ನು ಅರ್ಧಕ್ಕೆ ಕೈ ಬಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ನರ್ತನ್ ಬದಲಾಗಿ ತಮಿಳು ನಿರ್ದೇಶಕರಿಗೆ ಯಶ್ ಕಾಲ್ ಶೀಟ್ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೂ, ಈ ಕುರಿತು ಯಶ್ ಯಾವುದೇ ಸ್ಪಷ್ಟನೆಯನ್ನು ಈವರೆಗೂ ನೀಡದೇ ಇರುವುದು ಕುತೂಹಲಕ್ಕೂ ಕಾರಣವಾಗಿದೆ. 

ಯಶ್ ಅವರ ಈ ಬಾರಿಯ ಹುಟ್ಟು ಹಬ್ಬ ಹಲವು ವಿಶೇಷಗಳಿಂದ ಕೂಡಿರುತ್ತದೆ. ಸದ್ಯ ಗಾಂಧಿನಗರದಲ್ಲಿ ಹರಿದಾಡುತ್ತಿರುವ ಮಾಹಿತಿ ಪ್ರಕಾರ, ಯಶ್ ತಮ್ಮದೇ ಸ್ವಂತ ನಿರ್ಮಾಣ ಸಂಸ್ಥೆಯನ್ನು ಶುರು ಮಾಡಲಿದ್ದಾರಂತೆ. ಆ ಬ್ಯಾನರ್ ಮೂಲಕವೇ ಪತ್ನಿ ರಾಧಿಕಾ ಪಂಡಿತ್ ರೀ ಎಂಟ್ರಿ ಕೊಡಲಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಸಂಸ್ಥೆಯು ಯಶ್ ಅವರ ಮಗಳ ಹೆಸರಿನಲ್ಲಿ ಇರಲಿದೆ ಎನ್ನುವುದು ಸದ್ಯಕ್ಕಿರುವ ಮಾಹಿತಿ.

78221797 2758124047748322 5755239924483751936 n

ಹುಟ್ಟು ಹಬ್ಬದ ದಿನದಂದು ಯಶ್ ಮತ್ತು ರಾಧಿಕಾ ಪಂಡಿತ್ ಅವರ ವೃತ್ತಿ ಬದುಕಿನ ಹಲವು ಮಹತ್ವದ ಹೆಜ್ಜೆಗಳು ಬಹಿರಂಗಗೊಳ್ಳಲಿದ್ದು, ಅಭಿಮಾನಿಗಳು ಅವುಗಳನ್ನು ತಿಳಿದುಕೊಳ್ಳಲು ತುದಿಗಾಲಲ್ಲಿ ನಿಂತು ಕಾಯುತ್ತಿದ್ದಾರೆ. ಇನ್ನೂ ಮೂರು ದಿನಗಳು ಕಳೆದರೆ, ಯಶ್ ಅವರ ಈ ಎಲ್ಲ ಮಹತ್ವದ ನಿರ್ಧಾರಗಳನ್ನು ಅಭಿಮಾನಿಗಳು ಕೇಳಿ ಸಂಭ್ರಮಿಸಬಹುದು. ಈ ಬಾರಿ ಯಾವುದೇ ಕಾರಣಕ್ಕೂ ಅಭಿಮಾನಿಗಳನ್ನು ಯಶ್ ನಿರಾಸೆ ಮಾಡುವುದಿಲ್ಲ ಎನ್ನುವುದು ಅವರದ್ದೇ ಬಳಗದಿಂದ ಬಂದಿರುವ ಸುದ್ದಿ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ