ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ಮೈಸೂರು: ಭಾರತೀಯ ಜನತಾ ಪಕ್ಷವು ಜೆಡಿಎಸ್ ಅಥವಾ ಯಾವುದೇ ಪಕ್ಷದ ಜೊತೆಗೆ ಅಧಿಕೃತವಾಗಿ ಅಥವಾ ಅನಧಿಕೃತವಾಗಿ ಯಾವುದೇ ರೀತಿಯ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿಳಿಸಿದ್ದಾರೆ.
ಮೈಸೂರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ಎರಡೂ ಪಕ್ಷಗಳ ಸರ್ಕಾರಗಳನ್ನು ಜನರು ನೋಡಿದ್ದಾರೆ. ಬಿಜೆಪಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವುದಿಲ್ಲ. ನಾವು ಸ್ಪಷ್ಟ ಬಹುಮತದ ಜೊತೆಗೆ ಅಧಿಕಾರ ಸ್ವೀಕಾರ ಮಾಡಲಿದ್ದೇವೆ. ಇದು ನಮ್ಮ ಸಂಕಲ್ಪ ಮತ್ತು ವಿಶ್ವಾಸವಾಗಿದೆ ಎಂದು ಅವರು ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಪಕ್ಷದ ದೊಡ್ಡ ನಾಯಕ. ಅವರಿಗೆ ಸಂಘಟನಾ ಅನುಭವ ಇದೆ. ಅವರ ಅನುಭವಗಳ ಆಧಾರದಲ್ಲಿಯೇ ನಾವು ಪಕ್ಷದ ಚಟುವಟಿಕೆಗಳನ್ನು ನಡೆಸುತ್ತೇವೆ. ಪ್ರಸ್ತುತ ಇರುವ ಸಿಎಂ ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಉತ್ತಮ ಆಡಳಿತ ನೀಡುತ್ತಿದೆ. ರಾಜ್ಯದ ಹಿತದೃಷ್ಟಿಯಿಂದ ಬಿಜೆಪಿ ಪರಿಪೂರ್ಣವಾಗಿ ಕೆಲಸ ನಿರ್ವಹಿಸುತ್ತಿದೆ ಎಂದು ಅರುಣ್ ಸಿಂಗ್ ಹೇಳಿದ್ದಾರೆ.
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ವಾಟ್ಸ್ಆ್ಯಪ್ನಿಂದ ಹೊಸ ಅಪ್ಡೇಟ್: ಇನ್ಮುಂದೆ ಸ್ಕ್ರೀನ್ ಶೇರ್ ಮಾಡಬಹುದು