ಶನಿವಾರ, ಜೂನ್ 15, 2024
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!-HSRP ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ-ಇಂದು ಯುಎಸ್ಎ ಮತ್ತು ಭಾರತ ತಂಡ ಮುಖಾಮುಖಿ; ಯಾರಿಗೆ ಗೆಲುವು..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!-ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಯುಪಿ ಜನಸಂಖ್ಯೆ ನಿಯಂತ್ರಣ ಕರಡು ಮಸೂದೆ: ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆಗೆ, ಸರ್ಕಾರಿ ಉದ್ಯೋಗ, ಸಬ್ಸಿಡಿಗೆ ಅನರ್ಹ!

Twitter
Facebook
LinkedIn
WhatsApp
ಯುಪಿ ಜನಸಂಖ್ಯೆ ನಿಯಂತ್ರಣ ಕರಡು ಮಸೂದೆ: ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಚುನಾವಣೆಗೆ, ಸರ್ಕಾರಿ ಉದ್ಯೋಗ, ಸಬ್ಸಿಡಿಗೆ ಅನರ್ಹ!

ಲಖನೌ: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಸರ್ಕಾರ ಜನಸಂಖ್ಯೆ ನಿಯಂತ್ರಣಕ್ಕಾಗಿ ಹೊಸ ಮಸೂದೆಯನ್ನು ಜಾರಿಗೊಳಿಸುವ ಪ್ರಸ್ತಾವನೆ ಮುಂದಿಟ್ಟಿದೆ. ಪ್ರಸ್ತಾವನೆಯ ಅಂಶಗಳ ಪ್ರಕಾರ 2 ಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸ್ಥಳೀಯ ಮಟ್ಟದಲ್ಲಿ ಚುನಾವಣೆಗೆ ಸ್ಪರ್ಧಿಸುವುದು, ಸರ್ಕಾರಿ ಉದ್ಯೋಗಕ್ಕೆ ಅರ್ಜಿ ಹಾಕುವುದು ಹಾಗೂ ಈಗಾಗಲೇ ಸರ್ಕಾರಿ ಉದ್ಯೋಗದಲ್ಲಿದ್ದರೆ ಮುಂಬಡ್ತಿಗೆ, ಸರ್ಕಾರದಿಂದ ಸಿಗುವ ಸಬ್ಸಿಡಿಗಳಿಗೆ ಅನರ್ಹರಾಗುತ್ತಾರೆ.
ಉತ್ತರ ಪ್ರದೇಶ ರಾಜ್ಯ ಕಾನೂನು ಆಯೋಗ (ಯುಪಿಎಸ್ಎಲ್ ಸಿ) ಈ ಬಗ್ಗೆ ವೆಬ್ ಸೈಟ್ ನಲ್ಲಿ ಮಾಹಿತಿ ಪ್ರಕಟಿಸಿದ್ದು, ಈ ಅಂಶಗಳು ಉತ್ತರ ಪ್ರದೇಶ ಜನಸಂಖ್ಯೆ (ನಿಯಂತ್ರಣ, ಸ್ಥಿರೀಕರಣ ಮತ್ತು ಕಲ್ಯಾಣ) ಮಸೂದೆ-2021 ರ ಭಾಗವಾಗಿದೆ. ಮಸೂದೆಯಲ್ಲಿನ ಸುಧಾರಣೆಗಾಗಿ ಸಾರ್ವಜನಿಕರು ಸಲಹೆಗಳನ್ನು ನೀಡಬಹುದಾಗಿದ್ದು ಜು.19 ಕೊನೆಯ ದಿನಾಂಕವಾಗಿದೆ.

ಎರಡು ಮಕ್ಕಾಳ ನೀತಿಯನ್ನು ಅಳವಡಿಸಿಕೊಂಡ ಸರ್ಕಾರಿ ಸೇವೆಯಲ್ಲಿರುವ ನೌಕರರಿಗೆ ಸೇವಾವಧಿಯಲ್ಲಿ ಹೆಚ್ಚುವರಿಯಾಗಿ ಎರಡು ಇನ್ ಕ್ರಿಮೆಂಟ್ ಗಳು, ವೇತನ, ಭತ್ಯೆಗಳ ಸಹಿತ 12 ಪೋಷಕರ ರಜೆ (ಮಾತೃತ್ವ ಅಥವ ಪಿತೃತ್ವ ರಜೆ) ರಾಷ್ಟ್ರೀಯ ಪಿಂಚಣಿ ಯೋಜನೆಯಡಿಯಲ್ಲಿ ಉದ್ಯೋಗಿಗಳ ಕೊಡುಗೆಯಲ್ಲಿ ಶೇ.3 ರಷ್ಟು ಏರಿಕೆಯ ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಈ ಕಾಯ್ದೆಯನ್ನು ಜಾರಿಗೆ ತರುವುದಕ್ಕಾಗಿ ರಾಜ್ಯ ಜನಸಂಖ್ಯೆ ನಿಧಿಯನ್ನು ಸ್ಥಾಪಿಸಲಾಗುತ್ತದೆ.
ಸರ್ಕಾರದ ಕರ್ತವ್ಯಗಳನ್ನು ಪಟ್ಟಿ ಮಾಡಲಾಗಿದ್ದು, “ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೆಟರ್ನಿಟಿ ಕೇಂದ್ರ (ಮಾತೃತ್ವ ಕೇಂದ್ರ)ಗಳನ್ನು ಸ್ಥಾಪನೆ ಮಾಡುವುದರ ಬಗ್ಗೆ ಕರಡು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ. ಈ ಕೇಂದ್ರಗಳಲ್ಲಿ ಹಾಗೂ ಎನ್ ಜಿಒಗಳಲ್ಲಿ ಕುಟುಂಬ ಯೋಜನೆ ವಿಧಾನಗಳಿಗೆ ಅಗತ್ಯವಿರುವ ಗರ್ಭನಿರೋಧಕ ಮಾತ್ರೆಗಳು, ಕಾಂಡೋಮ್ಗಳನ್ನು ವಿತರಣೆ ಮಾಡಲಾಗುತ್ತದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು