ಶುಕ್ರವಾರ, ಜೂನ್ 9, 2023
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು-ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!-ಭಯಾನಕ ಮರ್ಡರ್; ಸಂಗಾತಿಯ ಶರೀರವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ ಪ್ರೇಮಿ..!-ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ-ಸುಧಾಕರ್​​ನಿಂದಲೇ ನಾನು ಸೋತಿದ್ದು; ಎಂಟಿಬಿ ನಾಗರಾಜ್ ನೇರ ಆರೋಪ-ಕೇರಳಕ್ಕೆ ಮಳೆಯ ಅಬ್ಬರ ಶುರು, 48 ಗಂಟೆಗಳಲ್ಲಿ ಕರ್ನಾಟಕದಲ್ಲೂ ಮಳೆ!-16 ಸಾವಿರ ಶಸ್ತ್ರಚಿಕಿತ್ಸೆಗಳನ್ನು ಮಾಡಿದ್ದ ಹೃದ್ರೋಗ ತಜ್ಞ ಹೃದಯಾಘಾತದಿಂದ ನಿಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಯುವತಿಯರ ಖಾಸಗಿ ದೃಶ್ಯಗಳನ್ನು ಸೆರೆಹಿಡಿದುಕೊಂಡು ಲೈಂಗಿಕ ಕಿರುಕುಳ: ಕುಂದಾಪುರ ಮೂಲದ ವ್ಯಕ್ತಿ ಬಂದನ

Twitter
Facebook
LinkedIn
WhatsApp
Ravi Bopara 3 4

ಬೆಂಗಳೂರು: ಸಹೋದ್ಯೋಗಿ ಯುವತಿಯರ ಖಾಸಗಿ ದೃಶ್ಯಗಳನ್ನು ಸೆರೆಹಿಡಿದುಕೊಂಡು ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಕುಂದಾಪುರ ಮೂಲದ ಆರೋಪಿಯನ್ನು ಎಚ್‌ಎಎಲ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳ ಮೂಲದ 22 ವರ್ಷದ ಯುವತಿ ನೀಡಿದ ದೂರಿನ ಮೇರೆಗೆ ಕುಂದಾಪುರ ಮೂಲದ ರಘುರಾಮ್‌ ಎಂಬಾತನನ್ನು ಬಂಧಿಸಲಾಗಿದೆ.

ನಿಸರ್ಗ ಗಾರ್ಡನ್‌ನಲ್ಲಿ ಕ್ಯಾಟರಿಂಗ್‌ ನಡೆಸುತ್ತಿದ್ದ ರಘುರಾಮ್‌, ಪಶ್ಚಿಮ ಬಂಗಾಳ ಮೂಲದ ಇಬ್ಬರು ಯುವತಿಯರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದ. ಬಾಗ್‌ ಮನೆ ಟೆಕ್‌ಪಾರ್ಕ್‌ ಹಾಗೂ ಮತ್ತಿತರ ಕಡೆಗಳಿಗೆ ಕ್ಯಾಟರಿಂಗ್‌ ವ್ಯವಸ್ಥೆ ಕಲ್ಪಿಸುತ್ತಿದ್ದ. ಸಂತ್ರಸ್ತೆ ಕ್ಯಾಟರಿಂಗ್‌ ನ ಕ್ಯಾಷಿಯರ್‌ ಆಗಿದ್ದರೆ, ಆಕೆಯ ಸ್ನೇಹಿತೆ ಕೌಂಟರ್‌ ಮ್ಯಾನೇಜರ್‌ ಆಗಿದ್ದರು.

ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತೆ ಹಾಗೂ ಆರೋಪಿ ರಘುರಾಮ್‌ ನಿಸರ್ಗ ಗಾರ್ಡನ್‌ನಲ್ಲಿ ಒಂದೇ ಮನೆಯಲ್ಲಿ ವಾಸವಾಗಿದ್ದರು. ಮೇ 12ರಂದು ದೂರುದಾರೆ ಸ್ನಾನ ಮಾಡಲು ಬಾತ್‌ ರೂಮಿಗೆ ಹೋಗಿದ್ದು, ಆಗ ಆರೋಪಿಯು ಬಾತ್‌ ರೂಮಿನ ಗೋಡೆಯ ಮೇಲಿನಿಂದ ಆಕೆ ಸ್ನಾನ ಮಾಡುವ ದೃಶ್ಯವನ್ನು ಚಿತ್ರೀಕರಿಸುತ್ತಿದ್ದ. ಅದನ್ನು ಗಮನಿಸಿದ ಆಕೆಯ ಸ್ನೇಹಿತೆ ಜೋರಾಗಿ ಕೂಗಿಕೊಂಡಿದ್ದಾಳೆ. ನಂತರ ಆರೋಪಿಯ ಮೊಬೈಲ್‌ ಕಸಿದುಕೊಂಡಾಗ ಇಬ್ಬರು ಯುವತಿಯರು ಸ್ನಾನ ಮಾಡುತ್ತಿರುವ ದೃಶ್ಯಗಳನ್ನು ಸೆರೆಹಿಡಿದು ಸಂಗ್ರಹಿಸಿಕೊಂಡಿರುವುದು ಪತ್ತೆಯಾಗಿದೆ.

ಈ ಬಗ್ಗೆ ಪ್ರಶ್ನಿಸಿದಾಗ, ‘ತಾನು ಹೇಳಿದಂತೆ ಕೇಳಬೇಕು, ತನ್ನೊಂದಿಗೆ ಲೈಂಗಿಕವಾಗಿ ಸಹಕರಿಸಬೇಕು. ಇಲ್ಲವಾದಲ್ಲಿ ವಿಡಿಯೋಗಳನ್ನು ಜಾಲತಾಣಗಳಲ್ಲಿ ಪ್ರಕಟಿಸುವುದಾಗಿ’ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ದೂರು ನೀಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ