ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ರಾಜ್ಯದ ಕಬ್ಬಿಣ ಮತ್ತು ಉಕ್ಕು ಸ್ಥಾವರ ಉಳಿಸಲು ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ ದೇವೇಗೌಡ

Twitter
Facebook
LinkedIn
WhatsApp
file7407f3dug2dwjva285f1558629421

ಶಿವಮೊಗ್ಗ (ಜ.24): ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಪಟ್ಟಣದಲ್ಲಿರುವ ವಿಐಎಸ್ಎಲ್ (ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಸ್ಥಾವರ) ಕಾರ್ಖಾನೆ ಮುಚ್ಚುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈ ಬಿಡಬೇಕು. ಕಾರ್ಖಾನೆ ಮರು ಆರಂಭಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು  ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.  ಕಳೆದ 23 ವರ್ಷಗಳಲ್ಲಿ ಈ ಕಾರ್ಖಾನೆ ಅನೇಕ ಸಂಕಷ್ಟ ಹಾಗೂ ಗೊಂದಲಗಳನ್ನು ಎದುರಿಸಿದೆ. ಬಂಡವಾಳ ಹಿಂತೆಗೆತ, ಖಾಸಗೀಕರಣ, ಖಾಸಗಿ ಸಹಭಾಗಿತ್ವದಲ್ಲಿ ಮುನ್ನಡೆಸುವುದು. ಅನೇಕ ಕಾರಣಗಳಿಂದ ಇದು ಸುದ್ದಿಯಾಗಿದೆ. ಆದರೆ ದೇಶಕ್ಕೆ ಅತ್ಯುನ್ನತ ಕೊಡುಗೆಯಾಗಿರುವ ಕಾರ್ಖಾನೆಯನ್ನು ಮುಚ್ಚುವ ತೀರ್ಮಾನ ಸಮಂಜಸವಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ನಾನು 1996ರಲ್ಲಿ ಪ್ರಧಾನಿಯಾಗಿದ್ದ ವೇಳೆ ವಿಶೇಷ ಆಸಕ್ತಿ ತೆಗೆದುಕೊಂಡು ವಿಐಎಸ್‌ಎಲ್‌ನ್ನು ಸೈಲ್‌’ (ಭಾರತೀಯ ಉಕ್ಕು ಪ್ರಾಧಿಕಾರ -Steel Authority of India ) ಆಧೀನಕ್ಕೆ ಒಳಪಡಿಸಿದ್ದೆ. ಈ ಕಾರ್ಖಾನೆ ಮತ್ತಷ್ಟು ಅಭಿವೃದ್ಧಿ ಹೊಂದಲಿ ಎಂಬುದು ನನ್ನ ಆಶಯವಾಗಿತ್ತು.  650 ಕೋಟಿ ರೂ. ಬಂಡವಾಳ ಹಾಕಿ ಕಾರ್ಖಾನೆ ಆಧುನೀಕರಣ ಮಾಡಲು ತೀರ್ಮಾನಿಸಲಾಗಿತ್ತು. ಅದು ಕೈಗೂಡಲಿಲ್ಲ. ಆದರೆ 2016ರಲ್ಲಿ ನೀತಿ ಆಯೋಗವು ವಿಐಎಸ್‌ಎಲ್‌ನಿಂದ ಬಂಡವಾಳ ಹಿಂತೆಗೆದು ಖಾಸಗೀಕರಣಕ್ಕೆ ಸಲಹೆ ನೀಡಿತ್ತು. ಸರ್ಕಾರ ಕೂಡ ಇದಕ್ಕೆ ಅನುಮೋದನೆ ನೀಡಿದ್ದು ಅಪಾಯಕಾರಿ ಬೆಳವಣಿಗೆಯಾಗಿದೆ. ಕರ್ನಾಟಕದಲ್ಲಿರುವ ಏಕೈಕ ಸಾರ್ವಜನಿಕ ಸ್ವಾಮ್ಯದ ಉದ್ದಿಮೆ ಇದಾಗಿದೆ.

ಆತ್ಮನಿರ್ಭರ ಭಾರತದ ಪರಿಕಲ್ಪನೆಗೆ ಪೂರಕವಾಗಿ ಈ ಕಾರ್ಖಾನೆ ಅನೇಕ ಕೊಡುಗೆಗಳನ್ನು ನೀಡುವ ಸಾಮರ್ಥ್ಯ ಹೊಂದಿದೆ. ರಕ್ಷಣಾ ವಲಯ, ನ್ಯೂಕ್ಲಿಯರ್, ರೈಲ್ವೆ ಮುಂತಾದ ವಿಭಾಗದಲ್ಲಿ ಈ ಕಾರ್ಖಾನೆಯಿಂದ ಮಹತ್ವದ ಸಹಕಾರ ದೊರೆಯಲಿದೆ. ಮುಖ್ಯವಾಗಿ 20 ಸಾವಿರಕ್ಕೂ ಹೆಚ್ಚು ಕುಟುಂಬಗಳು ಇದೇ ಕಾರ್ಖಾನೆಯನ್ನು ಅವಲಂಬಿಸಿವೆ. ಹೀಗಾಗಿ ಕಾರ್ಖಾನೆ ಮುಚ್ಚುವ ನಿರ್ಧಾರ ಕೈಬಿಡಬೇಕೆಂದು ಪತ್ರದಲ್ಲಿ ಮಾಜಿ ಪ್ರಧಾನಿ ಒತ್ತಾಯಿಸಿದ್ದಾರೆ. ಈ ಮೂಲಕ ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯ ಕ್ಲೋಸರ್ ಸಂಗತಿ ನಿಧಾನವಾಗಿ ಕಾರ್ಮಿಕರ ಹಿತಾಸಕ್ತಿಯ ಹೆಸರಿನಲ್ಲಿ ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist