ಮಂಗಳವಾರ, ಅಕ್ಟೋಬರ್ 3, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯದ ಸಿರಿಧಾನ್ಯ ಯೋಜನೆಗೆ ಕೇಂದ್ರದ ಶಹಬ್ಬಾಸ್‌: ಕೇಂದ್ರ ಸಚಿವ ನರೇಂದ್ರ ಸಿಂಗ್‌ ತೋಮರ್‌ ಮೆಚ್ಚುಗೆ

Twitter
Facebook
LinkedIn
WhatsApp
PM Modi 1 1

ಬೆಂಗಳೂರು (ಜ.23): ಸಿರಿಧಾನ್ಯಗಳನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೆ ತಂದಿರುವ ರೈತ ಸಿರಿ ಯೋಜನೆಯ ಬಗ್ಗೆ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ಸಚಿವ ನರೇಂದ್ರ ಸಿಂಗ್‌ ತೋಮರ್‌ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಕಳೆದ ಮೂರು ದಿನಗಳಿಂದ ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿದ್ದ ‘ಸಿರಿಧಾನ್ಯ ಹಾಗೂ ಸಾವಯವ; ಅಂತಾರಾಷ್ಟ್ರೀಯ ವಾಣಿಜ್ಯ ಮೇಳ-2023’ರ ಸಮಾರೋಪ ಸಮಾರಂಭದಲ್ಲಿ ಭಾನುವಾರ ಮಾತನಾಡಿದ ಅವರು, ಕರ್ನಾಟಕ ಸರ್ಕಾರವು ರೈತ ಸಿರಿ ಯೋಜನೆ ಮೂಲಕ ಸಿರಿಧಾನ್ಯ ಬೆಳೆಯುವ ರೈತರಿಗೆ ಆರ್ಥಿಕ ಸಹಕಾರ ನೀಡಿ ಪ್ರೋತ್ಸಾಹಿಸುತ್ತಿದೆ. ಸ್ವಾಸ್ಥ್ಯ ಹಾಗೂ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಇದು ಸಹಕಾರಿ ಆಗಲಿದೆ ಎಂದು ಹೇಳಿದರು.

ಅಂತಾರಾಷ್ಟ್ರೀಯ ಸಿರಿಧಾನ್ಯಗಳ ವರ್ಷದ ಭಾಗವಾಗಿ ಕರ್ನಾಟಕ ಸರ್ಕಾರ ಆಯೋಜಿಸಿದ ಸಿರಿಧಾನ್ಯ ಮೇಳದ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಅಲ್ಲದೇ ಕರ್ನಾಟಕ ಕೃಷಿ ಇಲಾಖೆ ಸಿರಿಧಾನ್ಯಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುತ್ತಿರುವುದಕ್ಕೆ ಅಭಿನಂದಿಸಿದರು. ಕೃಷಿ ಸಚಿವ ಬಿ.ಸಿ.ಪಾಟೀಲ್‌ ಮಾತನಾಡಿ, ಕೃಷಿ ಇಲಾಖೆಯಿಂದ ರೈತರಿಗೆ ಅನೇಕ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ರೈತ ಶಕ್ತಿ ಯೋಜನೆ ಮೂಲಕ ಪ್ರತಿ ಒಂದು ಎಕರೆಗೆ 250 ರು. ಡೀಸೆಲ್‌ಗೆ ಸಹಾಯಧನ ನೀಡಲಾಗುತ್ತಿದೆ. ಇದು ದೇಶದಲ್ಲಿಯೇ ಮೊದಲು ಎಂದರು.

202 ಕೋಟಿ ರು. ಒಡಂಬಡಿಕೆ: ಸಿರಿಧಾನ್ಯ ಮೇಳದಲ್ಲಿ ಒಟ್ಟು 139 ವ್ಯಾಪಾರ ವಹಿವಾಟು ಸಭೆ ನಡೆದಿದ್ದು, ಪರಸ್ಪರ 201.91 ಕೋಟಿ ರು. ಮೊತ್ತ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಸಭೆಯಲ್ಲಿ 68 ಮಾರುಕಟ್ಟೆದಾರರು, 59 ಉತ್ಪಾದಕರು ಭಾಗವಹಿಸಿದ್ದರು ಎಂದು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

2 ಲಕ್ಷ ಮಂದಿ ಭೇಟಿ: ಮೂರು ದಿನಗಳ ಕಾಲ ನಡೆದ ಸಿರಿಧಾನ್ಯ ಮೇಳದಲ್ಲಿ 250ಕ್ಕೂ ಅಧಿಕ ರೈತರು, ಸಂಘ ಸಂಸ್ಥೆಗಳು ತಮ್ಮ ಉತ್ಪನ್ನಗಳನ್ನು ಪ್ರದರ್ಶನ ಮಾಡಿದ್ದಾರೆ. 2 ಲಕ್ಷಕ್ಕೂ ಅಧಿಕ ಮಂದಿ ಸಿರಿಧಾನ್ಯ ಮೇಳಕ್ಕೆ ಭೇಟಿ ನೀಡಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ