ಭಾನುವಾರ, ಏಪ್ರಿಲ್ 21, 2024
ಬಂಟ್ವಾಳದಲ್ಲಿ ಮತ್ತೊಬ್ಬ ಬಿಲ್ಲವ ನಾಯಕನನ್ನು ಸೆಳೆದ ಬಿಜೆಪಿ. ಪುರಸಭಾ ಸದಸ್ಯ ಗಂಗಾಧರ ಪೂಜಾರಿ ಬಿಜೆಪಿ ಸೇರ್ಪಡೆ!-ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ಸುರೇಶ್ ಪರ ಇಂದು ದರ್ಶನ್ ಬೃಹತ್ ರೋಡ್ ಶೋ..!-ನದಿಯಲ್ಲಿ ದೋಣಿ ಮುಳುಗಿ ಇಬ್ಬರ ಸಾವು; 7 ಮಂದಿ ನಾಪತ್ತೆ..!-ಇಂದು ಬೆಂಗಳೂರು ಮತ್ತು ಚಿಕ್ಕಬಳ್ಳಾಪುರಕ್ಕೆ ಮೋದಿ ಆಗಮನ..!-Rain Alert: ಕರಾವಳಿ ಮತ್ತು ಮಲೆನಾಡು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆ ಮುನ್ಸೂಚನೆ..!-ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ? ದೆಹಲಿಗೆ ಬರುವಂತೆ ಬಿ.ಎಸ್ ಯಡಿಯೂರಪ್ಪಗೆ ಸೂಚನೆ?

Twitter
Facebook
LinkedIn
WhatsApp
ಆಂಧ್ರಪ್ರದೇಶದ ರಾಜ್ಯಪಾಲರಾಗಿ ಬಿಎಸ್ ಯಡಿಯೂರಪ್ಪ?


ಬೆಂಗಳೂರು: ರಾಜ್ಯ ರಾಜಕೀಯ ದಿನಕ್ಕೊಂದು ತಿರುವನ್ನು ಈ ನಡುವೆ ಬಿಜೆಪಿಯ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರು ಬಂದು ಹೋದ ನಂತರ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಕೂಗು, ಚರ್ಚೆ ಸದ್ಯಕ್ಕೆ ತಣ್ಣಗಾದಂತೆ ಕಂಡುಬಂದರೂ ಮುಂದೆ ಇನ್ನೆರಡು ವರ್ಷಗಳ ಕಾಲ 2023ರ ವಿಧಾನಸಭೆ ಚುನಾವಣೆಯವರೆಗೆ ಪರಿಸ್ಥಿತಿ ಹೀಗೆಯೇ ಇರುತ್ತದೆ ಎಂದು ಹೇಳಲು ಸಾಧ್ಯವಿಲ್ಲ ಎಂದು ತಿಳಿದುಬಂದಿದೆ.

ಅರುಣ್ ಸಿಂಗ್ ಅವರು ಬಂದು ಹೋದ ನಂತರ ಮುಖ್ಯಮಂತ್ರಿ ಯಡಿಯೂರಪ್ಪನವರು ಸದ್ಯಕ್ಕೆ ನಿರಾಳರಾದಂತೆ ಕಂಡುಬಂದರೂ ಕೂಡ ಇದು ದೀರ್ಘಸಮಯದವರೆಗೆ ಹೀಗೆಯೇ ಇರಬಹುದು ಎಂಬ ವಾತಾವರಣ ಬಿಜೆಪಿಯಲ್ಲಿ ಇಲ್ಲ.

ಕರ್ನಾಟಕಕ್ಕೆ ಆಗಮಿಸಿದ ಅರುಣ್ ಸಿಂಗ್. ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ.

ಕೋವಿಡ್ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ಮೇಲೆ ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ನಡೆಯುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ. ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಕೆಲವು ನಾಯಕರು ನಾಯಕತ್ವ ಬದಲಾವಣೆಗೆ ನಿರಂತರ ಒತ್ತಡ ಹಾಕದೆ ಇರಲಾರರು. ಅರುಣ್ ಸಿಂಗ್ ಅವರು ಬಂದು ಹೋಗಿ ಹೈಕಮಾಂಡ್ ಅವರಿಗೆ ವರದಿ ನೀಡಿದ ಮೇಲೆ ಯಡಿಯೂರಪ್ಪನವರನ್ನು ಬಂದು ಭೇಟಿ ಮಾಡುವಂತೆ ವರಿಷ್ಠರು ಸೂಚಿಸಿದ್ದಾರೆ ಎನ್ನಲಾಗುತ್ತಿದೆ.

ಯಡಿಯೂರಪ್ಪನವರ ಸಂಪುಟದ ಹಿರಿಯ ಸಹೋದ್ಯೋಗಿಯೊಬ್ಬರು ಹೇಳುವ ಪ್ರಕಾರ, ನಾಯಕತ್ವ ಬದಲಾವಣೆ ಸದ್ಯಕ್ಕಿಲ್ಲ. ಅಂದರೆ ಕೋವಿಡ್ ಪರಿಸ್ಥಿತಿ ಮುಂದೆ ಏನಾಗುತ್ತದೋ ಎಂದು ಆತಂಕ, ಅನಿಶ್ಚಿತತೆ ಇರುವುದರಿಂದ ನಾಯಕತ್ವದ ಬದಲಾವಣೆ ಪ್ರಶ್ನೆ ಇನ್ನು ಮೂರ್ನಾಲ್ಕು ತಿಂಗಳು ಉದ್ಭವಿಸದು. ಆದರೆ ಮುಂದೆ ಆರು ತಿಂಗಳಲ್ಲಿ ನಾಯಕತ್ವ ಬದಲಾವಣೆಯನ್ನು ತಳ್ಳಿಹಾಕುವಂತಿಲ್ಲ ಎಂದಿದ್ದಾರೆ.

ನಿಜವಾಗಿಯೂ ರಾಜ್ಯ ಬಿಜೆಪಿಯ ಆಂತರಿಕ ಕಲಹ ಕಡಿಮೆಯಾಗಿದೆಯ?

2023ರ ವಿಧಾನಸಭೆ ಚುನಾವಣೆಗೆ ಮುನ್ನ ರಾಜ್ಯದಲ್ಲಿ ನಾಯಕತ್ವ ಬದಲಾವಣೆಯಾಗಬೇಕು ಎಂದು ಹೈಕಮಾಂಡ್ ಸ್ಪಷ್ಟವಾಗಿ ತಿಳಿದಿದೆ. ಆದರೆ ನಾಯಕತ್ವ ಬದಲಾವಣೆಗೆ ಈಗ ಸೂಕ್ತ ಸಮಯವಲ್ಲ, ಸರಿಯಾದ ಸಮಯದಲ್ಲಿ ಎಲ್ಲವೂ ನಡೆಯುತ್ತದೆ ಎಂದು ತಿಳಿಸಿದ್ದಾರೆ.

ಹಾಗಾದರೆ ಯಡಿಯೂರಪ್ಪ ಬದಲಿ ನಾಯಕರು ಯಾರು ಎಂಬ ಪ್ರಶ್ನೆಗೆ ಬಿಜೆಪಿಯಲ್ಲಿ ಸದ್ಯಕ್ಕೆ ಕೇಳಿಬರುತ್ತಿರುವ ಹೆಸರುಗಳು ಕೇಂದ್ರದ ಸಚಿವರುಗಳಾದ ಪ್ರಹ್ಲಾದ್ ಜೋಷಿ, ಡಿ ವಿ ಸದಾನಂದ ಗೌಡ ಅಥವಾ ಮತ್ತೊಬ್ಬ ಪ್ರಬಲ ನಾಯಕನಿರಬಹುದು. ಯಡಿಯೂರಪ್ಪನವನ್ನು ಪಕ್ಷದಿಂದ ನಿರ್ಗಮಿಸುವಾಗ ವರಿಷ್ಠರು ಬರಿಕೈಯಲ್ಲಂತೂ ಕಳುಹಿಸುವುದಿಲ್ಲ, ಅವರಿಗೆ ಗೌರವಾನ್ವಿತ ಹುದ್ದೆ ನೀಡಿ ಮರ್ಯಾದೆ, ಗೌರವಗಳಿಂದಲೇ ಕಳುಹಿಸಿಕೊಡಲಿದೆ ಎಂದು ಬಿಜೆಪಿ ಆಂತರಿಕ ಮೂಲಗಳಿಂದ ತಿಳಿದುಬಂದಿದೆ. ಒಟ್ಟಾರೆ ರಾಜ್ಯ ರಾಜಕೀಯ ದಿನಕ್ಕೊಂದು, ಕ್ಷಣಕ್ಕೊಂದು ತಿರುವನ್ನು ಪಡೆಯುತ್ತದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು