ಬೆಂಗಳೂರು: ಭಾರತೀಯ ಆಡಳಿತ ಸೇವೆಯ ಹಿರಿಯ ಅಧಿಕಾರಿ ವಂದಿತಾ ಶರ್ಮಾ ಅವರು ಮಂಗಳವಾರ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸಿದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ತೆರವಾದ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986ನೇ ಸಾಲಿನ ಐಎಎಸ್ ಅಧಿಕಾರಿ ವಂದಿತಾ ಶರ್ಮಾ ಅವರು ಇಂದು ಸಂಜೆ ನೂತನ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ವಹಿಸಿಕೊಂಡರು.
ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ. ಅಂತೆಯೇ, ರಾಜ್ಯ ಸರ್ಕಾರದ 39ನೇ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ.
ಮಹಿಳೆಯರ ದರ್ಬಾರ್!
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಈ ಹಿಂದೆ 2000ನೇ ಇಸವಿಯಲ್ಲಿ ತೆರೇಸಾ ಭಟ್ಟಾಚಾರ್ಯ, 2006ನೇ ಇಸವಿಯಲ್ಲಿ ಮಾಲತಿ ದಾಸ್ ಹಾಗೂ 2017ನೇ ಇಸವಿಯಲ್ಲಿ ಕೆ. ರತ್ನಪ್ರಭ ಅವರೂ ಅಲಂಕರಿಸಿದ್ದರು.
ಕೆ ರತ್ನಪ್ರಭ ಅವರ ಅಧಿಕಾರಾವಧಿಯಲ್ಲಿ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಮಹಾ ನಿರೀಕ್ಷಕ ಹುದ್ದೆಯನ್ನು ನೀಲಮಣಿ ಎನ್ ರಾಜು ಅಲಂಕರಿಸಿದಾಗ ಎರಡು ಪ್ರಮುಖ ಹುದ್ದೆಗಳಲ್ಲಿ ಮಹಿಳೆಯರೇ ಇದ್ದಾರೆ ಎಂಬುದು ಗಮನಾರ್ಹ ಅಂಶವಾಗಿತ್ತು.
ಇದೀಗ ವಂದಿತಾ ಶರ್ಮಾ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ಅಧಿಕಾರ ಸ್ವೀಕರಿಸುವುದರೊಂದಿಗೆ ರಾಜ್ಯದ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ಇರುವ ಮೂರೂ ಪ್ರಮುಖ ಹುದ್ದೆಗಳನ್ನು ಮಹಿಳೆಯರೇ ಅಲಂಕರಿಸಿದಂತಾಗುತ್ತದೆ.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ರಾಜ್ಯ ವಿಧಾನಸಭೆಯ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಹಾಗೂ ರಾಜ್ಯ ವಿಧಾನ ಪರಿಷತ್ ಕಾರ್ಯದರ್ಶಿ ಕೆ ಆರ್ ಮಹಾಲಕ್ಷ್ಮಿ ಶಕ್ತಿ ಕೇಂದ್ರದ ಶಕ್ತಿಯಾಗಿ ಹೊಸ ದಾಖಲೆ ಸ್ಥಾಪಿಸಲಿದ್ದಾರೆ.
ವಂದಿತಾ ಶರ್ಮಾ ಅವರ ನೇಮಕಾತಿಯಲ್ಲಿ ರಾಜ್ಯ ಸರ್ಕಾರವು ಎಂದಿನಂತೆ ಸೇವಾ ಹಿರಿತನವನ್ನು ಪುರಸ್ಕರಿಸಿದೆ. ವಂದಿತಾ ಶರ್ಮಾ ಅವರ ಅಧಿಕಾರಾವಧಿ ನವೆಂಬರ್ 30, 2022 ರವರೆಗೆ ಇದೆ.
ವಂದಿತಾ ಶರ್ಮಾ ಅವರ ಪತಿಯೂ ಕೂಡಾ ಭಾರತೀಯ ಆಡಳಿತ ಸೇವೆಯ ಅಧಿಕಾರಿಯಾಗಿ, ಪ್ರಸ್ತುತ ಹಣಕಾಸು ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ. ಅಲ್ಲದೆ, ಇದೇ ದಿನದಿಂದು ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರ ಹುದ್ದೆಯ ಹೆಚ್ಚುವರಿ ಪ್ರಭಾರವನ್ನೂ ವಹಿಸಿಕೊಂಡಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist