ಭಾನುವಾರ, ಸೆಪ್ಟೆಂಬರ್ 8, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಜ್ಯ ಸರ್ಕಾರ ಘೋಷಿಸಿದೆ ರೈತರ ಮಕ್ಕಳಿಗೆ ಶಿಷ್ಯ ವೇತನ

Twitter
Facebook
LinkedIn
WhatsApp
ರಾಜ್ಯ ಸರ್ಕಾರ ಘೋಷಿಸಿದೆ ರೈತರ ಮಕ್ಕಳಿಗೆ ಶಿಷ್ಯ ವೇತನ

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ವೇಳೆ ತಿಳಿಸಿದಂತೆಯೇ ರೈತರ ಮಕ್ಕಳಿಗೆ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಶಿಷ್ಯವೇತನವನ್ನು ಜಾರಿ ಗೊಳಿಸಿದ್ದಾರೆ. ಕೃಷಿ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ರಫೀ ಅಹಮದ್ ಎಂ.ಎಸ್ ನಡವಳಿಗಳನ್ನು ಹೊರಡಿಸಿದ್ದಾರೆ. ಸಚಿವ ಸಂಪುಟದಲ್ಲಿ ತೆಗೆದುಕೊಂಡಿರುವ ನಿರ್ಣಯದಂತೆ ಈ ಹೊಸ ಶಿಷ್ಯವೇತನ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದಿದ್ದಾರೆ.

ಈ ಶಿಷ್ಯವೇತನ ಪಡೆಯಲು ವಿದ್ಯಾರ್ಥಿಗಳು ರೈತರ ಮಕ್ಕಳಾಗಿದ್ದು, ಕರ್ನಾಟಕ ರಾಜ್ಯದ ಅನುದಾನದಿಂದ ಪಾವತಿಸುವಂತ ಒಂದು ಶಿಷ್ಯವೇತನಕ್ಕೆ ಮಾತ್ರ ಅರ್ಹರಾಗುತ್ತಾರೆ. ಆದರೆ ಮೆರಿಟ್, ಅರ್ಹತಾ ಪರೀಕ್ಷೆ, ಶೈಕ್ಷಣಿಕ ಪರೀಕ್ಷೆಗಳಲ್ಲಿ ರ್ಯಾಂಕ್‌ ಇತ್ಯಾದಿಗಳ ಆಧಾರದ ಮೇಲೆ ಪಡೆಯುವ ಶಿಷ್ಯವೇತನ, ಪ್ರಶಸ್ತಿ, ಪ್ರತಿಫಲ, ಇವುಗಳನ್ನು ರೈತರ ಮಕ್ಕಳು ಪಡೆದಿದ್ದರೂ, ಈ ರೈತ ಮಕ್ಕಳ ಶಿಷ್ಯವೇತನವನ್ನು ಪಡೆಯಲು ಅರ್ಹರಾಗಿರುತ್ತಾರೆ.
ರೈತರ ಮಕ್ಕಳ ತಂದೆ-ತಾಯಿ ಇಬ್ಬರು ಕೃಷಿ ಜಮೀನಿನ ಒಡೆಯರಾಗಿದ್ದರೇ, ಈ ಯೋಜನೆಯಲ್ಲಿ ಒಂದು ಶಿಷ್ಯವೇತನಕ್ಕೆ ಮಾತ್ರ ರೈತರ ಮಕ್ಕಳು ಅರ್ಹರಾಗಿರುತ್ತಾರೆ. ಶಿಕ್ಷಣದ ಯಾವುದೇ ಕೋರ್ಸಿನ ಸೆಮಿಷ್ಟರ್, ಶೈಕ್ಷಣಿಕ ವರ್ಷಗಳಿಗೆ ಮಿತಿಯಾಗಿರತ್ಕದ್ದು. ಕೋರ್ಸ್‌ನ ಸೆಮಿಸ್ಟರ್ ನಲ್ಲಿ, ಶೈಕ್ಷಣಿಕ ವರ್ಷದಲ್ಲಿ ಅನುತ್ತೀರ್ಣ ಹೊಂದಿ, ಪುನಹ ಆ ಸೆಮಿಸ್ಟರ್, ಶೈಕ್ಷಣಿಕ ವರ್ಷದಲ್ಲಿ ವಿದ್ಯಾಭ್ಯಾಸದ ಪುನರಾವರ್ತನೆ ಆದರೇ, ( ಪುನಃ ಪರೀಕ್ಷೆ ತೆಗೆದುಕೊಂಡರೇ ) ವಿದ್ಯಾರ್ಥಿಗಳು ಶಿಕ್ಷವೇತನವನ್ನು ಪಡೆಯಲು ಅರ್ಹರಾಗಿರುವುದಿಲ್ಲ.
ರೈತರ ಮಕ್ಕಳಿಗೆ ಪದವಿಯ ಮುಂಚೆ ಪಿಯುಸಿ, ಐಟಿಐ, ಡಿಪ್ಲೊಮಾ – ವಿದ್ಯಾರ್ಥಿಗಳಿಗೆ ರೂ. 2,500, ವಿದ್ಯಾರ್ಥಿನಿಯರಿಗೆ ರೂ.3,000 ನಿಗದಿ ಪಡಿಸಲಾಗಿದೆ. ಎಲ್ಲಾ ಬಿಎ, ಬಿಎಸ್ಸಿ, ಬಿಕಾಂ ಇತ್ಯಾದಿ ಹಾಗೂ ಎಂಬಿಬಿಎಸ್, ಬಿಇ, ಬಿಟೆಕ್ ಮತ್ತು ವೃತ್ತಿಪರ ಕೋರ್ಸ್ ಹೊರತುಪಡಿಸಿ – ವಿದ್ಯಾರ್ಥಿಗಳಿಗೆ ರೂ.5,000. ವಿದ್ಯಾರ್ಥಿನಿಯರಿಗೆ ರೂ.5,500 ದೊರೆಯುತ್ತದೆ.

ಎಲ್‌ಎಲ್‌ಬಿ, ಪ್ಯಾರಾ ಮೆಡಿಕಲ್, ಬಿ.ಫಾರ್ಮ್, ನರ್ಸಿಂಗ್ ಇತ್ಯಾದಿ ವೃತ್ತಿಪರ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ರೂ.7,500, ವಿದ್ಯಾರ್ಥಿನಿಯರಿಗೆ ರೂ.8,000 ನೀಡಲಾಗುತ್ತದೆ. ಅಲ್ಲದೇ ಎಂಬಿಬಿಎಸ್, ಬಿಇ, ಬಿಟೆಕ್ ಮತ್ತು ಎಲ್ಲಾ ಸ್ನಾತಕೋತ್ತರ ಕೋರ್ಸ್ ಗಳ ವಿದ್ಯಾರ್ಥಿಗಳಿಗೆ ರೂ.10,000. ವಿದ್ಯಾರ್ಥಿನಿಯರಿಗೆ ರೂ.11,000 ಪಡೆಯಬಹುದು. ಅಲ್ಲದೇ ಈ ಶಿಷ್ಯವೇತನವನ್ನು ಯಾವುದಾದರೂ ಒಂದು ವಿಧದ ಕೋರ್ಸ್‌ಗೆ ನೀಡಲಾಗುವುದು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು