ಶನಿವಾರ, ಜೂನ್ 15, 2024
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!-HSRP ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ-ಇಂದು ಯುಎಸ್ಎ ಮತ್ತು ಭಾರತ ತಂಡ ಮುಖಾಮುಖಿ; ಯಾರಿಗೆ ಗೆಲುವು..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!-ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿ ಮಾಡಿದೆ ಪ್ರಶಾಂತ್‌ ಕಿಶೋರ್‌, ರಾಹುಲ್ ಗಾಂಧಿ ಭೇಟಿ.

Twitter
Facebook
LinkedIn
WhatsApp
ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಸೃಷ್ಟಿ ಮಾಡಿದೆ ಪ್ರಶಾಂತ್‌ ಕಿಶೋರ್‌, ರಾಹುಲ್ ಗಾಂಧಿ ಭೇಟಿ.

ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್‌ ಮಂಗಳವಾರ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿಯವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ದೆಹಲಿಯ ರಾಹುಲ್ ಗಾಂಧಿ ನಿವಾಸಕ್ಕೆ ತೆರಳಿದ ಪ್ರಶಾಂತ್‌ ಕಿಶೋರ್‌ ಗಂಟೆಗಳ ಕಾಲ ಕಾಂಗ್ರೆಸ್‌ ನಾಯಕರ ಜೊತೆ ಚರ್ಚೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಹಾಗೂ ಕೆ.ಸಿ. ವೇಣುಗೋಪಾಲ್ ಹಾಜರಿದ್ದರು.
ಜೂನ್‌ 21ರಂದು ಪ್ರಶಾಂತ್‌ ಕಿಶೋರ್‌ ಹಾಗೂ ಶರದ್‌ ಪವಾರ್‌ ಚರ್ಚೆ ನಡೆಸಿದ್ದು ದೇಶದಲ್ಲಿ ಹೊಸ ರಾಜಕೀಯ ಸಾಧ್ಯತೆಗಳ ಕುರಿತು ಚರ್ಚೆ ಆರಂಭವಾಗಿತ್ತು. 2 ವಾರಗಳ ನಂತರ ಅವರು ರಾಹುಲ್ ಗಾಂಧಿಯವರನ್ನು ಭೇಟಿಯಾಗಿರುವುದು ದೆಹಲಿ ರಾಜಕೀಯದಲ್ಲಿ ಹೊಸ ರಾಜಕೀಯ ಗಾಳಿ ಬೀಸುವ ಮುನ್ಸೂಚನೆಯಾಗಿದೆ ಎಂದು ಹಲವು ರಾಜಕೀಯ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ವಿರುದ್ಧ ವಿರೊಧ ಪಕ್ಷಗಳ ಒಕ್ಕೂಟವನ್ನು ರಚಿಸುವ ಪ್ರಯತ್ನದಲ್ಲಿ ಅವರು ತೊಡಗಿದ್ದಾರೆ ಎಂಬ ಚರ್ಚೆ ಕಳೆದ ತಿಂಗಳಲ್ಲಿಯೇ ಆರಂಭವಾಗಿತ್ತು. ಪ್ರಶಾಂತ್ ಕಿಶೋರ್‌ ಭೇಟಿಯ ಮಾರನೇ ದಿನ ಶರದ್‌ ಪವಾರ್‌ ತಮ್ಮ ನಿವಾಸದಲ್ಲಿ ವಿರೋಧ ಪಕ್ಷಗಳ ಮುಖಂಡರ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಕಾಂಗ್ರೆಸ್‌ ನಾಯಕರ ಅನುಪಸ್ಥಿತಿ ತ್ರತೀಯ ರಂಗದ ರಚನೆಯ ಊಹಾಪೋಹಗಳು ಹರಿದಾಡಲು ಕಾರಣವಾಗಿತ್ತು. ಶರದ್‌ ಪವಾರ್ ತೃತೀಯ ರಂಗದ ಎಲ್ಲಾ ವದಂತಿಗಳನ್ನು ತಳ್ಳಿಹಾಕಿ ಕಾಂಗ್ರೆಸ್‌ ಇಲ್ಲದ ವಿರೊಧ ಪಕ್ಷಗಳ ಒಕ್ಕೂಟದಿಂದ ಬಿಜೆಪಿ ಎದುರಿಸುವುದು ಸಾಧ್ಯವಿಲ್ಲ ಎಂದಿದ್ದರು.

ಶರದ್‌ ಪವಾರ್‌ ಹೇಳಿಕೆಯ ಬೆನ್ನಲ್ಲೇ ಮಂಗಳವಾರ ಮಧ್ಯಾಹ್ನ ಪ್ರಶಾಂತ್‌ ಮತ್ತು ರಾಹುಲ್ ಭೇಟಿಯಾಗಿರುವುದು 2024ರ ಲೋಕಸಭೆ ಚುನಾವಣೆಗೆ ಬಿಜೆಪಿ ವಿರುದ್ಧ ವಿರೋಧ ಪಕ್ಷಗಳನ್ನು ಒಗ್ಗೂಡಿಸುವ ಪ್ರಯತ್ನ ನಡೆಯುತ್ತಿದೆ ಎಂಬ ವದಂತಿಗಳಿಗೆ ಪುಷ್ಠಿ ನೀಡಿದೆ.

ಎನ್‌ಸಿಪಿ ಮುಖ್ಯಸ್ಥ ಶರದ್‌ ಪವಾರ್‌, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್, ಶಿವಸೇನೆ ಸಂಸದ ಸಂಜಯ್‌ ರಾವತ್‌ ಸೇರಿದಂತೆ ಹಲವು ನಾಯಕರು 2024ರ ಲೋಕಸಭೆ ಚುನಾವಣೆಯಲ್ಲಿ ವಿರೊಧ ಪಕ್ಷಗಳು ಒಟ್ಟಾಗಿ ಬಿಜೆಪಿ ವಿರುದ್ಧ ಸ್ಪರ್ಧಿಸಬೇಕು ಎಂಬ ಪ್ರಶಾಂತ್‌ ಕಿಶೊರ್‌ ಅಭಿಪ್ರಾಯಕ್ಕೆ ಸಹಮತ ವ್ಯಕ್ತಪಡಿಸಿದ್ದಾರೆ. ಸಂಸತ್‌ ಮುಂಗಾರು ಅಧಿವೇಶನಕ್ಕೂ ವಾರ ಮೊದಲು ಪ್ರಶಾಂತ್‌ ಕಿಶೋರ್‌ ಮತ್ತು ಕಾಂಗ್ರೆಸ್‌ ನಾಯಕರ ಭೇಟಿ ರಾಷ್ಟ್ರ ರಾಜಕಾರಣದಲ್ಲಿ ಮಹತ್ವದ ಬದಲಾವಣೆ ಘಟಿಸುವ ಮುನ್ಸೂಚನೆ ನೀಡುತ್ತಿದೆ.
ಈ ಬಾರಿ ಸಂಸತ್‌ ಮುಂಗಾರು ಅಧಿವೇಶನ ಜುಲೈ 19ರಿಂದ ಅರಂಭವಾಗಿದ್ದು, ಕೋವಿಡ್‌ ಎರಡನೇ ಅಲೆಯ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯಗಳು ತೀವ್ರ ಚರ್ಚೆಗೆ ಗುರಿಯಾಗುವ ಸಾಧ್ಯತೆ ಇದೆ. ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ದೆಹಲಿಯಲ್ಲಿ ಸುಮಾರು 9 ತಿಂಗಳಿನಿಂದ ಧರಣಿ ನಡೆಸುತ್ತಿದ್ದಾರೆ. ಇದೆರಡು ಮುಖ್ಯ ವಿಷಯಗಳು ಸಂಸತ್‌ ಅಧಿವೇಶನದಲ್ಲಿ ಪ್ರತಿಧ್ವನಿಸುವ ಸಾಧ್ಯತೆ ಇದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!

ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ! Twitter Facebook LinkedIn WhatsApp ಮಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನೇ ದಿನೇ ಏರಿಕೆ ಆಗುತ್ತಿವೆ. ಇಂದು ಸಾಗರದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು