ಶನಿವಾರ, ಜುಲೈ 20, 2024
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-ಬಂಟ್ವಾಳ: ಪುಂಜಾಲಕಟ್ಟೆ ಬಳಿ ಲಾರಿ ಪಲ್ಟಿ; ಓರ್ವ ಸಾವು, ಮೂವರು ಗಂಭೀರ.!-ಶಿರಾಡಿ ಘಾಟ್ ನಲ್ಲಿ ಓಮ್ನಿ ಕಾರಿನ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು-Hardik Pandya - Natasa: ವಿಚ್ಛೇದನ ಪ್ರಕಟಿಸಿದ ಹಾರ್ದಿಕ್ ಪಾಂಡ್ಯ, ನತಾಶಾ-ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ-World Record: ಟೆಸ್ಟ್ ಕ್ರಿಕೆಟಿನಲ್ಲಿ ಅತಿ ವೇಗದ 50 ರನ್; ವಿಶ್ವ ದಾಖಲೆ ನಿರ್ಮಿಸಿದ ಇಂಗ್ಲೆಂಡ್-ದಿಬ್ರುಗಢ ಎಕ್ಸ್‌ಪ್ರೆಸ್ ಅಪಘಾತದ ಬಗ್ಗೆ ಪ್ರಧಾನ ಮಂತ್ರಿ ಮೋದಿ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ-Aanvi Kamdar: ವಿಡಿಯೋ ಮಾಡುವ ವೇಳೆ 300 ಅಡಿ ಎತ್ತರದ ಫಾಲ್ಸ್​​ನಿಂದ ಬಿದ್ದು ಇನ್​ಸ್ಟಾ ತಾರೆ ಸಾವು-ದಕ್ಷಿಣ ಕನ್ನಡ ಜಿಲ್ಲೆಯ ಈ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ಜು.18 ರಂದು ರಜೆ ಘೋಷಣೆ-ನಕಲಿ ರಜೆ ಆದೇಶ: ಎಫ್.ಐ.ಆರ್ ದಾಖಲಿಸಲು ಡಿಸಿ‌ ಸೂಚನೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರೆಹಮಾನ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಂದಮೂರಿ ಬಾಲಕೃಷ್ಣ

Twitter
Facebook
LinkedIn
WhatsApp
ರೆಹಮಾನ್ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ನಂದಮೂರಿ ಬಾಲಕೃಷ್ಣ

ಚೆನ್ನೈ:ಭಾರತೀಯ ಚಿತ್ರರಂಗದ ಆಸ್ಕರ್ ಪ್ರಶಸ್ತಿ ಪುರಸ್ಕೃತ ಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರೆಹಮಾನ್ (AR Rahman) ಹೆಸರು ಯಾರಿಗೆ ತಾನೇ ಗೊತ್ತಿಲ್ಲ? ಬಾಲಿವುಡ್, ಟಾಲಿವುಡ್, ಕಾಲಿವುಡ್, ಮಾಲಿವುಡ್ ಮಾತ್ರವಲ್ಲದೆ ಸ್ಲಂ ಡಾಗ್ ಮಿಲಿಯನೇರ್ ಎಂಬ ಇಂಗ್ಲಿಷ್ ಸಿನಿಮಾಗೂ ಸಂಗೀತ ನೀಡಿ ಇಡೀ ವಿಶ್ವದ ಗಮನ ಸೆಳೆದವರು ಎ.ಆರ್. ರೆಹಮಾನ್. ಆದರೆ, ಟಾಲಿವುಡ್ ಖ್ಯಾತ ನಟ ನಂದಮೂರಿ ಬಾಲಕೃಷ್ಣ (Nandamuri Balakrishna) ಅವರಿಗೆ ಎಆರ್ ರೆಹಮಾನ್ ಯಾರೆಂದೇ ಗೊತ್ತಿಲ್ಲವಂತೆ! ಸದಾ ಒಂದಿಲ್ಲೊಂದು ವಿವಾದಗಳಿಂದ ಸುದ್ದಿಯಾಗುತ್ತಿರುವ ನಂದಮೂರಿ ಬಾಲಕೃಷ್ಣ ಇದೀಗ ರೆಹಮಾನ್ ಬಗ್ಗೆ ನೀಡಿದ ಹೇಳಿಕೆಯಿಂದ ಮತ್ತೊಮ್ಮೆ ಟ್ರೋಲ್ ಆಗಿದ್ದಾರೆ.

ಇತ್ತೀಚೆಗೆ ನೀಡಿದ ಸಂದರ್ಶನವೊಂದರಲ್ಲಿ ಎ.ಆರ್.ಅವರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿರುವ ನಂದಮೂರಿ ಬಾಲಕೃಷ್ಣ, ಎ.ಆರ್. ರೆಹಮಾನ್ ಯಾರು ಎಂಬುದೇ ನನಗೆ ಗೊತ್ತಿಲ್ಲ. ಅವರು ಆಸ್ಕರ್ ಪ್ರಶಸ್ತಿ ಪಡೆದಿದ್ದಾರೆಂದು ಕೇಳಿದ್ದೇನೆ. ಆದರೆ,ಎಂಬುದೇ ನನಗೆ ಗೊತ್ತಿಲ್ಲ. ಆದರೆ, ನನಗಿನ್ನೂ ಅವರು ಯಾರೆಂದೇ ಗೊತ್ತಾಗಿಲ್ಲ. ರೆಹಮಾನ್ ಎಲ್ಲೋ ಹತ್ತು ವರ್ಷಕ್ಕೊಂದು ಹಿಟ್ ಗೀತೆಯನ್ನು ಕೊಡುತ್ತಾರೆ ಅಷ್ಟೇ ಎನ್ನುವ ಮೂಲಕ ಅನೇಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ ನಟ ಬಾಲಕೃಷ್ಣ.

ಇದಿಷ್ಟೇ ಅಲ್ಲದೆ, ಭಾರತದ ಅತ್ಯುನ್ನತ ಪ್ರಶಸ್ತಿಯಾದ ಭಾರತ ರತ್ನ ಪ್ರಶಸ್ತಿಯ ಬಗ್ಗೆಯೂ ಲೇವಡಿ ಮಾಡುವ ಮೂಲಕ ನಂದಮೂರಿ ಬಾಲಕೃಷ್ಣ ವಿವಾದಕ್ಕೀಡಾಗಿದ್ದಾರೆ. ಭಾರತ ರತ್ನ ಪ್ರಶಸ್ತಿ ನನ್ನ ತಂದೆ ಎನ್​ಟಿಆರ್ ಅವರ ಕಾಲಿನ ಬೆರಳಿನ ಉಗುರಿಗೆ ಸಮಾನ. ಯಾವ ಪ್ರಶಸ್ತಿಗಳೂ ನಮ್ಮ ಕುಟುಂಬ ಟಾಲಿವುಡ್ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಮೀರಿಸಲು ಸಾಧ್ಯವಿಲ್ಲ. ನಮಗ್ಯಾರಿಗೂ ಪ್ರಶಸ್ತಿಗಳು ಬಂದಿಲ್ಲವೆಂದರೆ ಆ ಪ್ರಶಸ್ತಿಗಳೇ ಬೇಸರ ಮಾಡಿಕೊಳ್ಳಬೇಕೇ ಹೊರತು ನಾವಲ್ಲ ಎಂದು ಹೇಳಿಕೆ ನೀಡಿ ಟ್ರೋಲಿಗರಿಗೆ ಆಹಾರವಾಗಿದ್ದಾರೆ.

ಇತ್ತೀಚೆಗಷ್ಟೇ ಎನ್​ಟಿಆರ್​ಗೆ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಮೆಗಾಸ್ಟಾರ್ ಚಿರಂಜೀವಿ ಸೇರಿದಂತೆ ಅನೇಕ ನಟರು ಒತ್ತಾಯಿಸಿದ್ದರು. ನಂದಮೂರಿ ಬಾಲಕೃಷ್ಣ ಅವರ ಈ ಸಂದರ್ಶನದ ತುಣುಕುಗಳು ಯೂಟ್ಯೂಬ್​ನಲ್ಲಿ ಪ್ರಸಾರವಾಗುತ್ತಿದ್ದಂತೆ ಎ.ಆರ್. ರೆಹಮಾನ್​ ಅಭಿಮಾನಿಗಳು ನಂದಮೂರಿ ಬಾಲಕೃಷ್ಣ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ. ಇದೇ ಎ.ಆರ್. ರೆಹಮಾನ್ 1993ರಲ್ಲಿ ನಂದಮೂರಿ ಬಾಲಕೃಷ್ಣ ಅವರ ನಿಪ್ಪು ರವ್ವ ಎಂಬ ತೆಲುಗು ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದರು. ಆದರೂ ಅವರಿಗೆ ರೆಹಮಾನ್ ಯಾರೆಂದೇ ಗೊತ್ತಿಲ್ಲದಿರುವುದು ಆಶ್ವರ್ಯದ ಸಂಗತಿ ಎಂದು ನೆಟ್ಟಿಗರು ಟೀಕಿಸಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ದಕ್ಷಿಣ ಕನ್ನಡ, ಉಡುಪಿ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜು.19 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.20 ರಂದು ಶಾಲೆ ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ದಕ್ಷಿಣ ಕನ್ನಡ ಜಿಲ್ಲೆ: ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆ ಜುಲೈ 20 ರಂದು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು