ಶನಿವಾರ, ಸೆಪ್ಟೆಂಬರ್ 7, 2024
ಪ್ರಜ್ವಲ್‌ ರೇವಣ್ಣಗೆ ಶಾಕ್; ಜಾಮೀನು ಅರ್ಜಿ ವಜಾ!-ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ಸುಳ್ಳು ಸುದ್ದಿ; ಇಬ್ಬರ ವಿರುದ್ಧ ಕೇಸ್ ದಾಖಲು-ಕೋವಿಡ್ ಹಗರಣ: ಸಿಎಂ ಕೈ ಸೇರಿದ ವರದಿ; ಮಾಜಿ ಆರೋಗ್ಯ ಸಚಿವರಿಗೆ ತಟ್ಟುತ್ತಾ ಬಿಸಿ?-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರಾಜ್ಯದ ರೈತರಿಗೆ ಸಿಹಿ ಸುದ್ದಿ ಕೊಟ್ಟ ಕೇಂದ್ರ ಸರ್ಕಾರ; ಬೆಂಬಲ ಬೆಲೆ!-ರೇಪ್ ಹೇಗಾಗುತ್ತೆ ಎಂದು ಕಂಗನಾಗೆ (Kangana Ranaut) ಕೇಳಿ; ಮಾಜಿ ಸಂಸದನ ವಿವಾದಿತ ಹೇಳಿಕೆ!-Chikkaballapur: ಟಿಟಿ - ಕಾರಿನ ಮಧ್ಯೆ ಭೀಕರ ಅಪಘಾತ; ಮೂವರ ದುರ್ಮರಣ-ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ-Sarah Rahanuma: ಟಿವಿ ಪತ್ರಕರ್ತೆಯ ಶವ ಢಾಕಾ ಸರೋವರದಲ್ಲಿ ಪತ್ತೆ-ನಟ ದರ್ಶನ್ ಗೆ ಜೈಲೇ ಗತಿ; ನ್ಯಾಯಾಂಗ ಬಂಧನ ವಿಸ್ತರಣೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ರೈತರು ದಂಧೆಕೋರರು ಎಂದು ಬಂಟ್ವಾಳದ ಶಾಸಕರು ಆಡಿದ ಮಾತು ರೈತರಿಗೆ ಮಾಡಿದ ಅಪಮಾನ-ಜಿಲ್ಲಾ ಕಿಸಾನ್ ಕಾಂಗ್ರೆಸ್ ಆರೋಪ.

Twitter
Facebook
LinkedIn
WhatsApp
ರೈತರು ದಂಧೆಕೋರರು ಎಂದು ಬಂಟ್ವಾಳದ ಶಾಸಕರು ಆಡಿದ ಮಾತು ರೈತರಿಗೆ ಮಾಡಿದ ಅಪಮಾನ-ಜಿಲ್ಲಾ ಕಿಸಾನ್ ಕಾಂಗ್ರೆಸ್ ಆರೋಪ.

ಬಂಟ್ವಾಳ: ಬಿಜೆಪಿ ರೈತ ಮೋರ್ಚಾ ಸಮಾವೇಶದಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು  ರೈತರನ್ನು ದಂಧೆಕೋರರು ಎಂಬ ಪದ ಬಳಕೆ ಮಾಡುವ ಮೂಲಕ ರೈತರನ್ನು ಅವಮಾನಿಸಿದ್ದು, ಇದನ್ನು ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕ, ಬಂಟ್ವಾಳ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್, ಎರಡೂ ಬ್ಲಾಕ್‌ನ ಕಿಸಾನ್ ಘಟಕವು ಖಂಡಿಸುತ್ತದೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ ಅವರು ಎಚ್ಚರಿಸಿದ್ದಾರೆ.ಶುಕ್ರವಾರ ಬಿ.ಸಿ.ರೋಡಿನಲ್ಲಿರುವ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ದೆಹಲಿಯಲ್ಲಿ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರಿಗೆ ಕೇಂದ್ರ ಸರಕಾರ ಯಾವುದೇ ಸ್ಪಂದನೆ ನೀಡಿಲ್ಲ ಎಂದು ಟೀಕಿಸಿದ ಅವರು ರೈತರ ಹಿತ ಕಾಪಾಡಲು ಕಾಂಗ್ರೆಸ್ ಸರಕಾರ ಮಾತ್ರ ಬದ್ದವಾಗಿದೆ ಎಂದರು.

ಅದಾನಿ ಕಂಪೆನಿಯ ಹೈ ಪವರ್ ವಿದ್ಯುತ್ ಲೈನ್ ಸಂಪರ್ಕ ಬಂಟ್ವಾಳ ತಾಲೂಕಿನ ಕೃಷಿ ಭೂಮಿಯ ಮೇಲೆ ಹಾದುಹೋದರೆ ಅನೇಕ ಕೃಷಿಕರ ಜೀವನ ನರಕವಾಗಲಿದ್ದು, ಈ ಬಗ್ಗೆ ಬಂಟ್ವಾಳ ಶಾಸಕರು ತಮ್ಮ ನಿಲುವು ಸ್ಪಷ್ಟಪಡಿಸಬೇಕು, ಈ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ, ಅಗತ್ಯ ಬಿದ್ದರೆ ಕೇರಳ ಸರಕಾರ ವಿರುದ್ಧವು ಹೋರಾಟಕ್ಕೆ ಸಿದ್ದ ಎಂದರು. ಬಂಟ್ವಾಳ ತಾಲೂಕಿನ ೬ ಗ್ರಾಮಗಳಲ್ಲಿ ವಿದ್ಯುತ್ ಹೈಟೆನ್ಶೆನ್ ತಂತಿ ಹಾದುಹೋಗಲಿದ್ದು, ಈಗಾಗಲೇ ಸಮಾನ ಮನಸ್ಕ ಸಂಘಟನೆ ಹಾಗೂ ರೈತರ ಜೊತೆ ಸೇರಿ ಕಾಂಗ್ರೆಸ್ ಕಿಸಾನ್ ಘಟಕವು ಪ್ರತಿಭಟನೆಯಲ್ಲಿ ಭಾಗಿಯಾಗಿದೆ ಎಂದರು.
ಮಾಜಿ ಸಚಿವ ರಮಾನಾಥ ರೈ ಅವರ ಮಾರ್ಗದರ್ಶನದಲ್ಲಿ ಸಭೆ ಸೇರಿ ಮುಂದಿನ ಹೋರಾಟದ ಬಗ್ಗೆ ಚರ್ಚಿಸಲಾಗುವುದಲ್ಲದೆ ನ್ಯಾಯಾಲಯದ ಮೊರೆ ಹೋಗಲು ಯೋಚಿಸಲಾಗುವುದು ಎಂದ ಅವರು ಕೃಷಿಕ ಶಾಸಕ ಎಂದು ಹೇಳಿಕೊಳ್ಳುವ ಶಾಸಕ ರಾಜೇಶ್ ನಾಯ್ಕ್ ಈ ವಿಚಾರದಲ್ಲಿ ಮತ್ತು ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಮಸೂದೆಯನ್ನು ವಿರೋಧ ಮಾಡಿ ನಮ್ಮ ಜೊತೆ ಹೋರಾಟದಲ್ಲಿ ಭಾಗಿಯಾಗಬೇಕು ಎಂದು ಸವಾಲೆಸೆದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಜಿ.ಪಂ. ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಕಿಸಾನ್ ಘಟಕದ ಪ್ರಮುಖರಾದ ಸದಾನಂದ ಶೆಟ್ಟಿ, ಸೋಮೇಶೇಖರ್ ಗೌಡ, ಪುಸರಭಾ ಸದಸ್ಯ ಜನಾರ್ದನ ಚೆಂಡ್ತಿಮಾರ್,ವೆಂಕಪ್ಪ ಪೂಜಾರಿ ಬಂಟ್ವಾಳ ಉಪಸ್ಥಿತರಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ivan dsouza ಐವನ್ ಡಿಸೋಜಾ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ

ಐವನ್ ಡಿಸೋಜಾ ಮನೆ ಮೇಲೆ ಕಲ್ಲುತೂರಾಟ: ಬಂಟ್ವಾಳ ಮೂಲದ ಇಬ್ಬರ ಬಂಧನ Twitter Facebook LinkedIn WhatsApp ಮಂಗಳೂರು, ಆಗಸ್ಟ್​​ 28: ರಾಜ್ಯಪಾಲರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಎಂಎಲ್​ಸಿ ಐವನ್ ಡಿಸೋಜಾ (Ivan D’Souza)  ಮನೆ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು