ಶನಿವಾರ, ಜೂನ್ 15, 2024
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!-HSRP ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ-ಇಂದು ಯುಎಸ್ಎ ಮತ್ತು ಭಾರತ ತಂಡ ಮುಖಾಮುಖಿ; ಯಾರಿಗೆ ಗೆಲುವು..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!-ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಲಸಿಕೆ ಪಡೆಯಲು ಆಧಾರ್ ಕಡ್ಡಾಯವಲ್ಲ- ಕೇಂದ್ರದ ಸ್ಪಷ್ಟನೆ

Twitter
Facebook
LinkedIn
WhatsApp
ಲಸಿಕೆ ಪಡೆಯಲು ಆಧಾರ್ ಕಡ್ಡಾಯವಲ್ಲ- ಕೇಂದ್ರದ ಸ್ಪಷ್ಟನೆ
ನವದೆಹಲಿ: ಕೇಂದ್ರ ಸರ್ಕಾರ ಕೊರೋನಾ ಲಸಿಕೆ ಕುರಿತಂತೆ ಮಹತ್ವದ ಸ್ಪಷ್ಟೀಕರಣವನ್ನು ನೀಡಿದ್ದು, ಅದರ ಪ್ರಕಾರ ಲಸಿಕೆ ಪಡೆಯಲು ಆಧಾರ್ ಕಾರ್ಡ್ ಕಡ್ಡಾಯವಲ್ಲ. ಈ ಬಗ್ಗೆ ಆಧಾರ್ ಪ್ರಾಧಿಕಾರ ಸ್ಪಷ್ಟನೆ ನೀಡಿದ್ದು ದೇಶದ ಪ್ರಜೆಗಳು ಆಧಾರ್ ಹೊಂದಿಲ್ಲದ ಕೂಡಲೇ, ಅವರಿಗೆ ರೋಗದ ಆರೈಕೆಯಿಂದ ಹಾಗೂ ಲಸಿಕೆಯಿಂದ ನಿರಾಕರಿಸುವಂತಿಲ್ಲ ಎಂದಿದೆ. ಈ ಬಗ್ಗೆ ಆಧಾರ್ ಕಾಯ್ದೆಯ ಕಲ೦ 7 ಯನ್ನು ಉಲ್ಲೇಖಿಸಿರುವ ಪ್ರಾಧಿಕಾರ ಯಾವುದೇ ನಿರಾಕರಣೆಯನ್ನು ಈ ಕಾಯ್ದೆ ಯ ಪ್ರಕಾರ ಮಾಡುವಂತಿಲ್ಲ ಎಂದಿದೆ. ಇದು ಅಲ್ಲದೆ ಸರ್ಕಾರದ ಉನ್ನತ ಸಂಸ್ಥೆಗಳಿಗೆ ಮತ್ತು ಅಧಿಕಾರಿಗಳಿಗೆ ಈ ಬಗ್ಗೆ ವಿಶೇಷ ಮಾಹಿತಿಯನ್ನು ರವಾನಿಸಲಾಗಿದೆ ಎಂದು ಆಧಾರ್ ಪ್ರಾಧಿಕಾರ ಸ್ಪಷ್ಟಪಡಿಸಿದೆ.

2017 ರಂದು ಕಾನೂನು ರೂಪದಲ್ಲಿ ಬಂದ ಆಧಾರ್ ಕಾಯ್ದೆ ಸಾರ್ವಜನಿಕ ವಿಷಯದಲ್ಲಿ ಪಾರದರ್ಶಕತೆಯನ್ನು ಕಾಯ್ದುಕೊಳ್ಳಲು ಕ್ಕೆ ಗುರಿಯನ್ನು ಹೊಂದಿದೆ ಹೊರತು ಯಾವುದೇ ನಾಗರಿಕರಿಗೆ ಮೂಲಭೂತ ಸೌಕರ್ಯಗಳನ್ನು ನಿರಾಕರಿಸುವ ಉದ್ದೇಶ ಹೊಂದಿಲ್ಲ ಎಂದು ಪ್ರಾಧಿಕಾರ ಸ್ಪಷ್ಟಪಡಿಸಿದೆ.ಈ ಮೊದಲು ಆಧಾರ್ ಕಾರ್ಡ್ ಹೊಂದಿದವರಿಗೆ ಕೆಲವು ಆಸ್ಪತ್ರೆಗಳಲ್ಲಿ ಹಾಗೂ ಸಂಸ್ಥೆಗಳಲ್ಲಿ ಚಿಕಿತ್ಸೆಯನ್ನು ನಿರಾಕರಿಸಲಾಗದು ವರದಿಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ ನಂತರ ಈ ತೀರ್ಮಾನಕ್ಕೆ ಬಂದಿದೆ ಎನ್ನಲಾಗಿದೆ. ಈ ಮೂಲಕ ಲಸಿಕೆ ಹಾಗೂ ರೋಗದ ಆರೈಕೆಯನ್ನು ಪಡೆಯಲು ಆಧಾರ್ ಮುಖ್ಯವಲ್ಲ ಎಂಬುದನ್ನು ಪ್ರಾಧಿಕಾರ ಸ್ಪಷ್ಟಪಡಿಸಿದ ನಂತರ ಎಲ್ಲ ಗೊಂದಲಗಳಿಗೆ ತೆರೆ ಎಳೆಯಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಂತಾರಾಷ್ಟ್ರೀಯ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು