ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
ಮಂಗಳೂರು: ಪಾಸಿಟಿವಿಟಿ ದರ ಕಡಿಮೆ ಮಾಡುವ ಅಗತ್ಯವಿದೆ ಮುಂದಿನ 1 ವಾರ ಕಾಲ ಜನರ ಅನಗತ್ಯ ಸಂಚಾರವನ್ನು ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಹೇಳಿದ್ದಾರೆ.
ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು.
ಇನ್ನಷ್ಟು ತಪಾಸಣಾ ತಂಡಗಳನ್ನು ಈಗಾಗಲೇ ನಿಯೋಜಿಸಲಾಗಿದ್ದು ಕಠಿಣ ತಪಾಸಣೆ ನಡೆಸಲಾಗುವುದು ಅಂದರು. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ಹನ್ನೊಂದು ಗ್ರಾಮ ಪಂಚಾಯತ್ ಗಳಲ್ಲಿ ಶೇಕಡಾ ಐವತ್ತಕ್ಕಿಂತ ಹೆಚ್ಚು ಪಾಸಿಟಿವಿಟಿ ಇದೆ. ಹೀಗಾಗಿ ಇಲ್ಲಿ ಸ್ಪೆಷಲ್ ಲಾಕ್ ಡೌನ್ ಮಾಡಿ ಪೂರ್ವ ನಿಗದಿತ ಮದುವೆಯಂತಹ ಕಾರ್ಯಕ್ರಮಗಳನ್ನು ನಿಲ್ಲಿಸಬೇಕು. ಪಾಸಿಟಿವಿಟಿ ಕಡಿಮೆಯಾಗುವವರೆಗೂ ಕಾರ್ಯಕ್ರಮ, ಸಮಾರಂಭಗಳಿಗೆ ಅನುಮತಿ ನೀಡಲ್ಲ ಎಂದ ಅವರು, ಪಾಸಿಟಿವಿಟಿ ರೇಟ್ ಕಡಿಮೆ ಮಾಡಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಟಫ್ ರೂಲ್ಸ್ ಗಳನ್ನು ಜಾರಿಗೆ ತರಲಾಗಿದ್ದು ಜನರು ಸಹಕರಿಸಬೇಕು ಎಂದು ಮನವಿ ಮಾಡಿದರು.
ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್