
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
ಚೆನ್ನ :ತಮಿಳುನಾಡಿನ ಕೊಯಮತ್ತೂರಿನಲ್ಲಿ ಶಿಕ್ಷಕನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದಳೆನ್ನಲಾದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡು ಸಾವಪ್ಪಿದ ಬಳಿಕ ಭೌ ಶಾಸ್ತ್ರ ಶಿಕ್ಷಕ (೩೧) ಹಾಗೂ ಶಾಲೆಯ ಮುಖ್ಯ ಶಿಕ್ಷಕಿಯನ್ನು ಕೊಯಮತ್ತೂರು ಪೊಲೀಸರು ಬಂಧಿಸಿದ್ದಾರೆ.
ಕೊಯಮತ್ತೂರಿನ ಖಾಸಗಿ ಶಾಲೆಯೊಂದರ ಮೃತ ಪಿಯುಸಿ (12ನೇ ತರಗತಿ) ವಿದ್ಯಾರ್ಥಿನಿಯಲ್ಲದೇ, ಮತ್ತಿಬ್ಬರು ವಿದ್ಯಾರ್ಥಿನಿಯರಿಗೂ ಲೈಂಗಿಕ ಕೊಟ್ಟಿರುವುದನ್ನು ಸೂಚಿಸುವ ವಾಟ್ಸಾಪ್ ಚಾಟ್ಗಳು ಮತ್ತು ಆಡಿಯೋ ಸಂಭಾಷಣೆ ಮಂಗಳವಾರ ವೈರಲ್ ಆಗಿತ್ತು ಇದಾದ ಬಳಿಕ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಮಾತ್ರವಲ್ಲದೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಸಂಬಂಧಪಟ್ಟ ಶಿಕ್ಷಕನ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.
ಕೋವಿಡ್ ಸಂದರ್ಭದಲ್ಲಿ ಈ ಶಿಕ್ಷಕ ವಿಶೇಷ ತರಗತಿ ಇದೆ ಎಂದು ಹೇಳಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಬಗ್ಗೆ ವಿದ್ಯಾರ್ಥಿನಿ ಪ್ರಾಂಶುಪಾಲರಿಗೆ ದೂರನ್ನು ನೀಡಿದ್ದರು ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ .ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣದಲ್ಲಿ ಇನ್ನೂ ಇಬ್ಬರ ಪಾತ್ರವಿದೆ ಎಂಬ ಶಂಕೆ ಮೂಡಿಸಿದ್ದು, ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ. ಸಂತ್ರಸ್ತ ವಿದ್ಯಾರ್ಥಿನಿ ದೂರು ನೀಡಿದಾಗ ಸೂಕ್ತ ಕ್ರಮ ಕೈಗೊಳ್ಳದ ಶಾಲೆಯ ಮುಖ್ಯೋಪಾಧ್ಯಾಯಿನಿಯನ್ನು ಕೂಡ ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು
108MP ಕ್ಯಾಮೆರಾದ ಗ್ಯಾಲಕ್ಸಿ F54 5G ಅನಾವರಣ ಮಾಡಿದ ಸ್ಯಾಮ್ಸಂಗ್